HOME » NEWS » National-international » RAJASTHAN POLITICAL CRISIS SACHIN PILOT AND TEAM URGING CM ASHOK GEHLOT TO STEP DOWN AS POLITICAL CRISIS CONTINUES MAK

Rajasthan Political Crisis: ರಾಜಸ್ಥಾನದಲ್ಲಿ ಮುಗಿಯದ ರಾಜಕೀಯ ಹೈಡ್ರಾಮಾ; ಸಿಎಂ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿನ್ ಪೈಲಟ್‌ ಬಣ

ಕಾಂಗ್ರೆಸ್‌ ಪಕ್ಷದ ಒಳಗೆ ಇಂತಹ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದ್ದಂತೆ, ಅತ್ತ ಕಾಂಗ್ರೆಸ್‌ ಬಿಕ್ಕಟ್ಟಿನಲ್ಲಿ ಬಿಜೆಪಿಯೂ ಲಾಭ ಹುಡುಕಲು ಮುಂದಾಗಿದೆ. ಹೀಗಾಗಿ ರಾಜಸ್ಥಾನದಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನೆಲೆಗೆ ಬರುತ್ತದೆಯೇ? ಎಂಬ ಅನುಮಾನ ಎಲ್ಲರನ್ನೂ ಕಾಡಿದೆ.

news18-kannada
Updated:July 14, 2020, 7:53 AM IST
Rajasthan Political Crisis: ರಾಜಸ್ಥಾನದಲ್ಲಿ ಮುಗಿಯದ ರಾಜಕೀಯ ಹೈಡ್ರಾಮಾ; ಸಿಎಂ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿನ್ ಪೈಲಟ್‌ ಬಣ
ಅಶೋಕ್ ಗೆಹ್ಲೋಟ್
  • Share this:
ಜೈಪುರ (ಜುಲೈ 14); ರಾಜಸ್ಥಾನದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಮುಗಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಸಚಿನ್‌ ಪೈಲಟ್‌ ಬಂಡಾಯದ ನಂತರ ನಿನ್ನೆ ಜೈಪುರದಲ್ಲಿ ಕಾಂಗ್ರೆಸ್‌ ಶಾಸಕರ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ 102 ಶಾಸಕರು ಸರ್ಕಾರಕ್ಕೆ ತಮ್ಮ ಬೆಂಬಲ ಸೂಚಿಸಿ ಸಹಿ ಹಾಕಿದ್ದಾರೆ. ಅಲ್ಲಿಂದ ಎಲ್ಲರನ್ನೂ ರೆಸಾರ್ಟ್‌‌ಗೆ ಶಿಫ್ಟ್‌ ಮಾಡಲಾಗಿದೆ. ಆದರೆ, ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಚಿನ್‌ ಪೈಲಟ್‌ ಬಣದ ಶಾಸಕರು ಸಿಎಂ ಬದಲಾಗಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ.

ಜೈಪುರದಲ್ಲಿ ನಿನ್ನೆ ನಡೆದ ಸಿಎಲ್​ಪಿ ಸಭೆಯಲ್ಲಿ ಬಂಡಾಯಗಾರ ಸಚಿನ್ ಪೈಲಟ್​ಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿತ್ತು. ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಮಾಡುವ ಮೂಲಕ ಸಚಿನ್ ಪೈಲಟ್​ಗೆ ಪರೋಕ್ಷ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಸಭೆಯ ನಂತರವೇ ಎಲ್ಲಾ ಶಾಸಕರನ್ನೂ ಜೈಪುರದ ಫೇರ್​ಮೌಂಟ್ ಹೋಟೆಲ್​ಗೆ ಶಿಫ್ಟ್​ ಮಾಡಲಾಗಿತ್ತು.

ಆದರೆ, ನಿನ್ನೆ ನಡೆದ ಶಾಸಕರ ಸಭೆಯಲ್ಲಿ ಸಚಿನ್‌ ಪೈಲಟ್‌ ಬೆಂಬಲಿತ ಶಾಸಕರು ಪಾಲ್ಗೊಂಡಿರಲಿಲ್ಲ. ಇಂದು ಜೈಪುರದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ನಾಯಕರು ಇಂದು ಮತ್ತೊಂದು ಸುತ್ತಿನ ಶಾಸಕರ ಸಭೆಯನ್ನು ಆಯೋಜಿಸಲಾಗಿದೆ. ಆದರೆ, ಈ ಸಭೆಗೂ ಸಚಿನ್ ಪೈಲಟ್‌ ಬೆಂಬಲಿತ ಶಾಸಕರು ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಸಿಎಂ ಬದಲಾಗಲೇಬೇಕು ಎಂಬ ತಮ್ಮ ನಿಲುವಿನ ಪಟ್ಟು ಸಡಿಲಿಸುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ.

ನಡೆಯುತ್ತಾ ಕುದುರೇ ವ್ಯಾಪಾರ?:

ಕಾಂಗ್ರೆಸ್‌ ನಾಯಕರು ಶಾಸಕರ ಸಭೆ ಮುಗಿಯುತ್ತಿದ್ದಂತೆ ಎಲ್ಲಾ ಶಾಸಕರನ್ನೂ ರೆಸಾರ್ಟ್‌‌ಗೆ ಶಿಫ್ಟ್‌ ಮಾಡಿದ್ದಾರೆ. ಮತ್ತೊಂದೆಡೆ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ತಾವು ಬಿಜೆಪಿ ಜೊತೆಗೆ ಸೇರುವುದಿಲ್ಲ ಎಂದರೂ ಅವರ ನಡೆ ಇನ್ನೂ ನಿಗೂಢವಾಗಿಯೇ ಇದೆ. ಅಲ್ಲದೆ, ಈ ನಡುವೆ ಸಚಿನ್‌ ಪೈಲಟ್‌ ತಮ್ಮ ಬೆಂಬಲಿತ ಶಾಸಕರ ಜೊತೆಗೆ ಪಕ್ಷದಿಂದ ಹೊರ ನಡೆದು ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಇದನ್ನೂ ಓದಿ : Rajasthan Political Crisis: ರಾಜಸ್ಥಾನದಲ್ಲಿ ರೆಸಾರ್ಟ್​ ರಾಜಕೀಯ; ಸಿಎಲ್​ಪಿ ಸಭೆ ಬೆನ್ನಲ್ಲೇ ಕಾಂಗ್ರೆಸ್​ ಶಾಸಕರು ಹೋಟೆಲ್​ಗೆ ಶಿಫ್ಟ್​


Youtube Video
ಕಾಂಗ್ರೆಸ್‌ ಪಕ್ಷದ ಒಳಗೆ ಇಂತಹ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದ್ದಂತೆ, ಅತ್ತ ಕಾಂಗ್ರೆಸ್‌ ಬಿಕ್ಕಟ್ಟಿನಲ್ಲಿ ಬಿಜೆಪಿಯೂ ಲಾಭ ಹುಡುಕಲು ಮುಂದಾಗಿದೆ. ಹೀಗಾಗಿ ರಾಜಸ್ಥಾನದಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನೆಲೆಗೆ ಬರುತ್ತದೆಯೇ? ಎಂಬ ಅನುಮಾನ ಎಲ್ಲರನ್ನೂ ಕಾಡಿದೆ. ಈ ಎಲ್ಲಾ ಆಗುಹೋಗುಗಳನ್ನು ಗಮನಿಸಿದರೆ ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಸದ್ಯಕ್ಕಂತು ಮುಗಿಯುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ.
Published by: MAshok Kumar
First published: July 14, 2020, 7:53 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories