ರೈತರು ಭೂಮಿ ಕಳೆದುಕೊಂಡರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ; ಕೇಂದ್ರ ಸಚಿವ ಸಂಜೀವ್‌ ಬಾಲ್ಯನ್

ಈ ಕುರಿತು ಈಗಾಗಲೇ ಮಾಹಿತಿ ನೀಡಿರುವ ಭಾರತೀಯ ಕಿಸಾನ್ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರದ ಮೂರು ಹೊಸ ಕಾಯ್ದೆಗಳನ್ನು ಹಿಂಪಡೆಯುವ ತನಕ ಪ್ರತಿಭಟನೆ, ಹೋರಾಟ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವ ಸಂಜೀವ್ ಬಾಲ್ಯನ್.

ಕೇಂದ್ರ ಸಚಿವ ಸಂಜೀವ್ ಬಾಲ್ಯನ್.

 • Share this:
  ನವ ದೆಹಲಿ (ಮಾರ್ಚ್​ 07); "ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮೂರು ಹೊಸ ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿಯಾಗಲಿವೆ. ರೈತರ ಆಶಯಕ್ಕೆ ಅನುಗುಣವಾಗಿಯೇ ಈ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಒಂದು ವೇಳೆ ಈ ಕಾಯ್ದೆಗಳಿಂದಾಗಿ ಒಬ್ಬ ರೈತ ಜಮೀನು ಕಳೆದುಕೊಂಡರೂ ನಾನು ಸಂಸತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಕೇಂದ್ರ ಸಚಿವ ಸಂಜೀವ್ ಬಾಲ್ಯನ್​ ಇಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ 100 ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ರೈತರ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆಯುತ್ತಲೇ ಇದೆ. ರೈತ ಮುಖಂಡರೂ ಸಹ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  ಈ ಕುರಿತು ಈಗಾಗಲೇ ಮಾಹಿತಿ ನೀಡಿರುವ ಭಾರತೀಯ ಕಿಸಾನ್ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್ ಟಿಕಾಯತ್, "ಕೇಂದ್ರ ಸರ್ಕಾರದ ಮೂರು ಹೊಸ ಕಾಯ್ದೆಗಳನ್ನು ಹಿಂಪಡೆಯುವ ತನಕ ಪ್ರತಿಭಟನೆ, ಹೋರಾಟ ಮುಂದುವರಿಯುತ್ತದೆ" ಎಂದು ಸ್ಪಷ್ಟಪಡಿಸಿದ್ದಾರೆ.

  ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ 100 ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ರಾಮರಾಜ್ ಪಟ್ಟಣದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, "ರೈತರ ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೆ ಆಂದೋಲನ ಮುಂದುವರಿಯುತ್ತದೆ" ಎಂದು ಅವರು ಎಚ್ಚರಿಸಿದ್ದಾರೆ.

  ಇದನ್ನೂ ಓದಿ: Ramesh Jarkiholi CD Case: ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ನೀಡಿದ್ದ ಲೈಂಗಿಕ ದೌರ್ಜನ್ಯದ ದೂರನ್ನು ಹಿಂಪಡೆದ ದಿನೇಶ್​ ಕಲ್ಲಹಳ್ಳಿ

  ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನೀಡಿದ ಅವರು, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮಾರ್ಚ್ 27 ರಂದು ಗಾಜಿಪುರದ ರೈತರ ಪ್ರತಿಭಟನಾ ಸ್ಥಳವನ್ನು ತಲುಪಲಿದೆ ಎಂದು ಹೇಳಿದ್ದಾರೆ ಎಂಬುದಾಗಿಯೂ ಅವರು ತಿಳಿಸಿದ್ದಾರೆ.

  ಇದೇ ಕಾರಣಕ್ಕೆ ಮುಜಫ್ಫರ್‌ನಗರ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಸಂಜೀವ್‌ ಬಾಲ್ಯನ್‌ ಅವರು ಈ ಕುರಿತು ಇಂದು ಮಾತನಾಡಿದ್ದು, "ಈ ಮೂರು ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿಯಾಗಲಿವೆ. ರೈತರ ಆಶಯಕ್ಕೆ ಅನುಗುಣವಾಗಿಯೇ ಈ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಒಂದು ವೇಳೆ ಈ ಕಾಯ್ದೆಗಳಿಂದಾಗಿ ಒಬ್ಬ ರೈತ ಜಮೀನು ಕಳೆದುಕೊಂಡರೂ ನಾನು ಸಂಸತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಹೇಳಿದ್ದಾರೆ.
  Published by:MAshok Kumar
  First published: