ಮುಂಬೈ(ಸೆ.11): ವಾಣಿಜ್ಯ ನಗರಿ ಮುಂಬೈನಲ್ಲಿ ನಿರ್ಭಯಾ ಪ್ರಕರಣದ ಮಾದರಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಕಾಮುಕ ಮಹಿಳೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾನೆ. ಸದ್ಯ ಸಂತ್ರಸ್ತೆಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಮುಂಬೈನ ಸಕಿ ನಕ ಪ್ರದೇಶದ ಖೈರಾನಿ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
30 ವರ್ಷದ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಇದೊಂದು ಪೈಶಾಚಿಕ ಕೃತ್ಯವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಸೆರೆ ಹಿಡಿಯಲು ಪೊಲೀಸರು ಈಗಾಗಲೇ ತನಿಖೆ ಶುರು ಮಾಡಿದ್ದಾರೆ.
ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಕಂಟ್ರೋಲ್ ರೂಮ್ಗೆ ಮಧ್ಯರಾತ್ರಿ 3.30ಕ್ಕೆ ಫೋನ್ ಕರೆಯೊಂದು ಬಂತು. ‘‘ಸಕಿ ನಕ ಪ್ರದೇಶದ ಖೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಳೆ‘‘ ಎಂದು ಅನಾಮಿಕ ಧ್ವನಿಯು ಹೇಳಿತು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:Gold Price Today: ಹಬ್ಬದ ಬಳಿಕ ಏರಿಕೆ ಕಂಡ ಚಿನ್ನ; ಬೆಂಗಳೂರಿನಲ್ಲಿ ಇಂದಿನ ರೇಟ್ ಹೀಗಿದೆ ನೋಡಿ
ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಘಟ್ಕೋಪರ್ನ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದರು. ಮಹಿಳೆಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376(ಅತ್ಯಾಚಾರಕ್ಕೆ ಶಿಕ್ಷೆ) ಹಾಗೂ 307(ಕೊಲೆ ಯತ್ನ) ಪ್ರಕರಣದಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಬಂಧಿತನನ್ನು 42 ವರ್ಷದ ಮೋಹನ್ ಚೌಹಾಣ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ‘‘ಮಹಿಳೆಯು ಕ್ರೂರ ರೀತಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ ಹಾಗೂ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ನ್ನು ಹಾಕಲಾಗಿದೆ. ರಸ್ತೆ ಬದಿ ನಿಂತಿದ್ದ ಟೆಂಪೋದಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು‘‘ ಎಂದು ತಿಳಿದು ಬಂದಿದೆ.
2012ರಲ್ಲಿ ಡಿಸೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಿರ್ಭಯಾ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಮುಕರ ಗುಂಪೊಂದು ಚಲಿಸುತ್ತಿದ್ದ ಬಸ್ನಲ್ಲಿ ಯುವತಿಯನ್ನು ಬಹಳ ಕ್ರೂರವಾಗಿ ಅತ್ಯಾಚಾರ ಮಾಡಿತ್ತು. ಬಹಳ ದಿನಗಳವರೆಗೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಕೊನೆಗೆ ಸಾವನ್ನಪ್ಪಿದ್ದಳು.
ಇದನ್ನೂ ಓದಿ:Belagavi: MESಗೆ ಮತ್ತೊಂದು ಶಾಕ್ ಕೊಡಲು ಬಿಜೆಪಿ ಪ್ಲ್ಯಾನ್; ಮೇಯರ್, ಉಪಮೇಯರ್ ಆಯ್ಕೆಯಲ್ಲಿ ಜಾಣ ನಡೆ! ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ