HOME » NEWS » National-international » SECOND BENGAL MINISTER QUITS SETBACK TO CM MAMATA BANERJEE MAK

Mamata Banerjee: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮತ್ತೋರ್ವ ಟಿಎಂಸಿ ನಾಯಕ; ಸಿಎಂ ಮಮತಾ ಬ್ಯಾನರ್ಜಿಗೆ ಹಿನ್ನಡೆ

ಈ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಶುಕ್ಲಾ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕ್ರೀಡೆಗಾಗಿ ಹೆಚ್ಚಿನ ಸಮಯ ನೀಡಲು ಬಯಸಿದ್ದು, ಶಾಸಕರಾಗಿ ಮುಂದುವರಿಯಲಿದ್ದಾರೆ. ಇದನ್ನು ನಕಾರಾತ್ಮಕ ರೀತಿಯಲ್ಲಿ ತೆಗೆದುಕೊಳ್ಳುವುದು ಬೇಡ ಎಂದು ಹೇಳಿದ್ದಾರೆ.

news18-kannada
Updated:January 6, 2021, 9:25 AM IST
Mamata Banerjee: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮತ್ತೋರ್ವ ಟಿಎಂಸಿ ನಾಯಕ; ಸಿಎಂ ಮಮತಾ ಬ್ಯಾನರ್ಜಿಗೆ ಹಿನ್ನಡೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.
  • Share this:
ಕೋಲ್ಕತ್ತಾ:  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಟಿಎಂಸಿ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಈ ಹಿಂದೆ ಟಿಎಂಸಿ ಹಿರಿಯ ನಾಯಕ ಸುವೆಂಧು ಅಧಿಕಾರಿ ಸೇರಿದಂತೆ ಐದು ಜನ ಟಿಎಂಸಿ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. ಆದರೆ, ಟಿಎಂಸಿ ಪಕ್ಷದ ಪ್ರಮುಖ ನಾಯಕ ಸುವೆಂದು ಅಧಿಕಾರಿ ಬಿಜೆಪಿಗೆ ಪಕ್ಷಾಂತರ ಮಾಡಿ ಕೇವಲ ಎರಡು ವಾರದಲ್ಲಿ ಮತ್ತೋರ್ವ ಕ್ಯಾಬಿನೆಟ್​ ಸಚಿವ ಲಕ್ಷ್ಮಿ ರತನ್​ ಶುಕ್ಲಾ ತಮ್ಮ ತಮ್ಮ ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿರುವುದು ಮತ್ತೆ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಬಿಜೆಪಿ ಪಕ್ಷ ಈ ಬಾರಿ ಬಂಗಾಳದಲ್ಲಿ ಹೇಗಾದರೂ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕು ಎಂದು ನಿರ್ಧರಿಸಿದೆ. ಪರಿಣಾಮ ಟಿಎಂಸಿ ನಾಯಕರು ತಮ್ಮ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗುತ್ತಿದ್ದಂತೆ ಟಿಎಂಸಿ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರನ್ನು ಬಿಜೆಪಿ ತನ್ನಡೆ ಸೆಳೆಯುವ ಕೆಲಸವನ್ನು ಮಾಡುತ್ತಲೇ ಇದೆ. ಈವರೆಗೆ ಸಚಿವರು ಸೇರಿದಂತೆ 7 ಜನ ಶಾಸಕರು ಮತ್ತು ಅಸಂಖ್ಯಾತ ಟಿಎಂಸಿ ಕಾರ್ಯಕರ್ತರನ್ನು ಬಿಜೆಪಿ ತನ್ನೆಡೆ ಸೆಳೆದಿದೆ. 

ಈ ನಡುವೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವ ಲಕ್ಷ್ಮಿ ರತನ್‌ ಶುಕ್ಲಾ ಮಂಗಳವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಾರಿಗೆ ಸಚಿವ ಸುವೇಂದು ಅಧಿಕಾರಿ ಟಿಎಂಸಿ ಪಕ್ಷ ತೋರೆದ ಹದಿನೈದು ದಿನಗಳ ಬಳಿಕ ಶುಕ್ಲಾ ರಾಜೀನಾಮೆ ನೀಡಿರುವುದು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ತಕ್ಕಮಟ್ಟಿಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಲಕ್ಷ್ಮಿ ರತನ್‌ ಶುಕ್ಲಾ ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗದೀಪ್‌ ಧನ್‌ಕರ್‌ ಅವರಿಗೆ ಕಳುಹಿಸಿದ್ದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲಹೆ ಮೇರೆಗೆ ರಾಜ್ಯಪಾಲ ಜಗದೀಪ್‌ ಧನ್‌ಕರ್‌ ಅವರು ಸಚಿವ ಲಕ್ಷ್ಮಿ ರತನ್ ಶುಕ್ಲಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Boris Johnson: ಇಂಗ್ಲೆಂಡ್​ನಲ್ಲಿ ಕೈಮೀರಿದ ಕೊರೋನಾ ಸ್ಥಿತಿ; ಭಾರತದ ಭೇಟಿ ರದ್ದುಗೊಳಿಸಿದ ಬ್ರಿಟನ್ ಪ್ರಧಾನಿ ಬೋರಿಸ್

ಪಶ್ಚಿಮ ಬಂಗಾಳ ರಾಜ್ಯದ ರಣಜಿ ಕ್ರಿಕೆಟ್ ತಂಡದ ಮಾಜಿ ನಾಯಕ ಲಕ್ಷ್ಮಿ ರತನ್‌ ಶುಕ್ಲಾ ಹೌರಾ (ಉತ್ತರ) ಕ್ಷೇತ್ರದ ಶಾಸಕರಾಗಿದ್ದು, ರಾಜಕೀಯದಿಂದ ನಿವೃತ್ತಿ ಹೊಂದಲು ನಿರ್ಧರಿಸಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, "ಶುಕ್ಲಾ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕ್ರೀಡೆಗಾಗಿ ಹೆಚ್ಚಿನ ಸಮಯ ನೀಡಲು ಬಯಸಿದ್ದು, ಶಾಸಕರಾಗಿ ಮುಂದುವರಿಯಲಿದ್ದಾರೆ. ಇದನ್ನು ನಕಾರಾತ್ಮಕ ರೀತಿಯಲ್ಲಿ ತೆಗೆದುಕೊಳ್ಳುವುದು ಬೇಡ" ಎಂದು ಹೇಳಿದ್ದಾರೆ.
Published by: MAshok Kumar
First published: January 6, 2021, 9:25 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories