Rape Case: ರೈಲಿನ ಶೌಚಾಲಯದಲ್ಲಿ ಗೆಳತಿ ಮೇಲೆ ಅತ್ಯಾಚಾರ ಎಸಗಿದ ಯುವಕ

ಹುಡುಗ - ಹುಡುಗಿ ಇಬ್ಬರೂ ಒಟ್ಟಿಗೆ ಮುಂಬೈ ಕಾಲೇಜಿನಲ್ಲಿ ಓದುತ್ತಿದ್ದರು. ಇಬ್ಬರೂ ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದರು ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ. ಈ ಹಿನ್ನೆಲೆ ಯುವತಿ ಬಳಿ ಸುಮಾರು 2 ಲಕ್ಷ ರೂ. ಹಣವಿತ್ತು ಎಂದು ತಿಳಿದುಬಂದಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ಥಾಣೆ(ಫೆ.15): ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸಾರ್ವಜನಿಕ ಸಾರಿಗೆಗಳಲ್ಲೂ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ರೈಲಿನಲ್ಲೇ ರೇಪ್‌ನಂತ ಹೀನ ಕೃತ್ಯ ನಡೆದಿದೆ.  19 ವರ್ಷದ ಯುವಕ ತನ್ನ ಗೆಳತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

  ಗೋರಖ್‌ಪುರ ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದಲ್ಲಿ ಯುವಕ ತನ್ನ ಗೆಳತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಥಾಣೆ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

  ಆರೋಪಿಯು ಹುಡುಗಿಯನ್ನು ರೈಲು ಶೌಚಾಲಯಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

  COVID Vaccine: ಇಂದಿನಿಂದ ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನ್ ಎರಡನೇ ಡೋಸ್ ಆರಂಭ

  "ಹುಡುಗಿ ಮತ್ತು ಹುಡುಗ ಒಟ್ಟಿಗೆ ಪ್ರಯಾಣಿಸುತ್ತಿದ್ದರು. ಆತ ಅವಳನ್ನು ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಮುಂಬೈನ ಕುರಾರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ನಂತರ ಅದನ್ನು ನಮಗೆ ವರ್ಗಾಯಿಸಲಾಗಿದೆ" ಎಂದು ಥಾಣೆ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಉಲ್ಲೇಖಿಸಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

  ಹುಡುಗ - ಹುಡುಗಿ ಇಬ್ಬರೂ ಒಟ್ಟಿಗೆ ಮುಂಬೈ ಕಾಲೇಜಿನಲ್ಲಿ ಓದುತ್ತಿದ್ದರು. ಇಬ್ಬರೂ ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದರು ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ. ಈ ಹಿನ್ನೆಲೆ ಯುವತಿ ಬಳಿ ಸುಮಾರು 2 ಲಕ್ಷ ರೂ. ಹಣವಿತ್ತು ಎಂದು ತಿಳಿದುಬಂದಿದೆ. ಗೆಳತಿಯನ್ನು ರೈಲಿನ ಶೌಚಾಲಯದಲ್ಲಿ ಅತ್ಯಾಚಾರ ಮಾಡಿದ ಬಳಿಕ ಬಾಲಕ ರೈಲಿನಿಂದ ಕೆಳಗಿಳಿದಿದ್ದಾನೆ. ರೈಲಿನ ಟಿಕೆಟ್‌ ಕಲೆಕ್ಟರ್‌ ಟಿಕೆಟ್‌ ಕೇಳಲು ಬಂದಾಗ ಯುವತಿ ಸಹ ಕೆಳಗಿಳಿದು ಆರೋಪಿಯನ್ನು ಕರೆದಿದ್ದಾಳೆ. ಆದರೆ, ಆರೋಪಿ ಬಾಲಕಿಗೆ, ''ನೀನು ರೈಲಿನಲ್ಲಿ ಹೋಗುತ್ತಿರು. ನಾನು ಜಾಯಿನ್ ಆಗುತ್ತೇನೆ'' ಎಂದು ಆರೋಪಿ ಹೇಳಿದ್ದು, ನಂತರ ಆತ ರೈಲು ಹತ್ತಲೇ ಇಲ್ಲ ಎನ್ನಲಾಗಿದೆ.

  ನಂತರ ಬಾಲಕಿಯ ಪೋಷಕರು ಕರೆ ಮಾಡಿ ಮುಂಬೈನ ಕುರಾರ್ ಪೊಲೀಸ್‌ ಠಾಣೆಗೆ ಕರೆ ಮಾಡಿ ದೂರು ನೀಡಿದ್ದು, ಬಳಿಕ ಅವರು ಥಾಣೆ ಪೊಲೀಸರಿಗೆ ದೂರು ವರ್ಗಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಘಟನೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
  Published by:Latha CG
  First published: