2019ರಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಅಬು ಸೈಫುಲ್ಲಾ ಆಲಿಯಾಸ್ ಲಂಬೂ ಎನ್ಕೌಂಟರ್ಗೆ ಬಲಿಯಾಗಿದ್ದಾನೆ. ಜೈಶ್ ಎ ಮೊಹಮ್ಮದ್ ಸಂಘಟನೆಯ ಭಯೋತ್ಪಾದಕನಾದ ಈತ ಪಂಜಾಬ್ ಪ್ರಾಂತ್ಯದಲ್ಲಿ ನೆಲಸಿದ್ದ ಎಂದು ಕೂಡ ತಿಳಿದು ಬಂದಿದೆ, ಅದ್ನಾನ್ ಎಂದು ಕೂಡ ಗುರುತಿಸಿಕೊಂಡಿದ್ದ ಈತ ಜೈಶ್ ಎ ಮೊಹಮ್ಮದ್ ಸಂಘಟನೆಯ ಸಂಸ್ಥಾಪಕ ಮೌಲಾನಾ ಮಸೂದ್ ಅಜಾರ್ ಸಂಬಂಧಿ ಕೂಡ. 2017ರಲ್ಲಿ ಭಾರತಕ್ಕೆ ನುಸಳಿದ್ದ ಈತ ಅಂದಿನಿಂದ ತನ್ನ ಕಾರ್ಯಾಚರಣೆ ನಡೆಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಈತ ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ. 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ದಾಳಿಯ ಪ್ರಮುಖ ರೂವಾರಿ ಕೂಡ ಆಗಿದ್ದ. ಈತ ಪಾಕಿಸ್ತಾನದ ಜೆಇಎಂನ ಮೌಲಾನ ಮಸೂದ್ ಅಜಾರ್ ಮತ್ತು ರಫ್ ಆಜಾರ್ ನಿಕಟವರ್ತಿಯಾಗಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.
ಈತ ದಕ್ಷಿಣ ಕಾಶ್ಮೀರದಲ್ಲಿ ಜೈಶ್ ಕಾರ್ಯಾಚರಣೆಯ ಕಮಾಂಡರ್ ಆಗಿದ್ದ. ಎನ್‌ಕ್ರಿಪ್ಟ್ ಮೆಸೇಜಿಂಗ್ ಅಪ್ಲಿಕೇಶನ್‌ಗಳಲ್ಲಿ ಈತ ನಿಪುಣನಾಗಿದ್ದ. ಐಇಡಿಯಲ್ಲಿ ಇಂತಹ ಸಂದೇಶ ರವಾನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ. ಈತ ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಿಂದ ಕಾರ್ಯನಿರ್ವಹಿಸುತ್ತಿದ್ದ.
ಇಂದು ಸೇನೆ ನಡೆಸಿದ ದಾಳಿಯಲ್ಲಿ ಲಂಬೂ ಜೊತೆ ಮತ್ತಿಬ್ಬರು ಉಗ್ರರನ್ನು ಕೂಡ ಹತ್ಯೆ ಮಾಡಲಾಗಿದೆ. ದಾಚಿಗಮ್ ಅರಣ್ಯ ಪ್ರದೇಶದ ನಮಿಬಿಯನ್ ಮತ್ತು ಮಾರ್ಸಾರ್ ಪ್ರದೇಶದಲ್ಲಿ ಈ ದಾಳಿ ನಡೆಸಲಾಗಿದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ