ಉನ್ನಾವೋ ಅತ್ಯಾಚಾರ ಪ್ರಕರಣ; ಜೀವಾವಧಿ ಶಿಕ್ಷೆ ಬೆನ್ನಲ್ಲೇ ಕುಲದೀಪ್ ಶಾಸಕತ್ವ ಅಧಿಕೃತವಾಗಿ ರದ್ದು

Unnao Rape Case: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಒಇ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗಾರ್​​ಗೆ ದೆಹಲಿ ಹೈಕೋರ್ಟ್​ ಜೀವಾವಧಿ ಶಿಕ್ಷೆ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಶಾಸಕತ್ವವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ.

ಉನ್ನಾವ್​ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್​ ಸಿಂಗ್​ ಸೆಂಗಾರ್

ಉನ್ನಾವ್​ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್​ ಸಿಂಗ್​ ಸೆಂಗಾರ್

  • Share this:
ಲಕ್ನೋ (ಫೆ. 25): ಉತ್ತರ ಪ್ರದೇಶದ ಉನ್ನಾವೋದಲ್ಲಿ 2017ರಲ್ಲಿ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗಾರ್​​ಗೆ ದೆಹಲಿ ಹೈಕೋರ್ಟ್​ ಜೀವಾವಧಿ ಶಿಕ್ಷೆ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಕುಲದೀಪ್ ಸಿಂಗ್ ಸೆಂಗಾರ್​ ಅವರ ಉತ್ತರ ಪ್ರದೇಶದ ವಿಧಾನಸಭಾ ಸದಸ್ಯತ್ವವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ.

ಉತ್ತರ ಪ್ರದೇಶದ ವಿಧಾನಸಭಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ ಈ ಬಗ್ಗೆ ನೋಟಿಸ್ ನೀಡಿದ್ದಾರೆ. 2019ರ ಡಿಸೆಂಬರ್​ 20ರಂದು ಕುಲದೀಪ್ ಸಿಂಗ್​ಗೆ ಜೀವಾವಧಿ ಶಿಕ್ಷೆಯಾಗಿತ್ತು. ಅಂದಿನಿಂದಲೇ ಜಾರಿಗೆ ಬರುವಂತೆ ಕುಲದೀಪ್ ಸಿಂಗ್ ಸೆಂಗಾರ್​ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ. ಅವರು ಪ್ರತಿನಿಧಿಸಿ, ಗೆದ್ದಿದ್ದ ಬಂಗೆರ್ಮಾವ್ ವಿಧಾನಸಭಾ ಕ್ಷೇತ್ರ ತೆರವಾಗಿದ್ದು, ಅಲ್ಲಿಗೆ ಉಪಚುನಾವಣೆ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4 ವರ್ಷದ ಮಗನಿಂದಲೇ ಬಯಲಾಯ್ತು ಅಮ್ಮನ ಅಕ್ರಮ ಸಂಬಂಧ; ಆಮೇಲೆ ನಡೆದಿದ್ದು ದೊಡ್ಡ ದುರಂತ!

ಉತ್ತರ ಪ್ರದೇಶದ ಬಂಗೆರ್ಮಾವ್​ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ 4 ಬಾರಿ ಶಾಸಕರಾಗಿರುವ ಕುಲದೀಪ್ ಸೆಂಗಾರ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದ್ದರಿಂದ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿತ್ತು. ಇದೀಗ ಅಧಿಕೃತವಾಗಿ ಅವರ ವಿಧಾನಸಭಾ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ.

ಏನಿದು ಪ್ರಕರಣ?:
ಉತ್ತರ ಪ್ರದೇಶದ ಉನ್ನಾವೋ ಯುವತಿ ಮೇಲೆ ಜೂನ್​ 4 2017ರಲ್ಲಿ ಅತ್ಯಾಚಾರ ನಡೆದಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಜೊತೆಗೆ ಇನ್ನೂ ನಾಲ್ವರ ಹೆಸರು ಕೇಳಿಬಂದಿತ್ತು. ಆ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು. ಕಳೆದ ವರ್ಷ ಯುವತಿ ಕೊಲೆಗೆ ಯತ್ನ ನಡೆದಿತ್ತು. ವಕೀಲರ ಜತೆ ಕೋರ್ಟ್‌ಗೆ ಹೋಗುತ್ತಿದ್ದಾಗ ಆಕೆಯ ಕಾರ್​ಗೆ ಅಪಘಾತ ಮಾಡಿಸಲಾಗಿತ್ತು. ಈ ಅಪಘಾತದಲ್ಲಿ ವಕೀಲ ಮತ್ತು ಆಕೆಯ ಚಿಕ್ಕಪ್ಪ ಮೃತಪಟ್ಟಿದ್ದರು.

ಇದನ್ನೂ ಓದಿ: ಪಾಕ್​ ಪರ ಘೋಷಣೆ; ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಇಂದು ಹುಬ್ಬಳ್ಳಿ ಪೊಲೀಸರ ವಶಕ್ಕೆ

2018ರಿಂದಲೂ ಸಿಬಿಐ ಈ ಪ್ರಕರಣದ ತನಿಖೆ ನಡೆಸಿತ್ತು. ಆದರೆ, ರೇಪ್ ಸಂತ್ರಸ್ತೆಯ ಕುಟುಂಬದವರನ್ನು ನಾಶ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿತು. ಸಂತ್ರಸ್ತೆ ಮತ್ತಾಕೆಯ ಕುಟುಂಬ ಸದಸ್ಯರನ್ನು ವಾಯುಮಾರ್ಗದ ಮೂಲಕ ಉತ್ತರ ಪ್ರದೇಶದಿಂದ ಹೊರಗೆ ಕರೆ ತರಬೇಕೆಂದು ಸುಪ್ರೀಂ ಕೋರ್ಟ್ ಹೇಳಿತು.  ನಂತರ ಈ ಪ್ರಕರಣದ ತನಿಖೆ ನಡೆಸಿದ್ದ ದೆಹಲಿ ಹೈಕೋರ್ಟ್​ ಕುಲದೀಪ್ ಸಿಂಗ್ ಸೆಂಗಾರ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತು. ಹಾಗೇ, ಸಂತ್ರಸ್ತ ಯುವತಿಯ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ನೀಡಲು ಸೂಚಿಸಿತು.

 
First published: