ರಾಮ ಮಂದಿರ ಟ್ರಸ್ಟ್​ಗೆ ಪದಾಧಿಕಾರಿಗಳ ಆಯ್ಕೆ, ಪ್ರಧಾನಿ ಮಾಜಿ ಮುಖ್ಯ ಕಾರ್ಯದರ್ಶಿ ಮೇಲ್ವಿಚಾರಣೆಯಲ್ಲಿ ದೇಗುಲ ನಿರ್ಮಾಣ

15 ಮಂದಿ ಸದಸ್ಯರಿರುವ ಟ್ರಸ್ಟ್​ ರಚಿಸುವುದಾಗಿ ಪ್ರಧಾನಿ ಮೋದಿ ಅವರು ಫೆ.5ರಂದು ಸಂಸತ್ತಿನಲ್ಲಿ ಘೋಷಿಸಿದ್ದರು. ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನಲ್ಲಿ ಏಳು ಸದಸ್ಯರು, ಐವರು ನಾಮನಿರ್ದೇಶನ ಸದಸ್ಯರು ಹಾಗೂ ಮೂವರು ಟ್ರಸ್ಟಿಗಳು ಇರಲಿದ್ದಾರೆ.

ಅಯೋಧ್ಯೆ ರಾಮ ಮಂದಿರ ಟ್ರಸ್ಟ್​ ಸಭೆಯಲ್ಲಿ ಸೇರಿದ್ದ ಪದಾಧಿಕಾರಿಗಳು.

ಅಯೋಧ್ಯೆ ರಾಮ ಮಂದಿರ ಟ್ರಸ್ಟ್​ ಸಭೆಯಲ್ಲಿ ಸೇರಿದ್ದ ಪದಾಧಿಕಾರಿಗಳು.

  • Share this:
ನವದೆಹಲಿ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್​ನ ಅಧ್ಯಕ್ಷರಾಗಿ ಮಹಾಂತ್ ಗೋಪಾಲ್ ದಾಸ್ ಹಾಗೂ ಚಂಪತ್ ರೈ ಪ್ರಧಾನ ಕಾರ್ಯದರ್ಶಿಯಾಗಿ ಬುಧವಾರ ಆಯ್ಕೆಯಾಗಿದ್ದಾರೆ.

ಟ್ರಸ್ಟ್ ಪದಾಧಿಕಾರಿಗಳ ಆಯ್ಕೆ ಸಂಬಂಧ ಇಂದು ಹಿರಿಯ ವಕೀಲ ಕೆ.ಪರಸಾನ ಅವರ ಮನೆಯಲ್ಲಿ ಸಭೆ ನಡೆಸಲಾಯಿತು. ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾಜಿ ಪ್ರಿನ್ಸಿಪಲ್ ಸೆಕ್ರೆಟರಿ ನೃಪೇಂದ್ರ ಮಿಶ್ರಾ ಅವರನ್ನು ಮಂದಿರ ನಿರ್ಮಾಣ  ಸಮಿತಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ​   ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ. ಪುಣೆಯ ಸ್ವಾಮಿ ಗೋವಿಂದ ದೇವ್ ಗಿರಿ ಅವರು ಟ್ರಸ್ಟ್​ ಖಜಾಂಚಿಯಾಗಿ ನೇಮಕ ಮಾಡಲಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲಿ ಮುಗಿಸುವ ಕಾರ್ಯ ವಿಧಾನ ಸಭೆಯ ಉದ್ದೇಶವಾಗಿತ್ತು. ಅಷ್ಟೇ ಅಲ್ಲದೇ, ರಾಮ ಮಂದಿರ ನಿರ್ಮಾಣಕ್ಕೆ ದಾನದ ರೂಪದಲ್ಲಿ ಬರುವ ಕಾಣಿಕೆಯನ್ನು ಸಂಗ್ರಹಿಸಿ ಇಡಲು ಅಯೋಧ್ಯೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ತೆರೆಯಲು ನಿರ್ಧರಿಸಲಾಗಿದೆ ಎಂದು ಚಂಪರ್ ರೈ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ರಚಿಸಿರುವ ಈ ಟ್ರಸ್ಟ್​  ಸಭೆಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಗ್ಯಾನೇಶ್ ಕುಮಾರ್, ಉತ್ತರ ಪ್ರದೇಶ ಸರ್ಕಾರದ ಪ್ರತಿನಿಧಿಯಾಗಿ ಅವಿನಾಶ್ ಅವಾಸ್ತಿ ಹಾಗೂ ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಕುಮಾರ್ ಝಾ ಸಭೆಯಲ್ಲಿ ಹಾಜರಿದ್ದರು.

ಇದನ್ನು ಓದಿ: ಭಾರತೀಯ ಸೇನೆಯ ಕಾರ್ಯಾಚರಣೆ; ಜಮ್ಮು-ಕಾಶ್ಮೀರದ ತ್ರಾಲ್​ನಲ್ಲಿ ಮೂವರು ಉಗ್ರರ ಹತ್ಯೆ

15 ಮಂದಿ ಸದಸ್ಯರಿರುವ ಟ್ರಸ್ಟ್​ ರಚಿಸುವುದಾಗಿ ಪ್ರಧಾನಿ ಮೋದಿ ಅವರು ಫೆ.5ರಂದು ಸಂಸತ್ತಿನಲ್ಲಿ ಘೋಷಿಸಿದ್ದರು. ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನಲ್ಲಿ ಏಳು ಸದಸ್ಯರು, ಐವರು ನಾಮನಿರ್ದೇಶನ ಸದಸ್ಯರು ಹಾಗೂ ಮೂವರು ಟ್ರಸ್ಟಿಗಳು ಇರಲಿದ್ದಾರೆ. ಅಯೋಧ್ಯೆ ಪ್ರಕರಣದ ತೀರ್ಪಿನ ನಂತರ ಸುಪ್ರೀಂಕೋರ್ಟ್​ ಸೂಚನೆ ಮೇರೆಗೆ ಟ್ರಸ್ಟ್ ರಚಿಸಲಾಗಿದೆ.

 
First published: