ಸೀತಾಪುರ (ಏ. 23): ದೇಶಾದ್ಯಂತ ಕೊರೋನಾ ವೈರಸ್ನಿಂದಾಗಿ ಲಾಕ್ಡೌನ್ ಘೋಷಿಸಲಾಗಿದೆ. ಜನರು ಹೊರಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಬುಧವಾರ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಅಪಹರಿಸಿ, ಅತ್ಯಾಚಾರ ಎಸಗಿರುವ ಇಬ್ಬರು ಮತ್ತು ಅದಕ್ಕೆ ಸಹಕರಿಸಿದ ನಾಲ್ವರು ಸೇರಿ ಒಟ್ಟು 6 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಯಾರಿಗೂ ಕಾಣದಂತಿದ್ದ ಶಾಲೆಯ ಕಟ್ಟಡದೊಳಗೆ 13 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋದ ಯುವಕರು ಅಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ನಂತರ ಆ ದುಷ್ಟರಿಂದ ತಪ್ಪಿಸಿಕೊಂಡು ಆಕೆ ಮನೆ ಸೇರಿ, ವಿಷಯ ತಿಳಿಸಿದ್ದಾಳೆ ಎಂದು ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಎಲ್.ಆರ್. ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಕೊರೋನಾ ಇಂದು- ನಾಳೆ ಹೋಗುವ ವೈರಸ್ ಅಲ್ಲ, ತುಂಬ ಸಮಯ ನಮ್ಮೊಂದಿಗೆ ಇರಲಿದೆ; WHO ಎಚ್ಚರಿಕೆ
ಸಂತ್ರಸ್ತೆಯ ಮನೆಯ ಪಕ್ಕದಲ್ಲೇ ವಾಸವಾಗಿದ್ದ ಇಬ್ಬರು ಯುವಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರ ನಾಲ್ವರು ಸ್ನೇಹಿತರು ಆ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದಾರೆ. ನಂತರ ಅವರು ಕೂಡ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಈ ವಿಷಯವನ್ನು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. 6 ಜನರನ್ನು ಬಂಧಿಸಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ: ಫೇಸ್ಬುಕ್ ಜೊತೆಗಿನ ಒಪ್ಪಂದದ ನಂತರ ಏಷ್ಯಾದ ಶ್ರೀಮಂತ ವ್ಯಕ್ತಿ ಎನಿಸಿಕೊಂಡ ಮುಖೇಶ್ ಅಂಬಾನಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ