Sabarimala: ನವೆಂಬರ್ 16ರಿಂದ ಶಬರಿಮಲೆ ಯಾತ್ರೆ ಆರಂಭ; ಹೊಸ ನಿಯಮಗಳೇನು? ಇಲ್ಲಿದೆ ಮಾಹಿತಿ

Sabarimala Temple: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವೆಂಬರ್ 16ರಿಂದ ವಾರ್ಷಿಕ ಪೂಜೆಗಳು ನಡೆಯಲಿದ್ದು, ಕೋವಿಡ್ ನಡುವೆಯೂ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ ನೀಡಲಾಗಿದೆ.

Sushma Chakre | news18-kannada
Updated:September 29, 2020, 9:08 AM IST
Sabarimala: ನವೆಂಬರ್ 16ರಿಂದ ಶಬರಿಮಲೆ ಯಾತ್ರೆ ಆರಂಭ; ಹೊಸ ನಿಯಮಗಳೇನು? ಇಲ್ಲಿದೆ ಮಾಹಿತಿ
ಶಬರಿಮಲೆ ದೇವಸ್ಥಾನ
  • Share this:
ತಿರುವನಂತಪುರಂ (ಸೆ. 29): ಲಾಕ್​ಡೌನ್​ನಿಂದಾಗಿ ದೇವಸ್ಥಾನ, ಮಾಲ್, ಮಸೀದಿಗಳು, ಥಿಯೇಟರ್​ಗಳೆಲ್ಲವನ್ನೂ ಮುಚ್ಚಲಾಗಿತ್ತು. ಅತ್ಯಗತ್ಯ ಸೌಲಭ್ಯಗಳನ್ನು ಹೊರತುಪಡಿಸಿ ಬೇರಾವುದೂ ತೆರೆದಿರಲಿಲ್ಲ. ಇದೀಗ ಒಂದೊಂದಾಗಿ ದೇವಸ್ಥಾನಗಳನ್ನು ತೆರೆಯಲಾಗುತ್ತಿದ್ದು, ನಿಯಮಿತ ಸಂಖ್ಯೆಯಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಕೇರಳದ ಪ್ರಸಿದ್ಧ ದೇಗುಲ ಶಬರಿಮಲೆ ಕೂಡ ಕಳೆದ ತಿಂಗಳು 5 ದಿನಗಳ ಕಾಲ ಭಕ್ತರ ದರ್ಶನಕ್ಕೆ ಮುಕ್ತವಾಗಿತ್ತು. ನವೆಂಬರ್ ತಿಂಗಳಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಪೂಜೆಗಳು ನಡೆಯಲಿದ್ದು, ಕೋವಿಡ್ ನಡುವೆಯೂ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ ನೀಡಲಾಗಿದೆ. ಈ ಬಾರಿ ಭಕ್ತರು ಪಂಬ ನದಿಯಲ್ಲಿ ಸ್ನಾನ ಮಾಡುವಂತಿಲ್ಲ. ಅದರ ಬದಲಾಗಿ ಪಂಬ ಮತ್ತು ಏರುಮಲೈನಲ್ಲಿ ಶವರ್ ಏರ್ಪಾಡು ಮಾಡಲಾಗುತ್ತದೆ. ಅದರ ಕೆಳಗೆ ನಿಂತು ಸ್ನಾನ ಮಾಡಿದ ಬಳಿಕ ಭಕ್ತರು ಬೆಟ್ಟ ಹತ್ತಬಹುದು. ಅಭಿಷೇಕದಿಂದ ಅನ್ನದಾನದವರೆಗೆ ಈ ಬಾರಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದ್ದು, ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರತಿವರ್ಷ ನವೆಂಬರ್ ತಿಂಗಳಿನಿಂದ 2 ತಿಂಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಮಾಲೆ ಹಾಕಿದ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಂಡು, ದರ್ಶನ ಪಡೆಯುತ್ತಾರೆ. ಇರುಮುಡಿ ಹೊತ್ತು ಈ ದೇವಸ್ಥಾನಕ್ಕೆ ತೆರಳುವುದು ಅಷ್ಟು ಸುಲಭವಲ್ಲ. ಮಾನಸಿಕ ಸಿದ್ಧತೆಯ ಜೊತೆಗೆ ಇದಕ್ಕೆ ದೈಹಿಕ ದೃಢತೆಯೂ ಬೇಕಾಗುತ್ತದೆ. ಈಗಾಗಲೇ ಕಳೆದ ತಿಂಗಳು ಶಬರಿಮಲೆಗೆ ಭಕ್ತರಿಗೆ ಪ್ರವೇಶಿಸಲು ಅವಕಾಶ ನೀಡಲಾಗಿದ್ದು, ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಇದ್ದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕಳೆದ ತಿಂಗಳು ಅಂತ್ಯದಲ್ಲಿ ಶಬರಿಮಲೆ ಬಾಗಿಲನ್ನು ಮುಚ್ಚಲಾಗಿತ್ತು.

ಇದನ್ನೂ ಓದಿ: ದತ್ತಪೀಠದ ಗುಹೆಯೊಳಗಿನ ಸಿ.ಟಿ. ರವಿ ಫೋಟೋ ವೈರಲ್; ಸಾರ್ವಜನಿಕರಿಂದ ಆಕ್ರೋಶ

ನವೆಂಬರ್ 16ರಿಂದ ಶಬರಿಮಲೆಯ ವಾರ್ಷಿಕ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿವೆ. ಈ ವೇಳೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ, ಕಳೆದ ವರ್ಷಗಳಿಗಿಂತ ಈ ವರ್ಷ ಭಕ್ತರ ಸಂಖ್ಯೆಗೆ ಮಿತಿ ಹೇರಲಾಗಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕೊರೋನಾ ಪ್ರೋಟೋಕಾಲ್​ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ನಿನ್ನೆ ಕೇರಳ ಸರ್ಕಾರ ತಿಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ.

ನಾನಾ ರಾಜ್ಯಗಳಿಂದ ಬರುವ ಅಯ್ಯಪ್ಪಸ್ವಾಮಿ ಭಕ್ತರಿಗೆ ಕೊರೋನಾ ಟೆಸ್ಟ್​ ಕಡ್ಡಾಯವಾಗಿದೆ. ಹಾಗೇ, ಬೇರೆ ರಾಜ್ಯದ ಭಕ್ತರು ಶಬರಿಮಲೆಯಲ್ಲಿ ಉಳಿಯುವಂತಿಲ್ಲ. ಅವರಿಗೆ ವಸತಿ ವ್ಯವಸ್ಥೆಗೆ ಅವಕಾಶ ನೀಡುವುದಿಲ್ಲ. ಹಾಗೇ, ನಿಲಕ್ಕಲ್ ಮತ್ತು ಪಂಬದಲ್ಲಿ ಭಕ್ತಾದಿಗಳಿಗೆ ಆಂಟಿಜೆನ್ ಪರೀಕ್ಷೆ ನಡೆಸಿ, ಒಳಗೆ ಬಿಡಲಾಗುತ್ತದೆ. ಅಯ್ಯಪ್ಪಸ್ವಾಮಿ ಬೆಟ್ಟವನ್ನು ಹ್ತತಿ ಬರಬೇಕಾದ್ದರಿಂದ ಮಾಸ್ಕ್ ಧರಿಸಿದರೆ ಉಸಿರಾಟದ ತೊಂದರೆಯಾಗುತ್ತದೆಯೇ? ಎಂಬ ಬಗ್ಗೆ ಆರೋಗ್ಯಾಧಿಕಾರಿಗಳು ಅಧ್ಯಯನ ನಡೆಸಿ, ತಿಳಿಸಲಿದ್ದಾರೆ. ಈ ಬಾರಿ ಭಕ್ತರು ಸಾಲುಗಟ್ಟಿ ನಿಲ್ಲುವ ಬದಲು ವರ್ಚುವಲ್ ಸಾಲನ್ನು ಅನುಸರಿಸಲು ನಿರ್ಧರಿಸಲಾಗಿದೆ. ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.
Published by: Sushma Chakre
First published: September 29, 2020, 8:57 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading