Ayodhya Verdict: ಅಯೋಧ್ಯೆ ತೀರ್ಪು ಯಾರೋಬ್ಬರ ಸೋಲು-ಗೆಲುವಿನ ಪ್ರಶ್ನೆಯಲ್ಲ; ಶಾಂತಿ ಸುವ್ಯಸವ್ಥೆ ಕಾಪಾಡಿ - ಪ್ರಧಾನಿ ಮೋದಿ

ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಅಯೋಧ್ಯೆ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಪ್ರಕರಣದ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟ ಮಾಡುವ ಸಾಧ್ಯತೆ ಇದೆ. ಹಾಗಾಗಿ ದೇಶಾದ್ಯಂತ ಬಿಗಿ ಪೊಲೀಸ್​​ ಬಂದೋಬಸ್ತ್​​​​ ಏರ್ಪಡಿಸಲಾಗಿದೆ.

news18-kannada
Updated:November 9, 2019, 8:06 AM IST
Ayodhya Verdict: ಅಯೋಧ್ಯೆ ತೀರ್ಪು ಯಾರೋಬ್ಬರ ಸೋಲು-ಗೆಲುವಿನ ಪ್ರಶ್ನೆಯಲ್ಲ; ಶಾಂತಿ ಸುವ್ಯಸವ್ಥೆ ಕಾಪಾಡಿ - ಪ್ರಧಾನಿ ಮೋದಿ
ಫೈಲ್​ ಫೋಟೋ: ನರೇಂದ್ರ ಮೋದಿ
  • Share this:
ನವದೆಹಲಿ(ನ.09): ಇಂದು ಸುಪ್ರೀಂಕೋರ್ಟ್​ ಅಯೋಧ್ಯೆ ವಿವಾದದ ಕುರಿತಾದ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಹಾಗಾಗಿ ಸುಪ್ರೀಂಕೋರ್ಟ್​ ನೀಡಲಿರುವ ಅಯೋಧ್ಯ ತೀರ್ಪು ಯಾರೋಬ್ಬರ ಸೋಲು-ಗೆಲುವಿನ ಪ್ರಶ್ನೆಯಲ್ಲ. ದೇಶಾದ್ಯಂತ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಶುಕ್ರವಾರ(ನಿನ್ನೆ) ರಾತ್ರಿ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಪೀಠ ರಾಮಮಂದಿರ-ಬಾಬ್ರಿ ಮಸೀದಿ ವಿವಾದದ ಕುರಿತು ಶನಿವಾರ ತೀರ್ಪು ನೀಡಲಿದೆ. ಇದು ಪ್ರಕಟವಾಗಲಿರುವ ತೀರ್ಪು ಯಾರಿಗೂ ಸೋಲು-ಗೆಲುವಿನ ಪ್ರಶ್ನೆಯಲ್ಲ. ದೇಶದ ಜನತೆ ತೀರ್ಪು ಏನೇ ಬರಲಿ, ಶಾಂತಿ ಸುವ್ಯವಸ್ಥೆ ಮತ್ತು ಏಕತೆಗೆ ಭಂಗವಾಗದಂತೆ ನಡೆದುಕೊಳ್ಳಬೇಕು. ಇದು ನಮ್ಮೆಲ್ಲರ ಹೊಣೆ ಎಂದಿದ್ದಾರೆ.

ಇದನ್ನೂ ಓದಿ: Ayodhya Verdict: ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟಿಸಲಿರುವ ಐದು ಜಡ್ಜ್​ಗಳ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಅಯೋಧ್ಯೆ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಪ್ರಕರಣದ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟ ಮಾಡುವ ಸಾಧ್ಯತೆ ಇದೆ. ಹಾಗಾಗಿ ದೇಶಾದ್ಯಂತ ಬಿಗಿ ಪೊಲೀಸ್​​ ಬಂದೋಬಸ್ತ್​​​​ ಏರ್ಪಡಿಸಲಾಗಿದೆ.

ಇದೇ ತಿಂಗಳ 17ರಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ನವೆಂಬರ್​ 17ರಂದು ತೀರ್ಪು ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: Ayodhya Verdict: ಇಂದು ಐತಿಹಾಸಿಕ ಅಯೋಧ್ಯೆ ವಿವಾದದ ತೀರ್ಪು ಪ್ರಕಟ​; ಎಲ್ಲರ ಚಿತ್ತ ಸುಪ್ರೀಂಕೋರ್ಟ್​ನತ್ತ

ಏನಿದು ಪ್ರಕರಣ?: ಅಯೋಧ್ಯೆಯ ಬಾಬ್ರಿ ಮಸೀದಿ ಇದ್ದ ಜಾಗದ 2.77 ಎಕರೆ ವಿವಾದಿತ ಭೂಮಿ ಯಾರಿಗೆ ಸೇರಿದ್ದು ಎಂಬುದೇ ಈಗ ಈ ಪ್ರಕರಣದ ವಸ್ತುವಾಗಿದೆ. ಬಾಬ್ರಿ ಮಸೀದಿ ಕಟ್ಟುವ ಮುಂಚೆ ಈ ಜಾಗದಲ್ಲಿ ರಾಮನ ದೇವಸ್ಥಾನವಿತ್ತು ಎಂಬುದು ಹಿಂದೂಗಳ ವಾದವಾಗಿದೆ. ಬಾಬ್ರಿ ಮಸೀದಿ ಇಡೀ ಜಾಗ ತಮಗೆ ಸೇರಿದ್ದು ಎಂಬುದು ಸುನ್ನಿ ವಕ್ಫ್ ಮಂಡಳಿಯ ವಾದ. ಹಾಗೆಯೇ ನಿರ್ಮೋಹಿ ಅಖಾಡ ಕೂಡ ಇದು ತನಗೆ ಸೇರಿದ್ದೆಂದು ಹೇಳುತ್ತಿದೆ. 2010ರಲ್ಲಿ ಅಲಾಹಾಬಾದ್ ಉಚ್ಚ ನ್ಯಾಯಾಲಯವು ಈ ಮೂರೂ ಪಕ್ಷಗಳಿಗೆ ವಿವಾದಿತ ಭೂಮಿಯನ್ನು ಸಮಾನವಾಗಿ ಹಂಚುವ ತೀರ್ಪು ನೀಡಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಹಲವು ಮೇಲ್ಮನವಿಗಳು ದಾಖಲಾದವು. ಈಗ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ನ್ಯಾಯಪೀಠವು ಇದರ ವಿಚಾರಣೆ ನಡೆಸುತ್ತಿದೆ.-----------
First published:November 9, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading