HOME » NEWS » National-international » RAHUL GANDHI WAS GAVE GREEN SIGNAL FOR ACCEPT AICC PRESIDENT POST RHHSN

ಯಾವುದೇ ಜವಾಬ್ದಾರಿ ಹೊರಲು ಸಿದ್ಧ ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷರಾಗಲು ಗ್ರೀನ್ ಸಿಗ್ನಲ್ ನೀಡಿದ ರಾಹುಲ್ ಗಾಂಧಿ

2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಹೀನಾಯವಾಗಿ ಸೋತಿತು. ಸೋಲಿನ ಜವಾಬ್ದಾರಿ ಹೊತ್ತು ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಹುಲ್ ಗಾಂಧಿ ಅವರೇ ಮತ್ತೆ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಯಾರು ಎಷ್ಟೇ ಬಲವಂತ ಮಾಡಿದ್ದರೂ ರಾಹುಲ್ ಗಾಂಧಿ ಅವರು ಮಾತ್ರ ಒಪ್ಪಿಕೊಂಡಿರಲಿಲ್ಲ. ಇದೀಗ ಮತ್ತೆ ಅಧ್ಯಕ್ಷರಾಗಲು ಹಸಿರು ನಿಶಾನೆ ತೋರಿದ್ದಾರೆ.

news18-kannada
Updated:December 19, 2020, 4:22 PM IST
ಯಾವುದೇ ಜವಾಬ್ದಾರಿ ಹೊರಲು ಸಿದ್ಧ ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷರಾಗಲು ಗ್ರೀನ್ ಸಿಗ್ನಲ್ ನೀಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
  • Share this:
ನವದೆಹಲಿ; ಲೋಕಸಭೆ ಚುನಾವಣೆ ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಆ ಬಳಿಕ ಸೋನಿಯಾ ಗಾಂಧಿ ಅವರೇ ಎಐಸಿಸಿಗೆ ಮಧ್ಯಂತರ ಅಧ್ಯಕ್ಷರಾಗಿದ್ದಾರೆ. ಇದೀಗ ಮತ್ತೆ ಆ ಸ್ಥಾನವನ್ನು ಅಲಂಕರಿಸಲು ರಾಹುಲ್ ಗಾಂಧಿ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ನ್ಯೂಸ್ 18 ಗೆ ಖಚಿತಪಡಿಸಿವೆ.

ಸೋನಿಯಾ ಗಾಂಧಿ ಅವರಿಗೆ ಪಕ್ಷದ 23 ಮುಖಂಡರು ಪತ್ರ ಬರೆದಿದ್ದರು. ಇಂದು ಜಿ-23 ನಾಯಕರೊಂದಿಗೆ ಸೋನಿಯಾ ಗಾಂಧಿ ಅವರು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಅಧ್ಯಕ್ಷತೆ ಹುದ್ದೆ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: Sonia Gandhi: 23 ರೆಬೆಲ್ ನಾಯಕರೊಂದಿಗೆ ಸೋನಿಯಾ ಗಾಂಧಿ ಇಂದು ಮಹತ್ವದ ಸಭೆ

 ಸಭೆಯಲ್ಲಿ ರಾಹುಲ್ ಗಾಂಧಿ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕೆಂಬ ಅಭಿಪ್ರಾಯವನ್ನು ನಾಯಕರು ವ್ಯಕ್ತಪಡಿಸಿದ್ದರು. ಹಿರಿಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ. ಯಾವುದೇ ಜವಾಬ್ದಾರಿ ಹೊರಲು ಸಿದ್ಧ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅಧ್ಯಕ್ಷ ಗಾದಿ ಏರುವುದಾಗಿ ರಾಹುಲ್ ಗಾಂಧಿ ಪರೋಕ್ಷವಾಗಿ ಹೇಳಿದ್ದಾರೆ ಎಂದು ನ್ಯೂಸ್18 ಜಾಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಮೂಲಗಳಿಂದ ಮಾಹಿತಿ ನೀಡಿವೆ.

2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಹೀನಾಯವಾಗಿ ಸೋತಿತು. ಸೋಲಿನ ಜವಾಬ್ದಾರಿ ಹೊತ್ತು ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಹುಲ್ ಗಾಂಧಿ ಅವರೇ ಮತ್ತೆ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಯಾರು ಎಷ್ಟೇ ಬಲವಂತ ಮಾಡಿದ್ದರೂ ರಾಹುಲ್ ಗಾಂಧಿ ಅವರು ಮಾತ್ರ ಒಪ್ಪಿಕೊಂಡಿರಲಿಲ್ಲ. ಇದೀಗ ಮತ್ತೆ ಅಧ್ಯಕ್ಷರಾಗಲು ಹಸಿರು ನಿಶಾನೆ ತೋರಿದ್ದಾರೆ.
Published by: HR Ramesh
First published: December 19, 2020, 4:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories