ಜಮ್ಮು ಮೇಲಿದ್ದ ನಿರ್ಬಂಧ ತೆರವು, ಕಾಶ್ಮೀರದಲ್ಲಿ ಮುಂದುವರಿಕೆ

ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಮಾನ್ಯತೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ ವಿಧಿಸಲಾಗಿದ್ದ ನಿರ್ಬಂಧವನ್ನು ಹಂತಹಂತವಾಗಿ ತೆಗೆಯಲಾಗುತ್ತಿದೆ.

Seema.R | news18-kannada
Updated:August 14, 2019, 1:04 PM IST
ಜಮ್ಮು ಮೇಲಿದ್ದ ನಿರ್ಬಂಧ ತೆರವು, ಕಾಶ್ಮೀರದಲ್ಲಿ ಮುಂದುವರಿಕೆ
ಸಾಂದರ್ಭಿಕ ಚಿತ್ರ
  • Share this:
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಮಾನ್ಯತೆಯ ಕಲಂ 370 ರದ್ದು ಮಾಡಿದ ಹಿನ್ನೆಲೆ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಸಂಭವಿಸಬಹುದು ಎಂಬ ಮುಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ನಿರ್ಬಂಧವನ್ನು ವಿಧಿಸಲಾಗಿತ್ತು. ಈ ನಿರ್ಬಂಧವನ್ನು ಜಮ್ಮುವಿನಲ್ಲಿ ಸಂಪೂರ್ಣವಾಗಿ ತೆಗೆದು ಹಾಕಲಾಗಿದೆ. ಆದರೆ. ಈ ನಿರ್ಬಂಧ ಕಾಶ್ಮೀರ ಕಣಿವೆಯಲ್ಲಿ ಇನ್ನು ಸ್ವಲ್ಪ ದಿನ ಮುಂದುವರೆಯಲಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಮುನ್ನ ಜಮ್ಮುವಿನಲ್ಲಿ ಹೇರಿದ್ದ ನಿರ್ಬಂಧವನ್ನು ತೆಗೆದುಹಾಕಲಾಗಿದ್ದು, ಕಾಶ್ಮೀರದ ಕೆಲವು ಕಡೆ ಇದು ಮುಂದುವರೆಯಲಿದೆ ಎಂದು ಎಡಿಜಿಪಿ ಮುನಿರ್​ ಖಾನ್​ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ,

ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಕೆಲವು ಸಣ್ಣಪುಟ್ಟ ಗಾಯಗಳಾಗಿರುವ ವರದಿಯಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಪಾಕ್​ ಸೆರೆಯಿಂದ ಬಿಡುಗಡೆಯಾಗಿದ್ದ ವಿಂಗ್​ ಕಮಾಂಡರ್​ ಅಭಿನಂದನ್​​ಗೆ ವೀರ ಚಕ್ರ ಪ್ರಶಸ್ತಿ

ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಮಾನ್ಯತೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ ವಿಧಿಸಲಾಗಿದ್ದ ನಿರ್ಬಂಧವನ್ನು ಹಂತಹಂತವಾಗಿ ತೆಗೆಯಲಾಗುತ್ತಿದೆ.

ಇನ್ನು ವಿಶೇಷ ಮಾನ್ಯತೆ ರದ್ದು ಮಾಡಿದ ಕೇಂದ್ರದ ನಿರ್ಧಾರ ಖಂಡಿಸಿ ರಾಜ್ಯದಲ್ಲಿ ವಿಧಿಸಿರುವ ನಿರ್ಬಂಧ ಪ್ರಶ್ನಿಸಿ ಕಾಂಗ್ರೆಸ್ ಕಾರ್ಯಕರ್ತ ತೆಹ್ಸಿನ್​ ಪೂನವಾಲ ಸುಪ್ರೀ​ ಕೋರ್ಟ್​ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯ ಈ ವಿಷಯದಲ್ಲಿ ನಾವು ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿತು.

First published: August 14, 2019, 1:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading