Bharat Jodo Yatra: ಭಾರತ್ ಜೋಡೋ ಯಾತ್ರೆಯಲ್ಲಿ ರಾಬರ್ಟ್ ವಾದ್ರಾ ಏಕೆ? ಬಿಜೆಪಿ ವ್ಯಂಗ್ಯ

ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಫೋಟೋಗಳ ಪಕ್ಕದಲ್ಲಿ ರಾಬರ್ಟ್ ವಾದ್ರಾ ಅವರ ಪೋಸ್ಟರ್‌ಗಳನ್ನು ಹಾಕಲಾಗಿದೆ. ಜೊತೆಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಫೋಟೋಗಳನ್ನು ಹಾಕಲಾಗಿದೆ.

ರಾಬರ್ಟ್ ವಾದ್ರಾ, ಪ್ರಿಯಾಂಕಾ ಗಾಂಧಿ ವಾದ್ರಾ

ರಾಬರ್ಟ್ ವಾದ್ರಾ, ಪ್ರಿಯಾಂಕಾ ಗಾಂಧಿ ವಾದ್ರಾ

 • Share this:
  ದೆಹಲಿ: ಕಾಂಗ್ರೆಸ್ ಇಂದಿನಿಂದ ಭಾರತ್ ಜೋಡೋ ಯಾತ್ರೆಯನ್ನು ಹಮ್ಮಿಕೊಂಡಿದ್ದು ಇದರಲ್ಲಿ ರಾಬರ್ಟ್ ವಾದ್ರಾ (Robert Vadra) ಪಾತ್ರದ ಬಗ್ಗೆ ಇದೀಗ ಟೀಕೆ ವಿವಾದಗಳು ಕೇಳಿಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರು ಇಂದು ತಮ್ಮ ಫೋಟೋದೊಂದಿಗೆ ಪಕ್ಷದ 'ಭಾರತ್ ಜೋಡೋ ಯಾತ್ರೆ'ಯ (Bharat Jodo Yatra) ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರ. ಈ ಫೋಟೋಗಳನ್ನು ಗುರಿಯಾಗಿರಿಸಿಕೊಂಡು ಬಿಜೆಪಿ (BJP) ವ್ಯಂಗ್ಯ ಮಾಡಿದೆ. ರಾಬರ್ಟ್ ವಾದ್ರಾ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಸೇರ್ಪಡೆಯಾಗುತ್ತಿರುವುದು ತಮಾಷೆಯಾಗಿದೆ ಎಂದು ಬಿಜೆಪಿ ನಾಯಕ ಸಚಿವ ರವಿಶಂಕರ್ ಪ್ರಸಾದ್ ಸುದ್ದಿಗಾರರೊಂದಿಗೆ ಸಂವಾದದಲ್ಲಿ ಟೀಕೆ ನಡೆಸಿದ್ದಾರೆ. ರಾಬರ್ಟ್ ವಾದ್ರಾ ಈಗ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

  ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಫೋಟೋಗಳ ಪಕ್ಕದಲ್ಲಿ ರಾಬರ್ಟ್ ವಾದ್ರಾ ಅವರ ಪೋಸ್ಟರ್‌ಗಳನ್ನು ಹಾಕಲಾಗಿದೆ. ಜೊತೆಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಫೋಟೋಗಳನ್ನು ಹಾಕಲಾಗಿದೆ. ಪೋಸ್ಟರ್‌ಗಳಲ್ಲಿ ಕಾಂಗ್ರೆಸ್ ವಿಂಗ್ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ನಾಯಕ ಉಲ್ಲೇಖಿಸಿ ಜೆಬಿ ಅಭಿಜಿತ್ ಅವರ ಫೋಟೋಗಳೂ ಇವೆ.  ಇದನ್ನೂ ಓದಿ: Survivor Of Amazon Tribe: ಹೆಸರೇ ಇಲ್ಲದ, ಹೊರಜಗತ್ತಿನ ಸಂಪರ್ಕ ಇರದ ವ್ಯಕ್ತಿ ನಿಧನ

  ಅಲ್ಲದೇ ಇದು ಭಾರತ್ ಜೊಡೋ ಯಾತ್ರೆ ಅಲ್ಲ. ಪರಿವಾರ್ ಜೋಡೋ ಯಾತ್ರೆ ಎಂದು ಬಿಜೆಪಿ ಟೀಕೆ ಮಾಡಿದೆ. ರಾಬರ್ಟ್ ವಾದ್ರಾ ಕಾಂಗ್ರೆಸ್ ಸರ್ಕಾರಗಳ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಫಲಾನುಭವಿ ಎಂದು ಬಿಜೆಪಿ ನಾಯಕ ಸಚಿವ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.

  ಕಾಂಗ್ರೆಸ್​ನ ರಣತಂತ್ರ
  ಕೇಂದ್ರ ಸರ್ಕಾರವನ್ನು ಗುರಿಯಾಗಿಸಲು ಕಾಂಗ್ರೆಸ್​ನ ರಣತಂತ್ರ ಸಿದ್ಧವಾಗಿದೆ. ಇದಕ್ಕಾಗಿ ಇಂದಿನಿಂದ 'ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಇದಕ್ಕಾಗಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಬೆಳಗ್ಗೆ ತಮಿಳುನಾಡಿಗೆ ಆಗಮಿಸಿದ್ದಾರೆ. ಇಲ್ಲಿಂದಲೇ ಈ ಪಯಣ ಆರಂಭವಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ತಮಿಳುನಾಡು, ಛತ್ತೀಸ್‌ಗಢ ಮತ್ತು ರಾಜಸ್ಥಾನ ಹೀಗೆ ಮೂರು ರಾಜ್ಯದ ಮುಖ್ಯಮಂತ್ರಿಗಳು ರಾಹುಲ್ ಗಾಂಧಿಗೆ ರಾಷ್ಟ್ರಧ್ವಜವನ್ನು ಗಾಂಧಿ ಮಂಟಪದಲ್ಲಿ ಹಸ್ತಾಂತರಿಸಿದ್ದಾರೆ.

  ಇದನ್ನೂ ಓದಿ: Rajnath Singh: ರಾಜನಾಥ್ ಸಿಂಗ್​ಗೆ ಮಂಗೋಲಿಯಾ ಕುದುರೆ ಉಡುಗೊರೆ! ಏನಿದರ ವಿಶೇಷತೆ?

  3500 ಕಿಮೀ ಪ್ರಯಾಣ
  ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯಲಿದೆ. ಈ 3500 ಕಿಮೀ ಪ್ರಯಾಣವು 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಈ ಐದು ತಿಂಗಳ ಪಾದಯಾತ್ರೆಯನ್ನು ಸ್ವತಃ ರಾಹುಲ್ ಗಾಂಧಿ ಅವರು ಬುಧವಾರ ತಮಿಳುನಾಡಿನಿಂದ ಆರಂಭಿಸಲಿದ್ದಾರೆ. ಎರಡು ಹಂತಗಳಲ್ಲಿ ಪ್ರಯಾಣ ನಡೆಯಲಿದೆ. ಇದರಲ್ಲಿ ರಾಜ್ಯದ 100-100 ಜನ ಭಾಗಿಯಾಗಲಿದ್ದಾರೆ.

  ಇನ್ನು ರಾಜೀವ್‌ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ರಾಹುಲ್, "ದ್ವೇಷ ಮತ್ತು ವಿಭಜನೆಯ ರಾಜಕಾರಣ"ದಿಂದ ತನ್ನ ತಂದೆಯನ್ನು ಕಳೆದುಕೊಂಡಿದ್ದೇನೆ ಆದರೀಗ ಇದೇ ಕಾರಣದಿಂದ "ಪ್ರೀತಿಯ ದೇಶ"ವನ್ನೂ ಕಳೆದುಕೊಳ್ಳುಲು ತಯಾರಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಾಗಿ, ನಾವು ಜಯಿಸುತ್ತೇವೆ ಎಂದು ಹೇಳಿದ್ದಾರೆ.
  Published by:guruganesh bhat
  First published: