Ram Mandir: ರಾಮ ಮಂದಿರ ಶೈಲಿಯಲ್ಲೇ ಅಯೋಧ್ಯೆ ರೈಲ್ವೆ ನಿಲ್ದಾಣ ನಿರ್ಮಾಣ; 2021ಕ್ಕೆ ಕಾಮಗಾರಿ ಪೂರ್ಣ

ಈಗಾಗಲೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಮ ಮಂದಿರ ನಿರ್ಮಾಣವಾದ ನಂತರದಲ್ಲಿ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ರೈಲ್ವೆ ನಿಲ್ದಾಣ ಸಂಪೂರ್ಣವಾಗಿ ರಾಮ ಮಂದಿರ ಶೈಲಿಯಲ್ಲೇ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

news18-kannada
Updated:August 3, 2020, 10:02 AM IST
Ram Mandir: ರಾಮ ಮಂದಿರ ಶೈಲಿಯಲ್ಲೇ ಅಯೋಧ್ಯೆ ರೈಲ್ವೆ ನಿಲ್ದಾಣ ನಿರ್ಮಾಣ; 2021ಕ್ಕೆ ಕಾಮಗಾರಿ ಪೂರ್ಣ
ರೈಲ್ವೆ ನಿಲ್ದಾಣದ ಮಾಡೆಲ್
  • Share this:
ಅಯೋಧ್ಯೆ (ಜು.3): ದಶಕಗಳ ರಾಮ ಜನ್ಮಭೂಮಿ ವಿವಾದಕ್ಕೆ ತೆರೆ ಬಿದ್ದಿದೆ. ಈ ಬೆನ್ನಲ್ಲೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ವಿಶೇಷ ಎಂದರೆ ಅಯೋಧ್ಯೆ ರೈಲ್ವೆ ನಿಲ್ದಾಣವನ್ನು ರಾಮ ಮಂದಿರ ಶೈಲಿಯಲ್ಲೇ ನಿರ್ಮಾಣ ಮಾಡಲು ರೈಲ್ವೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಈ ಹೊಸ ಯೊಜನೆಯ ಮೊದಲ ಹಂತ 2021ಕ್ಕೆ ಪೂರ್ಣಗೊಳ್ಳಲಿದೆ.

ಪ್ಲಾಟ್ ಫಾರ್ಮ್ ಸಂಖ್ಯೆ 1 ಹಾಗೂ 2, ನಿಲ್ದಾಣದ ಮೆಟ್ಟಿಲು, ಜನರ ಓಡಾಟಕ್ಕೆ ದಾರಿ ಹಾಗೂ ನಿಲ್ದಾಣದ ಆವರಣ ನಿರ್ಮಾಣ ಕಾರ್ಯ ಮೊದಲ ಹಂತದಲ್ಲಿ ಪೂರ್ಣಗೊಳ್ಳಲಿದೆ. ಮೊದಲ ಹಂತದ ಕಾಮಗಾರಿ ಮುಂದಿನ ವರ್ಷ ಪೂರ್ಣಗೊಳ್ಳಲಿದೆ. 2017-18ರಲ್ಲಿ ಈ ಯೋಜನೆಗೆ ಅನುಮೋದನೆ ಸಿಕ್ಕಿದ್ದು, 104 ಕೋಟಿ ರೂಪಾಯಿ ವೆಚ್ಛ ತಗುಲಲಿದೆ.

ಇದನ್ನೂ ಓದಿ: ರಾಜ್ಯಪಾಲರು, ಡಿಸಿಎಂ ಸೇರಿ ಹಲವರನ್ನು ಭೇಟಿಯಾಗಿದ್ದ ಸಿಎಂ ಯಡಿಯೂರಪ್ಪ; ಟ್ರಾವೆಲ್ ಹಿಸ್ಟರಿ ಬಗ್ಗೆ ಇಲ್ಲಿದೆ ವಿವರ

ಇನ್ನು, ಈ ನಿಲ್ದಾಣದ ನಿರ್ಮಾಣದ ವೇಳೆ ಹೆಚ್ಚು ಹೆಚ್ಚು ಮೂಲಸೌಕರ್ಯಕ್ಕೆ ಒತ್ತು ನೀಡಲಾಗುತ್ತಿದೆ. ಅಲ್ಲದೆ, ಈ ನಿಲ್ದಾಣದಲ್ಲಿ ಎಲ್ಲ ರೀತಿಯ ವ್ಯವಸ್ಥೆ ಇರಲಿದೆ. ರೈಲ್ವೆ ನಿಲ್ದಾಣದಲ್ಲಿ ಹವಾ ನಿಯಂತ್ರಿತ ಶೌಚಾಲಯಗಳು, ವೈಫೈ ವ್ಯವಸ್ಥೆ, ಹೆಚ್ಚು ಟಿಕೆಟ್ ಕೌಂಟರ್ಗಳು ಇದರಲ್ಲಿ ಪ್ರಮುಖವಾದವು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಮ ಮಂದಿರ ನಿರ್ಮಾಣವಾದ ನಂತರದಲ್ಲಿ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ರೈಲ್ವೆ ನಿಲ್ದಾಣ ಸಂಪೂರ್ಣವಾಗಿ ರಾಮ ಮಂದಿರ ಶೈಲಿಯಲ್ಲೇ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published by: Rajesh Duggumane
First published: August 3, 2020, 9:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading