ಮಾಜಿ ಸಿಎಂ ಓಮರ್​ ಅಬ್ದುಲ್ಲಾ ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ: ನಾಳೆ ವಿಚಾರಣೆ

ಇನ್ನು, ಕಣಿವೆಯಲ್ಲಿ ಶಾಂತಿ ಮರುಸ್ಥಾಪನೆಗೆ ಸಹಕರಿಸುವಂತೆ ಒಮರ್​​ ಬಳಿ ಮನವಿ ಮಾಡಲಾಗಿದೆ. ಆದರೆ, ಯಾವುದೇ ಕಾರಣಕ್ಕೂ ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧದ ತಮ್ಮ ನಿಲುವು ಬದಲಿಸಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ ಎಂದು ಆಡಳಿತಾಧಿಕಾರಿಗಳು ಸುಪ್ರೀಂಕೋರ್ಟ್​ಗೆ ಮನವರಿಕೆ ಮಾಡಿದ್ದಾರೆ.

news18-kannada
Updated:March 4, 2020, 7:10 AM IST
ಮಾಜಿ ಸಿಎಂ ಓಮರ್​ ಅಬ್ದುಲ್ಲಾ ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ: ನಾಳೆ ವಿಚಾರಣೆ
ಓಮರ್ ಅಬ್ದುಲ್ಲಾ
  • Share this:
ನವದೆಹಲಿ(ಫೆ.04): ನಾಳೆ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್​ ಅಬ್ದುಲ್ಲಾ ಗೃಹಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ. ಓಮರ್ ಅಬ್ದುಲ್ಲಾರ ಬಿಡುಗಡೆಗೆ ಸೂಚಿಸಬೇಕು ಎಂದು ಕೋರಿ ಸಾರಾ ಅಬ್ದುಲ್ಲಾ ಪೈಲಟ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಅರುಣ ಮಿಶ್ರಾ ಮತ್ತು ಇಂದಿರಾ ಬ್ಯಾನರ್ಜಿ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಮಾಡಲಿದೆ.

ಎರಡು ದಿನಗಳ ಹಿಂದೆಯಷ್ಟೇ ರಾಜ್ಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುವ ಮೂಲಕ ಇಲ್ಲಿನ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದ ಕಾರಣ ಮಾಜಿ ಮುಖ್ಯಮಂತ್ರಿ ಓಮರ್​ ಅಬ್ದುಲ್ಲಾರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ((ಪಬ್ಲಿಕ್ ಸೇಫ್ಟಿ ಆಕ್ಟ್) ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಆಡಳಿತಾಧಿಕಾರಿಗಳು ಸುಪ್ರೀಂಕೋರ್ಟ್​​ಗೆ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರದಿಂದ ಕಾಶ್ಮೀರದ ಜನತೆ ಭಾರೀ ಸಿಟ್ಟಿಗೆದ್ದಿದ್ದಾರೆ. ಈ ಮಧ್ಯೆ ಗೃಹಬಂಧನದಲ್ಲಿರುವ ಓಮರ್ ಅಬ್ದುಲ್ಲಾರನ್ನು ಬಿಡುಗಡೆಗೊಳಿಸಿದರೆ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಇವರ ಬಿಡುಗಡೆ ಬಳಿಕ ರಾಜಕೀಯ ಸಭೆಗಳನ್ನು ನಡೆಸಿದರೆ ಗಲಭೆಗಳು ಸೃಷ್ಟಿಯಾಗುತ್ತವೆ. ಜನ ಕೂಡ ರಾಜಕೀಯ ನಾಯಕರ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಹಾಗಾಗಿ ಜನ ಯಾರ ಮಾತುಗಳನ್ನು ಕೇಳಲು ಸಿದ್ಧವಿಲ್ಲ. ಹಾಗಾಗಿ ಓಮರ್​​ ಬಂಧನ ಮಾನ್ಯವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಆಡಳಿತಾಧಿಕಾರಿಗಳು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: ಅಮಿತ್ ಶಾ ರ‍್ಯಾಲಿಯಲ್ಲಿ ಗೋಲಿಮಾರ್​​ ಘೋಷಣೆ ಪ್ರಕರಣ: ನಾಲ್ವರ ಬಂಧನ

ಇನ್ನು, ಕಣಿವೆಯಲ್ಲಿ ಶಾಂತಿ ಮರುಸ್ಥಾಪನೆಗೆ ಸಹಕರಿಸುವಂತೆ ಓಮರ್​​ ಬಳಿ ಮನವಿ ಮಾಡಲಾಗಿದೆ. ಆದರೆ, ಯಾವುದೇ ಕಾರಣಕ್ಕೂ ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧದ ತಮ್ಮ ನಿಲುವು ಬದಲಿಸಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ ಎಂದು ಆಡಳಿತಾಧಿಕಾರಿಗಳು ಸುಪ್ರೀಂಕೋರ್ಟ್​ಗೆ ಮನವರಿಕೆ ಮಾಡಿದ್ದಾರೆ.

ಈ ಹಿಂದೆಯೇ ಓಮರ್​ ಅಬ್ದುಲ್ಲಾ ಗೃಹಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಉತ್ತರಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಅದರ ಜತೆಜತೆಗೆ, ಅರ್ಜಿ ಸಲ್ಲಿಸಲು ಇಷ್ಟು ಸಮಯ ಕಳೆದಿರುವಾಗ ಇನ್ನೂ 15 ದಿನ ಕಾಯುವುದರಲ್ಲಿ ಸಮಸ್ಯೆ ಏನು ಎಂದು ಅರ್ಜಿ ಸಲ್ಲಿಸಿದ್ದ ಓಮರ್​ ಅಬ್ದುಲ್ಲಾ ತಂಗಿ ಸಾರಾ ಅಬ್ದುಲ್ಲಾ ಪೈಲಟ್​ಗೆ ಕೊರ್ಟ್​ ಪ್ರಶ್ನಿಸಿತ್ತು.
First published: March 4, 2020, 7:10 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading