Crime News| Home Work ಮಾಡದಿದ್ದಕ್ಕೆ ಶಿಕ್ಷೆ; 7ನೇ ತರಗತಿ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ!

Class 7 Student Beaten to Death by Teacher; ರಾಜಸ್ತಾನದ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಾಸ್ರಾ ಘಟನೆಯನ್ನು ಖಂಡಿಸಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ಖಾಸಗಿ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಜೈಪುರ ಅಕ್ಟೋಬರ್​ 21): ಶಾಲೆಯಲ್ಲಿ ಮಕ್ಕಳ ಮೇಲೆ ದೈಹಕ ಹಲ್ಲೆ ನಡೆಸಬಾರದು ಮತ್ತು ಮಕ್ಕಳನ್ನು ಹೊಡೆಯಬಾರದು ಎಂಬ ಕಾನೂನು ಇದೆ. ಆದರೂ, ಸಹ ಆಗಿಂದಾಗ್ಗೆ ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಹಲವಾರು ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಆದರೆ, ರಾಜಸ್ತಾನದಲ್ಲಿ (Rajasthan) ಬೇರೆಯದೇ ರೀತಿಯ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಚುರು (Churu District) ಎಂಬ ಜಿಲ್ಲೆಯ ಖಾಸಗಿ ಶಾಲೆಯಲ್ಲಿ (Private School) 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು (Student Beaten to Death by Teacher) ಹೋಮ್​ ವರ್ಕ್​ (Home Work) ಮಾಡಿಲ್ಲ ಎಂಬ ಕಾರಣಕ್ಕೆ ಥಳಿಸಿ ಕೊಲೆ (Murder) ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  ಬುಧವಾರ ಈ ದುರಂತ ಘಟನೆ ನಡೆದಿದ್ದು, ಹೋಂವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ್ದಾರೆ. ತೀವ್ರ ಥಳಿಕ್ಕೆ ಒಳಗಾದ ಬಾಲಕ ಶಾಲೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಪೊಲೀಸರು ಆರೋಪಿ ಶಿಕ್ಷಕ ಮನೋಜ್ (35)ರನ್ನು ಬಂಧಿಸಿದ್ದಾರೆ. ಮೃತ ವಿದ್ಯಾರ್ಥಿಯನ್ನು 13 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ.

  ರಾಜಸ್ತಾನದ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಾಸ್ರಾ ಘಟನೆಯನ್ನು ಖಂಡಿಸಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ಖಾಸಗಿ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ.

  ಇದನ್ನೂ ಓದಿ: Child Kidnap : ಮನೆಗೆಲಸದವನಿಂದಲೇ ಮಗು ಕಿಡ್ನಾಪ್​: 1 ಕೋಟಿ ಹಣಕ್ಕೆ ಡಿಮ್ಯಾಂಡ್​, ಮೂರೇ ಗಂಟೆಯಲ್ಲೇ ಲಾಕ್​!

  "13 ವರ್ಷದ ಗಣೇಶ್ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಹೋಂವರ್ಕ್ ಪೂರ್ಣಗೊಳಿಸದ ಕಾರಣ ಶಿಕ್ಷಕರು ತೀವ್ರವಾಗಿ ಥಳಿಸಿದ್ದಾರೆ. ಥಳಿಸಿದ ನಂತರ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ" ಎಂದು ಸಾಲಸಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.

  ಇದನ್ನೂ ಓದಿ: 43 Naxals surrender in Chhattisgarh| ಛತ್ತೀಸ್​ಗಢದ ಸುಕ್ಮಾದಲ್ಲಿ 43 ನಕ್ಸಲರು ಶರಣಾಗತಿ!

  ಬಾಲಕನ ತಂದೆ ಶಿಕ್ಷಕನ ವಿರುದ್ಧ ದುರು ದಾಖಲಿಸಿದ್ದಾರೆ. ಈ ಪ್ರಕರಣ ಕೂಲಂಕಷವಾಗಿ ತನಿಖೆ ಮಾಡುವವರೆಗೂ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  Published by:MAshok Kumar
  First published: