• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • RIL AGM 2021: ಕಳೆದ ವರ್ಷ 53,739 ಕೋಟಿ ರೂ.ನಿವ್ವಳ ಲಾಭ, ಹಿಂದಿನ ವರ್ಷಕ್ಕಿಂತ ಶೇ. 34.8 ಹೆಚ್ಚಳ; ಮುಖೇಶ್ ಅಂಬಾನಿ

RIL AGM 2021: ಕಳೆದ ವರ್ಷ 53,739 ಕೋಟಿ ರೂ.ನಿವ್ವಳ ಲಾಭ, ಹಿಂದಿನ ವರ್ಷಕ್ಕಿಂತ ಶೇ. 34.8 ಹೆಚ್ಚಳ; ಮುಖೇಶ್ ಅಂಬಾನಿ

ಮುಖೇಶ್ ಅಂಬಾನಿ

ಮುಖೇಶ್ ಅಂಬಾನಿ

ಕಳೆದ ವರ್ಷದಲ್ಲಿ 1,500 ಹೊಸ ಮಳಿಗೆಗಳ ಸೇರ್ಪಡೆಯೊಂದಿಗೆ, ಇದೀಗ ಭಾರತದ ಪ್ರತಿ ಎಂಟು ಗ್ರಾಹಕರಲ್ಲಿ ಒಬ್ಬರು ರಿಲಯನ್ಸ್ ರೀಟೇಲ್​ನೊಂದಿಗೆ ವ್ಯವಹರಿಸುತ್ತಿದ್ದಾರೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ.

  • Share this:

    ಮುಂಬೈ (ಜೂನ್ 24): ಕೋವಿಡ್ ಸಂಕಷ್ಟದ ನಡುವೆಯೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಉತ್ತಮ ನಿರ್ವಹಣೆ ಪ್ರದರ್ಶಿಸಿದ್ದು, ಕಳೆದ ವರ್ಷದಲ್ಲಿ 54,000 ಕೋಟಿ ರೂ.ಗಳ ಒಟ್ಟು ಆದಾಯ ಗಳಿಸಿದೆ. ಬಡ್ಡಿ, ತೆರಿಗೆ, ಡಿಪ್ರಿಸಿಯೇಶನ್ ಹಾಗೂ ಅಮಾರ್ಟೈಸೇಶನ್ಗ್​ಗಳ ಮೊದಲಿನ ಆದಾಯವು (EBITDA) ಸುಮಾರು 98,000 ಕೋಟಿ ರೂ.ಗಳಷ್ಟಿದ್ದು, ಈ ಪೈಕಿ ಸುಮಾರು ಅರ್ಧದಷ್ಟು ಗ್ರಾಹಕ ವಹಿವಾಟುಗಳಿಂದಲೇ ಬಂದಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್​ನ ಮುಖ್ಯಸ್ಥ ಮುಖೇಶ್ ಅಂಬಾನಿ ತಿಳಿಸಿದ್ದಾರೆ.


    ಇಂದು ನಡೆದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ 44ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಳೆದ ವರ್ಷದಲ್ಲಿ 53,739 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಶೇ. 34.8ರಷ್ಟು ಹೆಚ್ಚಾಗಿದೆ. ಸೌದಿ ಅರಾಮ್ಕೋ ಹಾಗೂ ಪಬ್ಲಿಕ್ ಇನ್ವೆಸ್ಟ್ಮೆಂಟ್ ಫಂಡ್​ ಮುಖ್ಯಸ್ಥ ಯಾಸಿರ್ ಅಲ್-ರುಮಾಯ್ಯನ್, ಸ್ವತಂತ್ರ ನಿರ್ದೇಶಕರಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ ನಿರ್ದೇಶಕ ಮಂಡಲಿಯನ್ನು ಸೇರಲಿದ್ದಾರೆ ಎಂದು ಮುಖೇಶ್ ಅಂಬಾನಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ನಿರ್ದೇಶಕ ಮಂಡಲಿಗೆ ಅವರ ಸೇರ್ಪಡೆ, ರಿಲಯನ್ಸ್​ನ ಅಂತಾರಾಷ್ಟ್ರೀಕರಣದ ಪ್ರಾರಂಭದ ದ್ಯೋತಕವೂ ಆಗಿದೆ ಎಂದು ಅವರು ಹೇಳಿದ್ದಾರೆ.

    ಮುಂದುವರಿದ ರಿಲಯನ್ಸ್ ರೀಟೇಲ್ ಸಾಧನೆ


    ಕಳೆದ ವರ್ಷದಲ್ಲಿ 1,500 ಹೊಸ ಮಳಿಗೆಗಳ ಸೇರ್ಪಡೆಯೊಂದಿಗೆ, ಇದೀಗ ಭಾರತದ ಪ್ರತಿ ಎಂಟು ಗ್ರಾಹಕರಲ್ಲಿ ಒಬ್ಬರು ರಿಲಯನ್ಸ್ ರೀಟೇಲ್​ನೊಂದಿಗೆ ವ್ಯವಹರಿಸುತ್ತಿದ್ದಾರೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ರಿಲಯನ್ಸ್ ರೀಟೇಲ್ ಗಮನಾರ್ಹ ಸಾಧನೆ ತೋರಿದ್ದು, 65,000ಕ್ಕೂ ಹೆಚ್ಚಿನ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಜಿಯೋಮಾರ್ಟ್ ಸೇವೆಗಳಿಗೂ ಉತ್ತಮ ಪ್ರತಿಕ್ರಿಯೆ ಲಭ್ಯವಾಗುತ್ತಿದ್ದು, ಒಂದೇ ದಿನದಲ್ಲಿ 6.5 ಲಕ್ಷ ಆರ್ಡರುಗಳನ್ನು ದಾಖಲಿಸುವ ಮೂಲಕ ಅದು ದಾಖಲೆ ನಿರ್ಮಿಸಿದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ.


    ಇದನ್ನು ಓದಿ: RIL AGM 2021: ನಾವು ಸಂಸ್ಥೆಯ ಸಿಬ್ಬಂದಿ, ಕುಟುಂಬ, ದೇಶ, ಭೂಮಿ, ಜನರ ಬಗ್ಗೆ ಕಾಳಜಿ ವಹಿಸುತ್ತೇವೆ; ಮುಖೇಶ್ ಅಂಬಾನಿ


    ಕೋವಿಡ್ ಸಂಕಷ್ಟದಲ್ಲಿ ರಿಲಯನ್ಸ್ ಸಹಾಯಹಸ್ತ


    ಕೋವಿಡ್ ಜಾಗತಿಕ ಸೋಂಕಿನ ಸಂದರ್ಭದಲ್ಲಿ ಇಡೀ ರಿಲಯನ್ಸ್ ಕುಟುಂಬ ಒಟ್ಟಾಗಿ ನಿಂತು ರಾಷ್ಟ್ರೀಯ ಕರ್ತವ್ಯಗಳನ್ನು ನಿಭಾಯಿಸಿದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ರಿಲಯನ್ಸ್ ಪ್ರಾರಂಭಿಸಿದ ಐದು ಉದ್ದಿಷ್ಟಕಾರ್ಯಗಳ ಬಗ್ಗೆ ಮಾತನಾಡಿದ ನೀತಾ ಅಂಬಾನಿ, ಆಕ್ಸಿಜನ್ ತಯಾರಿಕೆ ಹಾಗೂ ಪೂರೈಕೆ, ಕೋವಿಡ್ ಮೂಲಸೌಕರ್ಯ ಸೃಷ್ಟಿ, ಆಹಾರ ವಿತರಣೆ, ಉದ್ಯೋಗಿಗಳ ರಕ್ಷಣೆ ಹಾಗೂ ಲಸಿಕೆ ನೀಡುವ ನಿಟ್ಟಿನಲ್ಲಿ ರಿಲಯನ್ಸ್ನ ಸಾಧನೆಗಳನ್ನು ವಿವರಿಸಿದರು. ಎಂದೂ ಮೆಡಿಕಲ್ ದರ್ಜೆಯ ಆಕ್ಸಿಜನ್ ಉತ್ಪಾದನೆ ಮಾಡಿಲ್ಲದಿದ್ದ ರಿಲಯನ್ಸ್ ಸಂಸ್ಥೆ ಇದೀಗ ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟಾರೆ ಆಕ್ಸಿಜನ್ ಪ್ರಮಾಣದ ಶೇ. 11ಕ್ಕೂ ಹೆಚ್ಚಿನ ಪಾಲನ್ನು ತಯಾರಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈವರೆಗೆ 7.5 ಕೋಟಿಗೂ ಹೆಚ್ಚಿನ ಆಹಾರ ಪೊಟ್ಟಣಗಳನ್ನು ವಿತರಿಸಿರುವ ರಿಲಯನ್ಸ್ನ 'ಮಿಶನ್ ಅನ್ನ ಸೇವಾ' ಕಾರ್ಪೊರೇಟ್ ಪ್ರತಿಷ್ಠಾನವೊಂದು ಕೈಗೊಂಡ ವಿಶ್ವದ ಅತಿದೊಡ್ಡ ಆಹಾರ ವಿತರಣಾ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದ್ದಾರೆ.


    ಕಳೆದ ಒಂದು ವರ್ಷದ ನಮ್ಮ ಪ್ರಯತ್ನಗಳು ನಮ್ಮ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಧಿರುಭಾಯ್ ಅಂಬಾನಿ ಹೆಮ್ಮೆ ಪಡುವಂತೆ ಮಾಡಬಹುದೆಂದು ನನಗೆ ಖಾತ್ರಿಯಿದೆ. ಏಕೆಂದರೆ, ರಿಲಯನ್ಸ್‌ನಲ್ಲಿ ಉತ್ಸಾಹ ಮತ್ತು ಅನುಭೂತಿಯೊಂದಿಗೆ ಎಲ್ಲವನ್ನೂ ಒಳಗೊಂಡು ಕೆಲಸ ಮಾಡಿದ್ದೇವೆ ಮತ್ತು ಮುಂದುವರೆಯುತ್ತಿದ್ದೇವೆ. ನಾವು ನಮ್ಮ ಸಂಸ್ಥೆಯ ಸಿಬ್ಬಂದಿ ಮತ್ತು ಕುಟುಂಬದ ಬಗ್ಗೆ ಮುತುವರ್ಜಿ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಗ್ರಾಹಕರು, ನಮ್ಮ ಹೂಡಿಕೆದಾರರು ಮತ್ತು ನಮ್ಮ ಪಾಲುದಾರರ ಬಗ್ಗೆ ಕಾಳಜಿ ವಹಿಸುತ್ತೇವೆ. ನಾವು ದೇಶ ಮತ್ತು ಸಮುದಾಯದ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳುತ್ತೇವೆ. ನಾವು ಭೂಮಿ ಮತ್ತು ಜನರ ಬಗ್ಗೆ ಕಾಳಜಿ ಹೊಂದಿದ್ದೇವೆ ಎಂದು ಹೇಳಿದರು. ಇದು ನಿಜವಾದ ರಿಲಯನ್ಸ್ ಉತ್ಸಾಹ, ಮತ್ತು ನಾವು ಯಾವಾಗಲೂ ಇದರೊಂದಿಗೆ ಮುಂದುವರೆಯುತ್ತೇವೆ ಎಂದು ಮುಖೇಶ್ ಅಂಬಾನಿ ಹೇಳಿದರು.

    Published by:HR Ramesh
    First published: