HOME » NEWS » National-international » SBI STATE BANK INDIA APPRENTICE RECRUITMENT 2020 NOTIFICATION OUT HG

SBI Apprentice Recruitment 2020: 8500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೆ ಅವಕಾಶ

ಶೈಕ್ಷಣಿಕ ವಿದ್ಯಾರ್ಹತೆ: ಪದವಿ ಪಡೆದ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

news18-kannada
Updated:November 20, 2020, 2:53 PM IST
SBI Apprentice Recruitment 2020: 8500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೆ ಅವಕಾಶ
JOB
  • Share this:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 8500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ತಿಳಿಸಿದೆ. ಡಿಸೆಂಬರ್ 10,2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಪದವಿ ಪಡೆದ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ: 

ಅಪ್ರೆಂಟಿಸ್ ಹುದ್ದೆಗಳಿಗೆ ಅಕ್ಟೋಬರ್ 31,2020ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, 2ಎ, 2ಬಿ, 3ಎ ಮತ್ತು 3ಬಿ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲ ವರ್ಷ ತಿಂಗಳಿಗೆ 15,000 ರೂ, ಎರಡನೇ ವರ್ಷ ತಿಂಗಳಿಗೆ 16,500ರೂ ಮತ್ತು ಮೂರನೇ ವರ್ಷ 19,000ರೂ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳಿಗೆ ಆನ್‌ಲೈನ್, ಪ್ರಾದೇಶಿಕ ಭಾಷೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?:

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ಹೊರಡಿಸಿರುವ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಬೇಕು. ಎಸ್‌ಬಿಐ ಅಧಿಕೃತ ವೆಬ್‌ಸೈಟ್‌ https://sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ, ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
Published by: Harshith AS
First published: November 20, 2020, 2:51 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories