ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸಲು "ಬಿಜೆಪಿ ಪಿತೂರಿ" ಸ್ಪಷ್ಟವಾಗಿದೆ. ಹೀಗಾಗಿ ರಾಜ್ಯಪಾಲ ಕಲ್ರಾಜ್ ಮಿಶ್ರಾ ಶೀಘ್ರದಲ್ಲೇ ರಾಜ್ಯ ವಿಧಾನಸಭೆ ಸಭೆ ಅಧಿವೇಶನ ಕರೆಯಬೇಕು. ದೇಶದ ಜನರ ಎದುರು ಸತ್ಯವನ್ನು ಬಟಾಬಯಲು ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ರಾಜಸ್ತಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಬಂಡಾಯ ನಾಯಕ ಸಚಿನ್ ಪೈಲಟ್ ತೆರೆಯ ಮರೆಯಲ್ಲೇ ಸಾಕಷ್ಟು ಕೆಲಸ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಸಚಿನ್ ಪೈಲಟ್ ಬಣದ 18 ಶಾಸಕರು ನಾಪತ್ತೆಯಾಗಿದ್ದಾರೆ. ಹೀಗಾಗಿ ಪೈಲಟ್ ಬಣದ ಶಾಸಕರನ್ನು ಹೊರತುಪಡಿಸಿ ಶಾಸಕರ ಸಭೆ ಕರೆದು ತಮಗೆ 102 ಶಾಸಕರ ಬೆಂಬಲ ಇದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಸಾಬೀತುಪಡಿಸಿದ್ದರು. ಇದೇ ಕಾರಣಕ್ಕೆ ಅಧಿವೇಶನ ಕರೆದು ತಮಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲರ ಬಳಿ ಮನವಿ ಮಾಡಿದ್ದರು.
ಆದರೆ, ರಾಜ್ಯಪಾಲ ಕಲ್ರಾಜ್ ಮಿಶ್ರಾ ಈವರೆಗೆ ಅಧಿವೇಶನ ಕರೆಯಲು ಮುಂದಾಗಿಲ್ಲ. ಅಲ್ಲದೆ, ಕೇಂದ್ರ ಸರ್ಕಾರದ ನಾಯಕರು ಅಧಿವೇಶನ ಕರೆಯದಂತೆ ರಾಜ್ಯಪಾಲರನ್ನು ತಾಕೀತು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಇದರ ಬೆನ್ನಿಗೆ ರಾಹುಲ್ ಗಾಂಧಿ ಶೀಘ್ರದಲ್ಲೇ ರಾಜಸ್ಥಾನದ ಅಧಿವೇಶ ಕರೆಯಬೇಕು ಎಂದು ಒತ್ತಾಯಿಸಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.
देश में संविधान और क़ानून का शासन है।
सरकारें जनता के बहुमत से बनती व चलती हैं।
राजस्थान सरकार गिराने का भाजपाई षड्यंत्र साफ़ है। ये राजस्थान के आठ करोड़ लोगों का अपमान है।
राज्यपाल महोदय को विधान सभा सत्र बुलाना चाहिए ताकि सच्चाई देश के सामने आए।#ArrogantBJP
— Rahul Gandhi (@RahulGandhi) July 24, 2020
ಇದನ್ನೂ ಓದಿ : ದಿಲ್ಲಿ ಪೋಸ್ಟ್ | ಹಳ್ಳಿಹಕ್ಕಿ ಗುಟುರಿಗೆ ನಡುಗಿದ ಯಡಿಯೂರಪ್ಪ, ಸಾಹಿತಿಗಳಿಗೂ ರಾಜ್ಯಪಾಲರಾಗುವ ಆಸೆ!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ