ನವದೆಹಲಿ (ಅ.25): ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ತಮ್ಮ ಟ್ವೀಟರ್ ಖಾತೆಯಲ್ಲಿ ಅವರು ದೃಢಪಡಿಸಿದ್ದಾರೆ. ಕೊರೋನಾ ಸೋಂಕಿನ ಯಾವುದೇ ಗುಣಲಕ್ಷಣಗಳು ಕಂಡು ಬಂದಿಲ್ಲ. ಆದರೆ, ಮನೆಯಲ್ಲಿಯೇ ಪ್ರತ್ಯೇಕತ ವಾಸಕ್ಕೆ ಮುಂದಾಗಿದ್ದು, ಕೆಲಸ ಮುಂದುವರೆಸುವುದಾಗಿ ಅವರು ತಿಳಿಸಿದ್ದಾರೆ. ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ವರದಿ ಪಾಸಿಟಿವ್ ಬಂದಿದೆ. ಆದರೆ ಯಾವುದೇ ಲಕ್ಷಣಗಳು ನನಗೆ ಕಂಡು ಬಂದಿಲ್ಲ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಒಳಗಾದವರು ಎಚ್ಚರಿಕೆಯಿಂದ ಇರುವಂತೆ ಇದೇ ವೇಳೆ ಅವರು ತಿಳಿಸಿದ್ದಾರೆ.
I have tested COVID-19 positive. Asymptomatic.Feeling very much alright.Have alerted those who came in contact in recent days.Will continue to work from isolation. Work in RBI will go on normally. I am in touch with all Dy. Govs and other officers through VC and telephone.
— Shaktikanta Das (@DasShaktikanta) October 25, 2020
ಪ್ರಸ್ತುತ ಆರ್ಬಿಐನಲ್ಲಿ ನಾಲ್ಕು ಉಪ ಗವರ್ನರ್ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಬಿಪಿ ಕನುಂಗೊ, ಎಂಕೆ ಜೈನ್, ಎಂಡಿ ಪತ್ರ ಮತ್ತು ಎಂ ರಾಜೇಶ್ವರ್ ರಾವ್, ಶಕ್ತಿಕಾಂತ್ ದಾಸ್ ಚೇತರಿಕೆ ಕಾಣುವವರೆಗೂ ಕಾರ್ಯನಿರ್ವಹಿಸಲಿದ್ದಾರೆ.
ದೇಶದಲ್ಲಿ ಇದುವರೆಗೂ 70 ಲಕ್ಷದ 80 ಸಾವಿರ ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಕೊರೋನಾ ಸೋಂಕು ಪ್ರಕರಣ ಹೆಚ್ಚಿರುವ ಜಗತ್ತಿನ ಎರಡನೇ ರಾಷ್ಟ್ರ ಭಾರತವಾಗಿದೆ. ಇದುವರೆಗೂ ದೇಶದಲ್ಲಿ ಸೋಂಕಿನಿಂದಾಗಿ 1,18,534 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ