ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರು ಲಾಕ್​ಡೌನ್​ ವೇಳೆ ದುಬಾರಿ ಬೆಲೆಯ ಬೈಕ್​ ಮೇಲೆ ಕುಳಿತು ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋಗೆ ವಕೀಲ ಪ್ರಶಾಂತ್ ಭೂಷಣ್ ಅವರು ಕಾಮೆಂಟ್​ ಮಾಡಿದ್ದರು. ಸಿಜೆಐ ಬೈಕ್​ ಮೇಲೆ ಕುಳಿತಿದ್ದಾರೆ. ಆದರೆ, ಹೆಲ್ಮೆಟ್ ಹಾಕಿಲ್ಲ ಎಂದು ವ್ಯಂಗ್ಯವಾಡಿದ್ದರು. ಹಾಗೂ ಸುಪ್ರೀಂಕೋರ್ಟ್​ಗೆ ಬೀಗ ಹಾಕಿ ಬೈಕ್ ಸವಾರಿ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

news18-kannada
Updated:August 14, 2020, 3:27 PM IST
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್
ವಕೀಲ ಪ್ರಶಾಂತ್ ಭೂಷಣ್
  • Share this:
ನವದಹಲಿ; ಸುಪ್ರೀಂಕೋರ್ಟ್ ಮತ್ತು ಮುಖ್ಯ ನ್ಯಾಯಮೂರ್ತಿ ಎಸ್​ಎ ಬೊಬ್ಡೆ ಅವರ ವಿರುದ್ಧ ಟ್ವೀಟ್ ಮಾಡಿ ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿದ್ದ ವಕೀಲ ಪ್ರಶಾಂತ್ ಭೂಷಣ್ ಅವರು ತಪ್ಪಿತಸ್ಥರು ಎಂದು ಅಪೆಕ್ಸ್ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. 

ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಇದೊಂದು ಗಂಭೀರ ನ್ಯಾಯಾಂಗ ನಿಂದನೆ ಎಂದು ತೀರ್ಪು ನೀಡುವ ವೇಳೆ ಹೇಳಿದೆ. ಮತ್ತು ಈ ಪ್ರಕರಣದ ಶಿಕ್ಷೆಯನ್ನು ಆಗಸ್ಟ್ 20ಎಂದು ನೀಡುವುದಾಗಿ ತಿಳಿಸಿದೆ.

ಈ ಪ್ರಕರಣದಲ್ಲಿ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡೂ ಶಿಕ್ಷೆಯನ್ನು ನೀಡಬಹುದಾಗಿದೆ. ಪ್ರಶಾಂತ್ ಭೂಷಣ್ ಅವರು ಮಾಡಿದ್ದ ಎರಡು ಟ್ವೀಟ್​ಗಳು ನ್ಯಾಯಾಂಗ ನಿಂದನೆ ಆರೋಪ ಪ್ರಕರಣವನ್ನು ಸುಪ್ರೀಂಕೋರ್ಟ್ ಆಗಸ್ಟ್ 5ರಂದು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.

ಇದನ್ನು ಓದಿ: Independence Day Stickers: ಈ ಸ್ವಾತಂತ್ರ್ಯ ದಿನಾಚರಣೆಗೆ ನಿಮ್ಮ ಪ್ರೀತಿಪಾತ್ರರಿಗೆ ವಾಟ್ಸ್ಯಾಪ್​ ಸ್ಟಿಕ್ಕರ್ ಕಳುಹಿಸಿ, ಆನಂದಿಸಿ

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರು ಲಾಕ್​ಡೌನ್​ ವೇಳೆ ದುಬಾರಿ ಬೆಲೆಯ ಬೈಕ್​ ಮೇಲೆ ಕುಳಿತು ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋಗೆ ವಕೀಲ ಪ್ರಶಾಂತ್ ಭೂಷಣ್ ಅವರು ಕಾಮೆಂಟ್​ ಮಾಡಿದ್ದರು. ಸಿಜೆಐ ಬೈಕ್​ ಮೇಲೆ ಕುಳಿತಿದ್ದಾರೆ. ಆದರೆ, ಹೆಲ್ಮೆಟ್ ಹಾಕಿಲ್ಲ ಎಂದು ವ್ಯಂಗ್ಯವಾಡಿದ್ದರು. ಹಾಗೂ ಸುಪ್ರೀಂಕೋರ್ಟ್​ಗೆ ಬೀಗ ಹಾಕಿ ಬೈಕ್ ಸವಾರಿ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ಗಳನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂಕೋರ್ಟ್ ಸ್ವಪ್ರೇರಿತವಾಗಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. ಈ ಸಂಬಂಧ ಜುಲೈ 22ರಂದು ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
Published by: HR Ramesh
First published: August 14, 2020, 3:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading