HOME » NEWS » National-international » SBI SPECIALIST OFFICER RECRUITMENT 2021 APPLY ONLINE FOR 452 SPECIALIST OFFICER VACANCY HG

SBI Recruitment 2021: 452 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿಶೇಷ ಅಧಿಕಾರಿ ಹುದ್ದೆಗಳಿಗೆ ಎಂಬಿಎ, ಪಿಜಿಡಿಬಿಎಂ, ಎಂಸಿಎ, ಎಂ.ಸ್ಸಿ, ಪದವಿ, ಬಿ.ಇ, ಬಿ.ಟೆಕ್, ಸ್ನಾತಕೋತ್ತರ ಪದವಿ, ಸಿಎ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

news18-kannada
Updated:January 2, 2021, 3:45 PM IST
SBI Recruitment 2021: 452 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ!
SBI
  • Share this:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank India) ಖಾಲಿ ಇರುವ 452 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿಶೇಷ ಅಧಿಕಾರಿ ಹುದ್ದೆಗಳಿಗೆ ಎಂಬಿಎ, ಪಿಜಿಡಿಬಿಎಂ, ಎಂಸಿಎ, ಎಂ.ಸ್ಸಿ, ಪದವಿ, ಬಿ.ಇ, ಬಿ.ಟೆಕ್, ಸ್ನಾತಕೋತ್ತರ ಪದವಿ, ಸಿಎ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

-ಅಕ್ಟೋಬರ್ 31, 2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

-ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, 2ಎ, 2ಬಿ, 3ಎ ಮತ್ತು 3ಬಿ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ ಪಾವತಿ: -ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 70 ರೂಪಾಯಿ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

-ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?:

ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಧಿಕೃತ ವೆಬ್‌ಸೈಟ್‌ https://sbi.co.in/web/careers ತೆರಳಿ, ನಂತರ ಅಲ್ಲಿ ನೀಡಿರುವ ಮಾಹಿತಿಯನ್ನು ಓದಿ, ಮಾಹಿತಿಯನ್ನು ಭರ್ತಿ ಮಾಡಬೇಕು. ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಿ ಜನವರಿ 11,2021ರೊಳಗೆ ಅರ್ಜಿ ಸಲ್ಲಿಸಬೇಕು.
Published by: Harshith AS
First published: January 2, 2021, 3:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories