HOME » NEWS » National-international » RS 1 CRORE COMPENSATION FOR HEAD CONSTABLE WHO DIED IN DELHI VIOLENCE SAYS CM ARVIND KEJRIWAL

ದೆಹಲಿ ಹಿಂಸಾಚಾರ: ಮೃತ ಕಾನ್ಸ್​​ಟೇಬಲ್​​ ರತನ್ ಲಾಲ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ದೆಹಲಿಯ ನಾಲ್ಕು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಇದೇ ವೇಳೆ ಹಿಂಸಾಚಾರ ತಡೆಗಟ್ಟಲು 12 ಪ್ಯಾರ ಮಿಲಿಟರಿ ಪಡೆ ನಿಯೋಜನೆ ಮಾಡಲಾಗುತ್ತಿದೆ. ಇನ್ನು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

news18-kannada
Updated:February 26, 2020, 8:34 PM IST
ದೆಹಲಿ ಹಿಂಸಾಚಾರ: ಮೃತ ಕಾನ್ಸ್​​ಟೇಬಲ್​​ ರತನ್ ಲಾಲ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ
ಅರವಿಂದ್ ಕೇಜ್ರಿವಾಲ್
  • Share this:
ನವದೆಹಲಿ(ಫೆ.26): ರಾಷ್ಟ್ರ ರಾಜಧಾನಿ ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟ ಮುಖ್ಯ ಪೊಲೀಸ್​​ ಕಾನ್ಸ್​ಟೇಬಲ್​​ ರತನ್​ ಲಾಲ್ ಕುಟುಂಬಕ್ಕೆ ಒಂದು ಕೋಟಿ ರೂ. ನೀಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್, ಮೃತ ರತನ್​ ಲಾಲ್ ಕುಟುಂಬದ ರಕ್ಷಣೆಯ ಜವಾಬ್ದಾರಿ ಸರ್ಕಾರದ್ದು. ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುತ್ತೇವೆ. ಜತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದರು.

ಇನ್ನು, ದೆಹಲಿ ಜನ ಶಾಂತಿ ಪ್ರಿಯರು. ಇವರನ್ನು ಕಾಪಾಡುವ ಹೊಣೆ ನಮ್ಮದು. ನಮ್ಮ ಜನ ಯಾರು ಹಿಂಸಾಚಾರ ಬಯಸಲ್ಲ. ಯಾರೋ ಬಾಹ್ಯ ಶಕ್ತಿಗಳಿಂದ ದೆಹಲಿಯಲ್ಲಿ ಹಿಂಸಾಚಾರ ಸಂಭವಿಸುತ್ತದೆ. ನಾವ್ಯಾರು ಹಿಂದೂ-ಮುಸ್ಲಿಮರ ನಡುವೆ ಗಲಭೆ ನಡೆಯಬೇಕೆಂದು ಬಯಸುವುದಿಲ್ಲ ಎಂದರು ಸಿಎಂ ಅರವಿಂದ್​​ ಕೇಜ್ರಿವಾಲ್​.

ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ಕಾಯ್ದೆ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆಯಿಂದ ದೆಹಲಿಯಲ್ಲಿ ಹಿಂಸಾಚಾರ ಹೆಚ್ಚುತ್ತಲ್ಲೇ ಇದೆ. ಈ ಬೆನ್ನಲ್ಲೇ ಎಚ್ಚೆತ್ತ ದೆಹಲಿ ಪೊಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದ್ದಾರೆ. ಈ ಆದೇಶ ಈಶಾನ್ಯ ದೆಹಲಿಯ ಹಲವೆಡೆ ಜಾರಿಯಲ್ಲಿದ್ದು, ಹಿಂಸಾಚಾರ ತಡೆಗಟ್ಟಲು ಕಠಿಣ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ಸಿಎಎ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರ; ಶಾಲಾ-ಕಾಲೇಜುಗಳಿಗೆ ರಜೆ; ಸಿಬಿಎಸ್‌ಇ ಪರೀಕ್ಷೆ ಮುಂದೂಡಿಕೆ

ದೆಹಲಿಯ ನಾಲ್ಕು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಇದೇ ವೇಳೆ ಹಿಂಸಾಚಾರ ತಡೆಗಟ್ಟಲು 12 ಪ್ಯಾರ ಮಿಲಿಟರಿ ಪಡೆ ನಿಯೋಜನೆ ಮಾಡಲಾಗುತ್ತಿದೆ. ಇನ್ನು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಇತ್ತೀಚೆಗೆ ಭಾನುವಾರ(ನಿನ್ನೆ) ದೆಹಲಿಯ ಈಶಾನ್ಯ ಭಾಗದಲ್ಲಿರುವ ಜಫ್ರಾಬಾದ್​ನಲ್ಲಿ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದಿತ್ತು. ಪರಸ್ಪರ ಕಲ್ಲುತೂರಾಟದಲ್ಲಿ ತೊಡಗಿದ್ದ ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಬಳಕೆ ಮಾಡಿದ್ದರು. ಕೆಲ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರವೂ ಕೂಡ ನಡೆಸಲಾಗಿತ್ತು. ಈ ಬೆನ್ನಲ್ಲೇ ಸೋಮವಾರ ಕೂಡ ಇದೀ ಪರಿಸ್ಥಿತಿ ನಿರ್ಮಾಣವಾಗಿತ್ತು. ಆಗ ಪೊಲೀಸ್​​ ಕಾನ್ಸ್​ಟೇಬಲ್​​ ಕಲ್ಲು ತೂರಾಟದಲ್ಲಿ ಸಾವನ್ನಪ್ಪಿದರು.
Youtube Video
First published: February 26, 2020, 8:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories