Reserve Bank of India| ನಿಯಮ ಉಲ್ಲಂಘಿಸಿದ್ದಕ್ಕೆ 14 ಬ್ಯಾಂಕುಗಳಿಗೆ ದಂಡ ವಿಧಿಸಿದ RBI

ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಮೇಲೆ ಅತೀ ಹೆಚ್ಚು 2 ಕೋಟಿ ರೂಪಾಯಿ ದಂಡವನ್ನು ಆರ್‌ಬಿಐ ವಿಧಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೇಲೆ ಅತೀ ಕಡಿಮೆ 0.5 ಕೋಟಿ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್.

ಭಾರತೀಯ ರಿಸರ್ವ್ ಬ್ಯಾಂಕ್.

  • Share this:
ನವ ದೆಹಲಿ (ಜುಲೈ 08); ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ತಾವು ನೀಡಿದಂತಹ ನಿಯಮಗಳನ್ನು ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕುಗಳನ್ನು ಒಳಗೊಂಡಂತೆ ಸುಮಾರು 14 ಬ್ಯಾಂಕುಗಳು ಉಲ್ಲಂಘನೆ ಮಾಡಿರುವದಕ್ಕೆ ಈ ಬ್ಯಾಂಕುಗಳಿಗೆ ಭಾರಿ ಮೊತ್ತದ ದಂಡವನ್ನು ವಿಧಿಸಿದೆ. ಭಾರಿ ಮೊತ್ತದ ದಂಡವು 0.5 ಕೋಟಿ ರೂಪಾಯಿ ಯಿಂದ ಸುಮಾರು 2 ಕೋಟಿ ವರೆಗೆ ಇದೆ. ಇತ್ತೀಚೆಗೆ ಆರ್‌ಬಿಐ ಯು ದೊಡ್ಡ ಗ್ರೂಪ್ ನ ಕಂಪನಿಗಳ ಅಕೌಂಟ್ ಗಳನ್ನೂ ಪರಿಶೀಲಿಸಿದಾಗ ಈ 14 ಬ್ಯಾಂಕುಗಳು ಆರ್‌ಬಿಐ ನೀಡಿದಂತಹ ಒಂದು  ಅಥವಾ ಒಂದಕ್ಕಿಂತ ಹೆಚ್ಚಿನ ನಿಯಾಮಾವಳಿಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ.

ಕಂಪನಿಗಳ ಅಕೌಂಟ್ ಗಳನ್ನು ಪರಿಶೀಲಿಸಿದಾಗ ಬ್ಯಾಂಕುಗಳು ಬ್ಯಾಂಕಿನ ನಿಯಂತ್ರಣ ಕಾಯ್ದೆ 1949 ರ ನಿಬಂಧನೆಗಳನ್ನು ಮತ್ತು ನಿಯಮಾವಳಿಗಳನ್ನು ಗಾಳಿಗೆ ತೂರಿ ಅವುಗಳನ್ನು ಉಲ್ಲಂಘಿಸಿದಕ್ಕೆ ಆರ್‌ಬಿಐ ಈ ಎಲ್ಲಾ ಬ್ಯಾಂಕುಗಳಿಗೆ ದಂಡ ವಿಧಿಸಿ ನೋಟಿಸ್ ಗಳನ್ನೂ ಸಹ ಅವರಿಗೆ ಕಳುಹಿಸಿದ್ದಾರೆ. ದಂಡ ವಿಧಿಸಲಾಗಿರುವಂತಹ ಬ್ಯಾಂಕುಗಳಿಂದ ಬರುವಂತಹ ಪ್ರತ್ಯುತ್ತರಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಮತ್ತು 14 ಬ್ಯಾಂಕುಗಳ ಮೇಲೆ ದಂಡವನ್ನು ವಿಧಿಸುವ ಅಗತ್ಯವಿದೆ ಎಂದು ಆರ್‌ಬಿಐ ತಿಳಿಸಿದೆ.

ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಮೇಲೆ ಅತೀ ಹೆಚ್ಚು 2 ಕೋಟಿ ರೂಪಾಯಿ ದಂಡವನ್ನು ಆರ್‌ಬಿಐ ವಿಧಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೇಲೆ ಅತೀ ಕಡಿಮೆ 0.5 ಕೋಟಿ ರೂಪಾಯಿ ದಂಡವನ್ನು ವಿಧಿಸಿದೆ.  ಇನ್ನುಳಿದಂತಹ 12 ಬ್ಯಾಂಕುಗಳ ಮೇಲೆ ಸಮನಾಗಿ 1 ಕೋಟಿ ರೂಪಾಯಿ ದಂಡವನ್ನು ಆರ್‌ಬಿಐ ವಿಧಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧದ ವಾಗ್ದಾಳಿಯನ್ನು ನಿಲ್ಲಿಸಿ; ಸುವೆಂಧು ಅಧಿಕಾರಿಗೆ ಬಿಜೆಪಿ ಹೈಕಮಾಂಡ್ ಸೂಚನೆ

ಬ್ಯಾಂಕೇತರ ಹಣಕಾಸು ಕಂಪನಿಗಳಿಗೆ ಸಾಲವನ್ನು ನೀಡುವುದರಲ್ಲಿ ಆರ್‌ಬಿಐ ತಿಳಿಸಿದ ನಿಯಮಗಳನ್ನು ಪಾಲಿಸದಿರುವುದರಿಂದ ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳಿಗೆ ಬ್ಯಾಂಕಿನಿಂದ ಹಣಕಾಸು ಒದಗಿಸುವಲ್ಲಿ ಮತ್ತು ಇನ್ನಿತರೇ ಕಾರಣಗಳಲ್ಲಿ ಬ್ಯಾಂಕುಗಳು ನಿಯಮಗಳನ್ನು ಪಾಲಿಸದೆ ಇರುವುದರಿಂದ ಈ ಬ್ಯಾಂಕುಗಳ ಮೇಲೆ ಭಾರಿ ಮೊತ್ತದ ದಂಡವನ್ನು ವಿಧಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ಇದನ್ನೂ ಓದಿ: ಕೆಆರ್​ಎಸ್​ ಡ್ಯಾಂ ಬಿರುಕು ವಿಚಾರ; ಕುಮಾರಸ್ವಾಮಿಗೆ ಸಪೋರ್ಟ್​ ಮಾಡಿ ಸುಮಲತಾಗೆ ಟಾಂಗ್ ಕೊಟ್ಟ ಪ್ರತಾಪ್ ಸಿಂಹ
ಯಾವೆಲ್ಲಾ ಬ್ಯಾಂಕುಗಳ ಮೇಲೆ ಆರ್‌ಬಿಐ ದಂಡ ವಿಧಿಸಿದೆ? ಈ ಕೆಳಗಿನ ಪಟ್ಟಿ ನೋಡಿ: 

ಬಂಧನ್ ಬ್ಯಾಂಕ್ ಲಿಮಿಟೆಡ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಕ್ರೆಡಿಟ್ ಸುಸೇ ಏಜಿ, ಇಂಡಿಯನ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್ ಲಿಮಿಟೆಡ್, ಕರ್ನಾಟಕ ಬ್ಯಾಂಕ್ ಲಿಮಿಟೆಡ್, ಕರೂರ್ ವೈಶ್ಯ ಬ್ಯಾಂಕ್ ಲಿಮಿಟೆಡ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ದ ಜಮ್ಮು ಆಂಡ್ ಕಾಶ್ಮೀರ್ ಬ್ಯಾಂಕ್ ಲಿಮಿಟೆಡ್ ಮತ್ತು ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published: