HOME » NEWS » National-international » RAJASTHAN POLITICAL CRISIS IT RAIDS AT CM GEHLOTS CLOSE CONFIDANTS RMD

ರಾಜಸ್ಥಾನ ರಾಜಕೀಯ ಹೈಡ್ರಾಮಾ: ಸಿಎಂ ಅಶೋಕ್ ಗೆಹ್ಲೋಟ್ ಆಪ್ತರ ಮನೆ ಮೇಲೆ ಐಟಿ ದಾಳಿ

ರಾಜಸ್ಥಾನ ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಗೆಹ್ಲೋಟ್​ ಆಪ್ತರೆನಿಸಿಕೊಂಡಿರುವ ಧರ್ಮೇಂದ್ರ ಸಿಂಗ್​ ರಾಥೋಡ್​ ಹಾಗೂ ರಾಜೀವ್​ ಅರೋರಾ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

news18-kannada
Updated:July 13, 2020, 11:53 AM IST
ರಾಜಸ್ಥಾನ ರಾಜಕೀಯ ಹೈಡ್ರಾಮಾ: ಸಿಎಂ ಅಶೋಕ್ ಗೆಹ್ಲೋಟ್ ಆಪ್ತರ ಮನೆ ಮೇಲೆ ಐಟಿ ದಾಳಿ
ಅಶೋಕ್ ಗೆಹ್ಲೋಟ್
  • Share this:
ಜೈಪುರ (ಜು.13): ರಾಜಸ್ಥಾನ ರಾಜಕೀಯ ಹೈಡ್ರಾಮ ಕ್ಷಣ ಕ್ಷಣಕ್ಕೂ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ನ ಪ್ರಭಾವಿ ನಾಯಕ ಸಚಿನ್​ ಪೈಲಟ್​ ಪಕ್ಷ ತೊರೆಯಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈ ಮಧ್ಯೆ ಸರ್ಕಾರ ಉಳಿಸಿಕೊಳ್ಳಲು ಸಿಎಂ ಅಶೋಕ್​ ಗೆಹ್ಲೋಟ್​ ಸರ್ಕಸ್​ ನಡೆಸುತ್ತಿರುವ ಬೆನ್ನಲ್ಲೇ ಅವರ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆದಿದೆ.

ರಾಜಸ್ಥಾನ ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಗೆಹ್ಲೋಟ್​ ಆಪ್ತರೆನಿಸಿಕೊಂಡಿರುವ ಧರ್ಮೇಂದ್ರ ಸಿಂಗ್​ ರಾಥೋಡ್​ ಹಾಗೂ ರಾಜೀವ್​ ಅರೋರಾ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿವೇಳೆ ಕೆಲ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಐಟಿ ದಾಳಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ಇದು ಬಿಜೆಪಿ ಕುತಂತ್ರ ಎಂದು ಆರೋಪಿಸಿದೆ. ಅಲ್ಲದೆ, ಕುತಂತ್ರದಿಂದ ಸರ್ಕಾರ ಹೆಣೆಯಲು ಪ್ರಯತ್ನಿಸುತ್ತಿದೆ ಎನ್ನುವ ಆರೋಪವನ್ನೂ ಮಾಡಿದೆ.

ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿತ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪಕ್ಷಾಂತರ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸರ್ಕಾರ ಉರುಳಲಿದೆ ಎಂದು ವರದಿಯಾಗಿತ್ತು. ಈ ವರದಿಯ ಬೆನ್ನಿಗೆ ಕಾಂಗ್ರೆಸ್ ಇಂದು ಜೈಪುರದಲ್ಲಿ ಎಲ್ಲಾ ಶಾಸಕರ ಸಭೆ ಕರೆದಿತ್ತು. ಇದರ ಬೆನ್ನಿಗೆ ಇಂದು ಸ್ಪಷ್ಟನೆ ನೀಡಿರುವ ಸಚಿನ್ ಪೈಲಟ್ ತಾವು ಯಾವುದೇ ಪಕ್ಷಕ್ಕೆ ಸೇರುತ್ತಿಲ್ಲ ಎಂಬುದನ್ನು ತಿಳಿಸಿದ್ದಾರೆ.
Youtube Video

ಸಚಿನ್ ಪೈಲಟ್ ಶನಿವಾರ ತಮ್ಮ ಆಪ್ತ ಶಾಸಕರು ಹಾಗೂ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ಜೊತೆ ಸಭೆ ನಡೆಸಿದ್ದರು. ಸಭೆ ವೇಳೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ನೇರವಾಗಿ ಕಿಡಿಕಾರಿದ್ದರು. ಅಶೋಕ್ ನನ್ನನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಾರೆ. ನನಗೆ ಅನ್ಯಾಯ ಆಗುವುದನ್ನು ಎಂದಿಗೂ ಸಹಿಸೆನು ಎಂದು ಸಚಿನ್ ಆರೋಪಿಸಿದ್ದರು ಎನ್ನಲಾಗಿದೆ.
Published by: Rajesh Duggumane
First published: July 13, 2020, 11:43 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories