Jammu and Kashmir: ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿದ ಪ್ರವಾಹ; ಇಬ್ಬರು ಮಕ್ಕಳು ಸಾವು, ಮೂವರು ನಾಪತ್ತೆ!

ಜಮ್ಮು-ಕಾಶ್ಮೀರದ ಕಥುವಾದಲ್ಲಿ ಉಂಟಾದ ಪ್ರವಾಹದಿಂದಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಉಜ್ ನದಿ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿದ ನಂತರ ಮೂರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆ

ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆ

  • Share this:
ದೇಶದ ಹಲವೆಡೆ ವರುಣ ಆರ್ಭಟ ಜೋರಾಗಿದೆ. ಕೆಲ ರಾಜ್ಯಗಳಲ್ಲಿ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಭಾರೀ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಪ್ಪ ಮಳೆ ಸಹವಾಸ ಎಂದು ಅಂದು ಕೊಳ್ಳುತ್ತಿದ್ದಾರೆ. ಇನ್ನು ಜಮ್ಮು-ಕಾಶ್ಮೀರ (Jammu and Kashmir) ದಲ್ಲಿ ಕಥುವಾ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆ (Heavy Rain) ಸುರಿಯುತ್ತಿದೆ. ವರುಣ ಆರ್ಭಟ ಹೆಚ್ಚಾಗಿದ್ದು, ಪ್ರವಾಹ (Flood) ಪರಿಸ್ಥಿತಿ ಉಂಟಾಗಿದೆ. ಕಥುವಾದಲ್ಲಿ ಉಂಟಾದ ಪ್ರವಾಹದಿಂದಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ (2 Children Killed). ಉಜ್ ನದಿ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿದ ನಂತರ ಮೂರು ಜನರು ಕೊಚ್ಚಿಕೊಂಡು (3 People Washed Away) ಹೋಗಿದ್ದಾರೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಪ್ರವಾಹದಿಂದ ಪ್ರಾಣ ಕಳೆದುಕೊಂಡ ಮಕ್ಕಳು
ಜಮ್ಮು ಮತ್ತು ಕಾಶ್ಮೀರದ ಕಥುವಾ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ದುರಂತ ಘಟನೆಯೊಂದರಲ್ಲಿ ಇಬ್ಬರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಕಥುವಾ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ, ಬಿಲ್ಲವರ್ ಪ್ರದೇಶದಲ್ಲಿ ಹಠಾತ್ ಪ್ರವಾಹ ಮತ್ತು ಮಣ್ಣು ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರವಾಹದಲ್ಲಿ ಸಿಲುಕಿ ಮೂವರು ನಾಪತ್ತೆ
ಜಮ್ಮು ಮತ್ತು ಕಾಶ್ಮೀರದ ಕಥುವಾದ ಉಜ್ ನದಿ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿ, ಮೂರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಾಲಾಗೆ ತೆರಳಿದ ಮೂವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ನಾಪತ್ತೆಯಾದವರಿಗಾಗಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ
ನಾಪತ್ತೆಯಾದ ಮೂವರಿಗಾಗಿ, ಜಮ್ಮು ಮತ್ತು ಕಾಶ್ಮೀರದ ವಿಶೇಷ ಕಾರ್ಯಾಚರಣೆ ತಂಡ, ಸಿಆರ್‍ಪಿಎಫ್ ಮತ್ತು ಭಾರತೀಯ ಸೇನೆಯನ್ನು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಆದರೆ, ಹಠಾತ್ ಪ್ರವಾಹದಿಂದಾಗಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ರಕ್ಷಣಾ ಪಡೆಗಳಿಗೆ ಶೋಧ ಮತ್ತು ಪರಿಹಾರ ಕಾರ್ಯಾಚರಣೆ ನಡೆಸುವುದು ಕಷ್ಟಕರವಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ರಾಜ್ಯ ವಿಪತ್ತು ನಿರ್ವಹಣಾ ತಂಡವನ್ನು ಸಹ ಕರೆಯಲಾಗಿದೆ.

ಇದನ್ನೂ ಓದಿ: https://kannada.news18.com/news/state/old-man-dies-after-being-electrocuted-by-rain-in-tumkur-ach-810896.html

ತಗ್ಗು ಪ್ರದೇಶಗಳಲ್ಲಿ ಭಾರೀ ಅನಾಹುತ
ಜಮ್ಮು ಮತ್ತು ಕಾಶ್ಮೀರದ ಕಥುವಾ ಪ್ರದೇಶದ ಮೇಲ್ಭಾಗದಲ್ಲಿ ಭಾರೀ ಮಳೆಯಿಂದಾಗಿ, ತಗ್ಗು ಪ್ರದೇಶಗಳಲ್ಲಿ ಭಾರಿ ಪ್ರವಾಹ ಉಂಟಾಗಿ ಅನಾಹುತಗಳು ಸಂಭವಿಸಿವೆ. ಜನರು ಆತಂಕದಿಂದ ಇದ್ದಾರೆ.

ಕಳೆದ ಸೋಮವಾರವೂ ಪ್ರವಾಹ
ಕಳೆದ ಸೋಮವಾರದಂದು, ಜಮ್ಮು-ಕಾಶ್ಮೀರದ ಕಥುವಾ ಮತ್ತು ಪೂಂಚ್ ಪ್ರದೇಶಗಳಲ್ಲಿ ಹಠಾತ್ ಪ್ರವಾಹದಿಂದ ಒಂಬತ್ತು ಪೆÇಲೀಸರು ಸೇರಿದಂತೆ ಇಪ್ಪತ್ತೊಂದು ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. "ಸೋಮವಾರ ಉಜ್ ನದಿಯಲ್ಲಿ ಹಠಾತ್ ಪ್ರವಾಹದಲ್ಲಿ ಸಿಲುಕಿರುವ ಹಲವಾರು ಜನರ ಮಾಹಿತಿಯ ಮೇರೆಗೆ, ಪೆÇಲೀಸ್ ತಂಡವು ಎಸ್‍ಡಿಆರ್‍ಎಫ್ ಸಿಬ್ಬಂದಿಯೊಂದಿಗೆ 12 ಜನರನ್ನು ರಕ್ಷಿಸಿದೆ" ಎಂದು ಕಥುವಾ ಎಸ್‍ಎಸ್‍ಪಿ ರಮೇಶ್ ಕೊತ್ವಾಲ್ ಹೇಳಿದ್ದರು.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ವರುಣನ ಆರ್ಭಟ; ಇನ್ನೆರಡು ದಿನ ಭಾರೀ ಮಳೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಾನಿ
ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯ ನಡುವೆ, ಹತ್ತಾರು ಮನೆಗಳು ಹಾನಿಗೊಳಗಾಗಿವೆ. ಕೆಲವು ಸೇತುವೆಗಳು ಕೊಚ್ಚಿ ಹೋಗಿವೆ. ಮತ್ತು ವಿವಿಧ ಜಿಲ್ಲೆಗಳಲ್ಲಿ ಹಲವಾರು ವಾಹನಗಳು ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಸಿಲುಕಿಕೊಂಡಿವೆ. ವರದಿಗಳ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಜಮ್ಮು, ಕಥುವಾ, ಪೂಂಚ್, ರಜೌರಿ, ಉಧಂಪುರ್ ಮತ್ತು ರಿಯಾಸಿ ಜಿಲ್ಲೆಗಳಲ್ಲಿ ಮಳೆ, ಹಠಾತ್ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಭಾರೀ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನ ಜೀವನ ಅಸ್ತವ್ಯಸ್ತವಾಗಿದೆ.  ಜನರು ಆತಂಕದಿಂದ ಇದ್ದಾರೆ.
Published by:Savitha Savitha
First published: