ನವದೆಹಲಿ(ಆ.18): ಗೋವಾದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಸತ್ಯಪಾಲ್ ಮಲಿಕ್ ಅವರನ್ನು ಮಂಗಳವಾರ ವರ್ಗಾವಣೆ ಮಾಡಿ ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಗೋವಾ ರಾಜ್ಯಪಾಲರನ್ನಾಗಿ ನೇಮಿಸಿ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ.
ರಾಷ್ಟ್ರಪತಿ ಭವನದ ಮಾಹಿತಿ ಪ್ರಕಾರ, ಗೋವಾದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರನ್ನು ವರ್ಗಾಯಿಸಿ ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಸರ್ಕಾರದ ಮಾರ್ಗಸೂಚಿಯನುಸಾರ ಗಣೇಶೋತ್ಸವ ಆಚರಿಸಲು ಬೀದರ್ ಜಿಲ್ಲಾಧಿಕಾರಿ ಮನವಿ
ಇನ್ನು, ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ತಮ್ಮ ಸ್ವಂತ ಕರ್ತವ್ಯಗಳ ಜೊತೆಗೆ ಗೋವಾ ರಾಜ್ಯಪಾಲರ ಜವಾಬ್ದಾರಿಯನ್ನು ನಿರ್ವಹಿಸುವಂತೆ ಕೇಳಿಕೊಳ್ಳಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ