Ram Mandir Bhumi Pujan: ರಾಮ ಜನ್ಮಭೂಮಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ; ಶಿಲಾನ್ಯಾಸಕ್ಕೆ ಕ್ಷಣಗಣನೆ

PM Modi in Ayodhya Ram mandir: ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ ತೆರಳಿದರು.

news18-kannada
Updated:August 5, 2020, 12:42 PM IST
Ram Mandir Bhumi Pujan: ರಾಮ ಜನ್ಮಭೂಮಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ; ಶಿಲಾನ್ಯಾಸಕ್ಕೆ ಕ್ಷಣಗಣನೆ
ನರೇಂದ್ರ ಮೋದಿ
  • Share this:
ಅಯೋಧ್ಯೆ (ಜು.5): ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು. ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್​ ಎನ್ನುವ ಘೋಷಣೆಗಳು ಮೊಳಗಿದವು.



ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಸಚಿವೆ ಸ್ಮೃತಿ ಇರಾನಿ  ಸೇರಿ ಸಾಕಷ್ಟು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಮೋದಿ ಕಾರ್ಯಕ್ರಮ ಪಟ್ಟಿ

  • 10.30ಕ್ಕೆ ಲಖನೌ ವಿಮಾನ ನಿಲ್ದಾಣ ತಲುಪಿದ ಮೋದಿ

  • 11.30ಕ್ಕೆ ಅಯೋಧ್ಯೆಯ ಸಾಕೇತ್ ಕಾಲನಿಗೆ ಆಗಮನ
  • 11.45ಕ್ಕೆ ಹನುಮಾನ್​ಗಡಿಯಲ್ಲಿ ಪ್ರಾರ್ಥನೆ

  • ಹನುಮಾನ್ ಪೂಜೆ ಬಳಿಕ ಸರಯೂ ನದಿಗೆ ಪೂಜೆ

  • ಮಧ್ಯಾಹ್ನ 12 ಗಂಟೆಗೆ ರಾಮಜನ್ಮಭೂಮಿಗೆ ಆಗಮನ

  • 12.30ಕ್ಕೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗಿ

  • 12.40ಕ್ಕೆ ರಾಮಮಂದಿರಕ್ಕೆ ಅಡಿಗಲ್ಲು ಹಾಕಲಿರುವ ಮೋದಿ

  • ಶಿಲಾನ್ಯಾಸದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿ

  • 1.10ಕ್ಕೆ ರಾಮಜನ್ಮಭೂಮಿ ಸಂಕೀರ್ಣ ವೀಕ್ಷಿಸಲಿರುವ ಮೋದಿ

  • ಶ್ರೀರಾಮ ಮಂದಿರ ತೀರ್ಥ ಕ್ಷೇತ್ರ ‌ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲದಾಸ್ ಮತ್ತಿತರ ಜೊತೆ ಸಮಾಲೋಚನೆ

  • ಮಧ್ಯಾಹ್ನ 02:05ಕ್ಕೆ ಅಯೋಧ್ಯೆಯಿಂದ ಹೆಲಿಕಾಪ್ಟರ್ ಮೂಲಕ ಲಕ್ನೋಗೆ ಪ್ರಯಾಣ


ಬಿಗಿ ಭದ್ರತೆ:

ಅಯೋಧ್ಯೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗುತ್ತಿದೆ. ಇದರ ಜೊತೆ ಗಣ್ಯಾತಿ ಗಣ್ಯರು ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಈ ಭಾಗದಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ಅಯೋಧ್ಯೆಗೆ ಆಗಮಿಸುವ ಎಲ್ಲ ವಾಹನಗಳನ್ನು ಪರೀಕ್ಷಿಸಿ ಒಳಗೆ ಬಿಡಲಾಗುತ್ತಿದೆ. ಇನ್ನು, ಅಯೋಧ್ಯೆಯಾದ್ಯಂತ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಸಂತರಿಗೆ ಕೊರೋನಾ:

ರಾಮ ಜನ್ಮಭೂಮಿಯಲ್ಲಿರುವ ಸಂತರಿಗೆ ಒಬ್ಬರಾದ ಮೇಲೆ ಒಬ್ಬರಿಗೆ ಕೊರೋನಾ ಅಂಟುತ್ತಿದೆ. ಸೋಮವಾರ ಒಬ್ಬರಿಗೆ ಕೊರೋನಾ ಪಾಸಿಟಿವ್​ ಬಂದ ಬೆನ್ನಲ್ಲೇ ಇಂದು ಮತ್ತೋರ್ವ ಸಂತರಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಇದು ಸಾಕಷ್ಟು ಆತಂಕ ಮೂಡಿಸಿದೆ.
Published by: Rajesh Duggumane
First published: August 5, 2020, 11:35 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading