ನವದೆಹಲಿ:ಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಕುಸ್ತಿಪಟುಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಕೂಡಲೇ ಬಂಧಿಸುವಂತೆ ಒತ್ತಾಯಿಸುತ್ತಿದ್ದರು. ಇದೀಗ ಅಮಿತ್ ಶಾ ಕುಸ್ತಿ ಪಟುಗಳನ್ನು ಭೇಟಿ ಮಾಡಿ ಚರ್ಚೆ ಮಾಡಿದ ಬೆನ್ನಲ್ಲೇ ಒಲಿಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಪಟುಗಳು ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಕಾನೂನು ಎಲ್ಲರಿಗೂ ಸಮಾನವಾಗಿದ್ದು, ಕಾನೂನು ತನ್ನದೇ ಕೆಲಸ ಮಾಡುತ್ತದೆ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿದೆ ಎಂದು ಅಮಿತ್ ಶಾ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕುಸ್ತಿಪಟುಗಳ ಪ್ರತಿಭಟನೆಯಿಂದ ಸಾಕ್ಷಿ ಮಲಿಕ್ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದ್ದವು.
ಜೊತೆಗೆ ಕುಸ್ತಿಪಟು ಸಾಕ್ಷಿ ಮಲಿಕ್ ಕೂಡ ಉತ್ತರ ರೈಲ್ವೆಯಲ್ಲಿ ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದರೆ ಕೆಲವು ಮಾಧ್ಯಮಗಳು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿಸಿದ್ದವು. ಈ ಕುರಿತು ಟ್ವೀಟ್ ಮಾಡಿರುವ ಸಾಕ್ಷಿ, " ಈ ಸುದ್ದಿ ಸಂಪೂರ್ಣ ಸುಳ್ಳು, ನ್ಯಾಯಕ್ಕಾಗಿ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದಿಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ದಯವಿಟ್ಟು ಯಾವುದೇ ಸುಳ್ಳು ಸುದ್ದಿ ಹಬ್ಬಿಸಬೇಡಿ" ಎಂದು ಮನವಿ ಮಾಡಿದ್ದಾರೆ.
ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ
ಸಾಕ್ಷಿ ಮಲಿಕ್ ಹಲವು ದಿನಗಳಿಂದ ಕುಸ್ತಿಪಟುಗಳ ಧರಣಿಗೆ ಬೆಂಬಲ ನೀಡುತ್ತಿದ್ದಾರೆ. ಕಳೆದ ಮಂಗಳವಾರ ಸಾಕ್ಷಿ ಮಲಿಕ್ ತಮ್ಮ ಪದಕಗಳನ್ನು ಗಂಗಾ ನದಿಗೆ ಬಿಡಲು ತಯಾರಿ ನಡೆಸಿದ್ದರು. ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸದಿದ್ದರೂ ತಮ್ಮ ಆಂದೋಲನವನ್ನು ನಿಲ್ಲಿಸುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ಗದರು.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಲ್ಲಿ ಅಪ್ರಾಪ್ತ ಬಾಲಕಿ ಇದ್ದರೂ ಬ್ರಿಜ್ ಭೂಷಣ್ನನ್ನು ಬಂಧಿಸದಿರುವ ಬಗ್ಗೆ ಪೊಲೀಸರು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚೆಗೆ ಹೊಸ ಸಂಸತ್ತಿಗೆ ಮೆರವಣಿಗೆ ನಡೆಸಿದ ಕುಸ್ತಿಪಟುಗಳನ್ನು ಪೊಲೀಸರು ತಡೆದು ಬಂಧಿಸಿದ್ದರು.
ಸಾಕ್ಷಿ ನಂತರ ಭಜರಂಗ್ ಕೂಡ ಕೂಡ ಟ್ವೀಟ್ ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಚಳುವಳಿ ಹಿಂತೆಗೆದುಕೊಳ್ಳುವ ಸುದ್ದಿ ಕೇವಲ ವದಂತಿಯಾಗಿದೆ. ನಮ್ಮ ಹೆಸರನ್ನು ಹಾಳು ಮಾಡಲು ಈ ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಹೋರಾಟದಿಂದ ಹಿಂದೆ ಸರಿದಿಲ್ಲ ಅಥವಾ ಚಳವಳಿಯನ್ನು ಹಿಂತೆಗೆದುಕೊಂಡಿಲ್ಲ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ.
ಸಾಕ್ಷಿ, ಬಜರಂಗ್ ಮತ್ತು ವಿನೇಶ್ ರೈಲ್ವೆಯಲ್ಲಿ ತಮ್ಮ ಉದ್ಯೋಗಗಳಿಗೆ ಖಂಡಿತವಾಗಿಯೂ ಮರಳಿದ್ದಾರೆ ಎಂಬುದು ಕುಸ್ತಿಪಟುಗಳ ಟ್ವೀಟ್‌ಗಳಿಂದ ಸ್ಪಷ್ಟವಾಗಿದೆ, ಆದರೆ ನ್ಯಾಯಕ್ಕಾಗಿ ಅವರ ಚಳುವಳಿ ಮುಂದುವರಿಯುತ್ತದೆ ಎಂಬದು ಕೂಡ ನಿಜವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ