• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Rashtrapatni Row: ರಾಷ್ಟ್ರಪತಿಯನ್ನು ರಾಷ್ಟ್ರಪತ್ನಿ ಎಂದ ಕಾಂಗ್ರೆಸ್ ಸಂಸದ; ಕಾಂಗ್ರೆಸ್ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು

Rashtrapatni Row: ರಾಷ್ಟ್ರಪತಿಯನ್ನು ರಾಷ್ಟ್ರಪತ್ನಿ ಎಂದ ಕಾಂಗ್ರೆಸ್ ಸಂಸದ; ಕಾಂಗ್ರೆಸ್ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು

ಸ್ಮೃತಿ ಇರಾನಿ ಮತ್ತು ಸೋನಿಯಾ ಗಾಂಧಿ

ಸ್ಮೃತಿ ಇರಾನಿ ಮತ್ತು ಸೋನಿಯಾ ಗಾಂಧಿ

ಈಕುರಿತು ಕಾಂಗ್ರೆಸ್​ನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಈ ಕುರಿತು ಕ್ಷಮೆ ಯಾಚಿಸಬೇಕು ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.

  • Share this:

ದೆಹಲಿ: ದೇಶದ ಹೊಸ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ (Adhir Ranjan Chowdhury) ರಾಷ್ಟ್ರಪತ್ನಿ (Rashtrapatni Row) ಎಂದು ಉಲ್ಲೇಖಿಸಿದ್ದನ್ನು ಖಂಡಿಸಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಲೋಕಸಭೆಯಲ್ಲಿ ಆರಂಭಿಸಿದೆ. ಲೋಕಸಭೆಯಲ್ಲಿ (Lok Sabha) ಈಕುರಿತು ಕಾಂಗ್ರೆಸ್​ನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವೆ ಸ್ಮೃತಿ ಇರಾನಿ (Sonia Gandhi vs Smriti Irani) ಕಾಂಗ್ರೆಸ್ ಈ ಕುರಿತು ಕ್ಷಮೆ ಯಾಚಿಸಬೇಕು ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸೋನಿಯಾ ಗಾಂಧಿ "ಆದಿವಾಸಿ ವಿರೋಧಿ, ದಲಿತ ವಿರೋಧಿ ಮತ್ತು ಮಹಿಳಾ ವಿರೋಧಿ" ಎಂದೂ ಕೇಂದ್ರ ಸಚಿವೆ ಆರೋಪ ಮಾಡಿದ್ದಾರೆ.


ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಸ್ಮೃತಿ ಇರಾನಿ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. "ದೇಶದ ಅತ್ಯುನ್ನತ ಸಾಂವಿಧಾನಿಕ ಕಚೇರಿಯಲ್ಲಿ ಮಹಿಳೆಯೊಬ್ಬರಿಗೆ ಅವಮಾನವಾಗುವುದನ್ನು ಸೋನಿಯಾ ಗಾಂಧಿ ಅನುಮೋದಿಸಿದ್ದಾರೆ" ಎಂದು ಸ್ಮೃತಿ ಇರಾನಿ ಆಕ್ರೋಶ ವ್ಯಕ್ತಪಡಿಸಿದರು.


ಸೋನಿಯಾ ಗಾಂಧಿ ಪ್ರತಿಕ್ರಿಯೆ ಏನು?
ಈ ಆರೋಪದ ಕುರಿತು ಲೋಕಸಭೆಯ ಹೊರಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಈಗಾಗಲೇ ಕ್ಷಮೆ ಕೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.


ರಾಜ್ಯಸಭೆಯಲ್ಲೂ ಪ್ರತಿಭಟನೆ
ಇತ್ತ ರಾಜ್ಯಸಭೆಯಲ್ಲೂ ಕಾಂಗ್ರೆಸ್ ವಿರುದ್ಧ ಬಿಜೆಪಿ ಸದಸ್ಯರು ಮುಗಿಬಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಕ್ಷಮೆಯಾಚನೆಗೆ ಆಗ್ರಹ ವ್ಯಕ್ತಪಡಿಸಿದರು. 


ಇದನ್ನೂ ಓದಿ: Draupadi Murmu: ʼದ್ರೌಪದಿ ನನ್ನ ಮೂಲ ಹೆಸರಲ್ಲ! ಹಾಗಿದ್ರೆ ಹೊಸ ರಾಷ್ಟ್ರಪತಿಯವರ ನಿಜವಾದ ಹೆಸರೇನು?


ಕಾಂಗ್ರೆಸ್ ಅಧ್ಯಕ್ಷರು ಪಕ್ಷದ ಪರವಾಗಿ ಕ್ಷಮೆಯಾಚಿಸಲು ಆಗ್ರಹ
ಇತ್ತೀಚಿಗಷ್ಟೇ ಕೋವಿಡ್‌ನಿಂದ ಚೇತರಿಸಿಕೊಂಡಿರುವ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಅಲ್ಲದೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಇದನ್ನು "ಉದ್ದೇಶಪೂರ್ವಕ ಲೈಂಗಿಕ ನಿಂದನೆ" ಎಂದು ಕರೆದರು. ಕಾಂಗ್ರೆಸ್ ಅಧ್ಯಕ್ಷರು ಪಕ್ಷದ ಪರವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಈ ಮೂಲಕ ಬಿಜೆಪಿ ಕಾಂಗ್ರೆಸ್ ವಿರುದ್ಧ ಟೀಕೆಗಳ ಸುರಿಮಳೆ ಸುರಿಸುತ್ತಿದೆ.


ಮೊದಲಿಂದಲೂ ಆರೋಪ ಮಾಡಲಾಗುತ್ತಿದೆ ಎಂದ ಸಚಿವೆ
ಭಾರತದ ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರ ಹೆಸರನ್ನು ಅಭ್ಯರ್ಥಿಯಾಗಿ ಘೋಷಿಸಿದಾಗಿನಿಂದ  ಕಾಂಗ್ರೆಸ್ ಪಕ್ಷವು ದುರುದ್ದೇಶದಿಂದ ಅವರನ್ನು ಗುರಿ ಮಾಡಿಕೊಂಡಿದೆ.  ಹೊಸ ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರು ಈಗ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾದ ನಂತರವೂ ಅವರ ಮೇಲೆ ದಾಳಿಗಳು ನಡೆಯುವುದು ನಿಂತಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪ ಮಾಡಿದ್ದಾರೆ.


ಇದನ್ನೂ ಓದಿ: Sonia Answer: ED ಎದುರು ಒಂದೇ ಉತ್ತರ ನೀಡಿದ ತಾಯಿ-ಮಗ! ಮೊದಲೇ ಮಾತನಾಡಿಕೊಂಡಿದ್ರಾ ಸೋನಿಯಾ, ರಾಹುಲ್?


ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಕ್ಷಮೆಯಾಚನೆ
ಆದರೆ ಇತ್ತ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ  ಈಹೇಳಿಕೆಯ ಕುರಿತು ಕ್ಷಮೆ ಯಾಚಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.  ಬೆಲೆ ಏರಿಕೆ, ಜಿಎಸ್‌ಟಿ, ಅಗ್ನಿಪಥ ಯೋಜನೆ, ನಿರುದ್ಯೋಗ ಮತ್ತು ಇತರ ವಿಷಯಗಳ ಕುರಿತು ನಿರ್ಣಾಯಕ ಚರ್ಚೆಗಳಿಂದ ಬಿಜೆಪಿ ವಿಚಲಿತವಾಗಿದೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ. ಇಂತಹ ಮಹತ್ವದ ವಿಷಯಗಳಿಂದ ತಪ್ಪಿಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ನಾಯಕರ ತಪ್ಪುಗಳನ್ನು ಹುಡುಕುತ್ತಿದೆ ಎಂದು ಆರೋಪ ಮಾಡಿದ್ದಾರೆ.

top videos
    First published: