ಶ್ರೀಮಂತರು, ಪ್ರಬಲರು ನ್ಯಾಯಾಲಯ ಮುನ್ನಡೆಸಲು ಸಾಧ್ಯವಿಲ್ಲ; ಸಿಜೆಐ ಮೇಲಿನ ಆರೋಪ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್​ ಹೇಳಿಕೆ

. ಸಿಜೆಐ ಮೇಲೆ ಹೊರಿಸಲಾಗಿರುವ ಲೈಂಗಿಕ ದೌರ್ಜನ್ಯ ಆರೋಪ ಒಂದು ಷಡ್ಯಂತ್ರ. ರಂಜನ್​ ಗೋಗೊಯ್​ ಅವರ ಮನೆ ಕಚೇರಿಯಲ್ಲೂ ಕೆಲಸ ಮಾಡುತ್ತಿದ್ದ ಕೋರ್ಟ್​ನ ಮಾಜಿ ಸಿಬ್ಬಂದಿ ಮಾಡಿರುವ ಆರೋಪ ಪಿತೂರಿ ಎಂದು ವಕೀಲ ಉತ್ಸವ್ ಬೈನ್ಸ್​ ಹೇಳಿದ್ದರು.

HR Ramesh | news18
Updated:April 25, 2019, 12:10 PM IST
ಶ್ರೀಮಂತರು, ಪ್ರಬಲರು ನ್ಯಾಯಾಲಯ ಮುನ್ನಡೆಸಲು ಸಾಧ್ಯವಿಲ್ಲ; ಸಿಜೆಐ ಮೇಲಿನ ಆರೋಪ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್​ ಹೇಳಿಕೆ
ನ್ಯಾ.ರಂಜನ್ ಗೋಗೊಯ್
  • News18
  • Last Updated: April 25, 2019, 12:10 PM IST
  • Share this:
ನವದೆಹಲಿ: ಕಳೆದ ಮೂರು ನಾಲ್ಕು ವರ್ಷದಿಂದ ಸಂಸ್ಥೆಯ ಮೇಲೆ ವ್ಯವಸ್ಥಿತ ದಾಳಿಯಾಗುತ್ತಿದೆ ಎಂದು ಗುರುವಾರ ಸುಪ್ರೀಂಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯನ್ಯಾಯಮೂರ್ತಿ ರಂಜನ್​ ಗೋಗೊಯ್ ಅವರ ವಿರುದ್ಧ ಮಾಡಿಲಾಗಿರುವ ಲೈಂಗಿಕ ದೌರ್ಜನ್ಯ ಆರೋಪ ಒಂದು ವ್ಯವಸ್ಥಿತ ಪಿತೂರಿ ಹಾಗೂ ಷಡ್ಯಂತ್ರ ಎಂದು ವಕೀಲರು ವಾದ ಮಂಡನೆ ಕೇಳಿದ ಬಳಿಕ ಸುಪ್ರೀಂಕೋರ್ಟ್​ ಹೀಗೆ ಹೇಳಿದೆ.

ಪ್ರಭಾವಶಾಲಿ ಜನರನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಮತ್ತು ದೇಶದ ಸವೋಚ್ಚ ನ್ಯಾಯಾಲಯವನ್ನು ಮುನ್ನಡೆಸಲು ಅವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ನ್ಯಾ.ಅರುಣ್​ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ. ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಮಯ ಈಗ ಬಂದಿದೆ. ಪ್ರಬಲ ಮತ್ತು ಶ್ರೀಮಂತ ವ್ಯಕ್ತಿಗಳು ಸುಪ್ರೀಂಕೋರ್ಟ್​ಅನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಹೇಳುವ ದಿನ ಬಂದಿದೆ. ಅವರು ಬೆಂಕಿಯೊಂದಿಗೆ ಆಟವಾಡುತ್ತಿದ್ದಾರೆ ಎಂದು ಪೀಠ ಹೇಳಿತು.

ಇದನ್ನು ಓದಿ: ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚನೆ

ಪೀಠವು ಇಂದು ಮಧ್ಯಾಹ್ನ 2 ಗಂಟೆಗೆ ಆದೇಶ ನೀಡಲಿದೆ. ಆನಂತರ ಆರೋಪಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಮಿತಿಯು ತನಿಖೆ ನಡೆಸಲಿದೆ ಎಂದು ಹೇಳಿದೆ. ಸಿಜೆಐ ಮೇಲೆ ಹೊರಿಸಲಾಗಿರುವ ಲೈಂಗಿಕ ದೌರ್ಜನ್ಯ ಆರೋಪ ಒಂದು ಷಡ್ಯಂತ್ರ. ರಂಜನ್​ ಗೋಗೊಯ್​ ಅವರ ಮನೆ ಕಚೇರಿಯಲ್ಲೂ ಕೆಲಸ ಮಾಡುತ್ತಿದ್ದ ಕೋರ್ಟ್​ನ ಮಾಜಿ ಸಿಬ್ಬಂದಿ ಮಾಡಿರುವ ಆರೋಪ ಪಿತೂರಿ ಎಂದು ವಕೀಲ ಉತ್ಸವ್ ಬೈನ್ಸ್​ ಹೇಳಿದ್ದರು.


ಬೈನ್ಸ್​ ಅವರು ಬುಧವಾರ ಇಬ್ಬರು ಕೋರ್ಟ್​ ಮಾಸ್ಟರ್ಸ್​ಗಳು ಅನಿಲ್ ಅಂಬಾನಿಗೆ ಸಂಬಂಧಿಸಿದ ಪ್ರಕರಣದಲ್ಲಿ ತೀರ್ಪನ್ನು ತಿರುಚುವಂತೆ ಲಾಬಿ ಮಾಡಿದ್ದರು. ಆದರೆ, ಅದು ಸಾಧ್ಯವಾಗದಿದ್ದಾಗ ಸಿಜೆಐ ವಿರುದ್ಧ ಈ ಷಡ್ಯಂತ್ರ ಹೆಣೆಯಲಾಗಿದೆ. ಇದರಲ್ಲಿ ಕೋರ್ಟ್​ನ ಮಹಿಳಾ ಸಿಬ್ಬಂದಿಯೂ ಸೇರಿದ್ದಾರೆ ಎಂದು ಹೇಳಿದ್ದರು. ಈ ಸಂಬಂಧ ಬೈನ್ಸ್​ ಅವರು ಮುಚ್ಚಿದ ಲಕೋಟೆಯಲ್ಲಿ ಸಾಕ್ಷ್ಯವನ್ನು ಪೀಠದ ಮುಂದೆ ಸಲ್ಲಿಕೆ ಮಾಡಿದ್ದರು.

First published:April 25, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ