ಕೇಂದ್ರ ಸರ್ಕಾರ ಜನಾದೇಶವನ್ನು ತಪ್ಪಾಗಿ ಬಳಸಿಕೊಳ್ಳುತ್ತಿದೆ; ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಸೋನಿಯಾ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿದ್ದರೆ ಮಾತ್ರ ಸಾಲದು. ಬದಲಾಗಿ ಪಕ್ಷದ ಆಂದೋಲನವನ್ನೇ ತಮ್ಮ ಕಾರ್ಯಸೂಚಿಯಾಗಿ ಹೊಂದಿರಬೇಕು ಎಂದು ಸೋನಿಯಾ ಗಾಂಧಿ ಕಿವಿಮಾತು ಹೇಳಿದ್ದಾರೆ.

MAshok Kumar | news18-kannada
Updated:September 12, 2019, 2:43 PM IST
ಕೇಂದ್ರ ಸರ್ಕಾರ ಜನಾದೇಶವನ್ನು ತಪ್ಪಾಗಿ ಬಳಸಿಕೊಳ್ಳುತ್ತಿದೆ; ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಸೋನಿಯಾ
ಸೋನಿಯಾ ಗಾಂಧಿ ಮತ್ತು ಮನಮೋಹನ್​ ಸಿಂಗ್.
MAshok Kumar | news18-kannada
Updated: September 12, 2019, 2:43 PM IST
ನವ ದೆಹಲಿ (ಸೆಪ್ಟೆಂಬರ್.12); ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ಜನರ ಆದೇಶವನ್ನು ಕೇಂದ್ರ ಸರ್ಕಾರ ತಪ್ಪಾಗಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಂಗಾಮಿ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ನವ ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪಕ್ಷದ ಆಂತರಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, “ಕೇಂದ್ರ ಸರ್ಕಾರ ಜನರು ನೀಡಿದ ಆದೇಶವನ್ನು ಅತ್ಯಂತ ಅಪಾಯಕಾರಿಯಾದ ಶೈಲಿಯಲ್ಲಿ ತಪ್ಪಾಗಿ ಬಳಸಿಕೊಳ್ಳುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮಾ ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಾಯಿ ಪಟೇಲ್ ಅವರಂತಹ ನಾಯಕರ ನೈಜ ಸಂದೇಶವನ್ನು ತಪ್ಪಾಗಿ ಅರ್ಥೈಸುವ ಏಕೈಕ ಗುರಿಯನ್ನು ಬಿಜೆಪಿ ತನ್ನ ಕಾರ್ಯಸೂಚಿಯಾಗಿ ಬದಲಿಸಿಕೊಂಡಿದೆ” ಎಂದು ಕಿಡಿಕಾರಿದರು.

ಅಲ್ಲದೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿದ್ದರೆ ಮಾತ್ರ ಸಾಲದು. ಬದಲಾಗಿ ಪಕ್ಷದ ಆಂದೋಲನವನ್ನೇ ತಮ್ಮ ಕಾರ್ಯಸೂಚಿಯಾಗಿ ಹೊಂದಿರಬೇಕು ಎಂದು ಸೋನಿಯಾ ಗಾಂಧಿ ಕಿವಿಮಾತು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ದೇಶದ ಆರ್ಥಿಕ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದ ಅವರು, “ದೇಶದ ಆರ್ಥಿಕ ಪರಿಸ್ಥಿತಿ ಪ್ರಸ್ತುತ ತುಂಬಾ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದರಿಂದ ಜನ ಸಾಮಾನ್ಯರು ಸಾಕಷ್ಟು ನಷ್ಟವನ್ನು ಎದುರಿಸುತ್ತಿದ್ದಾರೆ. ಸರ್ಕಾರದ ಮೇಲಿನ ವಿಶ್ವಾಸ ಅಲುಗಾಡುತ್ತಿದೆ. ಆದರೆ, ಇದನ್ನು ಮರೆಮಾಚಲು, ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ನೀಚ ರಾಜಕಾರಣದಲ್ಲಿ ತೊಡಗಿದೆ” ಎಂದು ಆರೋಪಿಸಿದರು.

ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಹಮ್ಮಿಕೊಳ್ಳುವ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚೆ ಸಂಬಂಧ ಇಂದು ಸಭೆ ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಪಕ್ಷದ ಅಜೆಂಡಾವನ್ನು ದೇಶದಾದ್ಯಂತ ಪ್ರಚಾರ ಮಾಡಲು ಆರ್​​ಎಸ್​ಎಸ್​ ಮಾದರಿಯ ‘ಪ್ರೇರಕ್’ ಗಳನ್ನು ನೇಮಿಸುವ ಹಾಗೂ ಸದಸ್ಯತ್ವ ನೋಂದಣಿ ಕಾರ್ಯಕ್ರಮದ ಹಾಗೂ ಪಕ್ಷವನ್ನು ಬೂತ್​ ಮಟ್ಟದಿಂದ ಸಧೃಡವಾಗಿ ಕಟ್ಟುವ ಕುರಿತ ಚರ್ಚೆಯನ್ನೂ ಪಕ್ಷದ ಕಾರ್ಯಸೂಚಿಯಲ್ಲಿ ಸೇರಿಸಲಾಗಿತ್ತು.

ಕಾಂಗ್ರೆಸ್ ಪಕ್ಷದ ಈ ಸಭೆಗೆ ಮುಖ್ಯಮಂತ್ರಿಗಳು ಎಲ್ಲಾ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಮದ್ಯಪ್ರದೇಶದ ಮುಖ್ಯಮಂತ್ರಿ ಕಮಲ್​ನಾಥ್​ ಗೈರಾಗಿದ್ದರು. ಆದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಿರಿಯ ನಾಯಕ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ, ಗುಲಾಂ ನಭಿ ಆಜಾದ್, ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರು ಭಾಗವಹಿಸಿದ್ದರು.

ಇದನ್ನೂ ಓದಿ : ಆರ್​ಎಸ್​ಎಸ್​ ಮಾದರಿ ಪಕ್ಷ ಕಟ್ಟಲು ಮುಂದಾದ ಕಾಂಗ್ರೆಸ್, ಗಾಂಧಿ ಜಯಂತಿಯಿಂದ ಕಾರ್ಯಾರಂಭ; ಇಂದಿನ ಸಭೆಯಲ್ಲಿ ಚರ್ಚೆ
Loading...

First published:September 12, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...