ಅಮೆರಿಕಾ ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿದ ಭಾರತೀಯ ಮೂಲದ ಕಮಲಾ ಹ್ಯಾರೀಸ್; ಟ್ರಂಪ್ ಹಾದಿ ಇನ್ನೂ ಸುಗಮ

2020ರ ವೇಳೆಗೆ ವಿಶ್ವದ ದೊಡ್ಡಣ್ಣ ಅಮೆರಿಕ ದೇಶದ ಅಧ್ಯಕ್ಷೀಯ ಪದವಿಗೆ ಚುನಾವಣೆ ನಡೆಯಲಿದೆ. ರಿಪಬ್ಲಿಕ್ ಪಕ್ಷದಿಂದ ಪ್ರಸ್ತುತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾಗಿದೆ. ಮತ್ತೊಂದು ಪ್ರಮುಖ ಪಕ್ಷವಾದ ಡೆಮಾಕ್ರಟಿಕ್ ಪಕ್ಷದಿಂದ ಭಾರತೀಯ ಮೂಲದ ಸೆನೆಟರ್ ಕಮಲಾ ಹ್ಯಾರೀಸ್ ಸ್ಫರ್ಧೆ ನಡೆಸುವವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದರು.

MAshok Kumar | news18-kannada
Updated:December 4, 2019, 8:47 AM IST
ಅಮೆರಿಕಾ ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿದ ಭಾರತೀಯ ಮೂಲದ ಕಮಲಾ ಹ್ಯಾರೀಸ್; ಟ್ರಂಪ್ ಹಾದಿ ಇನ್ನೂ ಸುಗಮ
ಅಮೆರಿಕದ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರೀಸ್​.
  • Share this:
ವಾಷಿಂಗ್ಟನ್ (ಡಿಸೆಂಬರ್ 04); ಭಾರತೀಯ ಮೂಲದ ಅಮೆರಿಕ ಸೆನೆಟರ್ ಕಮಲಾ ಹ್ಯಾರೀಸ್ ಅಚ್ಚರಿಯ ಬೆಳವಣಿಗೆಯಲ್ಲಿ ತಾವು ಯುಎಸ್ ಡೆಮಾಕ್ರಟಿಕ್ ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

2020ರ ವೇಳೆಗೆ ವಿಶ್ವದ ದೊಡ್ಡಣ್ಣ ಅಮೆರಿಕ ದೇಶದ ಅಧ್ಯಕ್ಷೀಯ ಪದವಿಗೆ ಚುನಾವಣೆ ನಡೆಯಲಿದೆ. ರಿಪಬ್ಲಿಕ್ ಪಕ್ಷದಿಂದ ಪ್ರಸ್ತುತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾಗಿದೆ. ಮತ್ತೊಂದು ಪ್ರಮುಖ ಪಕ್ಷವಾದ ಡೆಮಾಕ್ರಟಿಕ್ ಪಕ್ಷದಿಂದ ಭಾರತೀಯ ಮೂಲದ ಸೆನೆಟರ್ ಕಮಲಾ ಹ್ಯಾರೀಸ್ ಸ್ಫರ್ಧೆ ನಡೆಸುವವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದರು.

ಆದರೆ, ಮಂಗಳವಾರ ಟ್ವೀಟ್ ಮಾಡುವ ಮೂಲಕ ತಮ್ಮ ರಾಜಕೀಯ ನಡೆಯನ್ನು ಸ್ಪಷ್ಟಪಡಿಸಿರುವ ಕಮಲ ಹ್ಯಾರೀಸ್​ ತಾವು ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ತಿಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

“ನನ್ನ ಬೆಂಬಲಿಗರ ಪಾಲಿಗೆ ಇದು ತೀವ್ರ ವಿಷಾಧದ ನಿರ್ಧಾರ. ಆದರೆ, ಅವರೆಡೆಗಿನ ಕೃತಜ್ಞತೆಯೊಂದಿಗೆ ನಾನು ನನ್ನ ಅಭಿಯಾನವನ್ನು ಇಲ್ಲಿಗೆ ಸ್ಥಗಿತಗೊಳಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ನಾನು ನಿಮಗೊಂದು ವಿಚಾರವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಈ ಅಭಿಯಾನದಲ್ಲಿ ನಾನು ಪ್ರತಿದಿನವೂ ಹೋರಾಡುತ್ತೇನೆ. ಎಲ್ಲಾ ಜನರಿಗೂ ನ್ಯಾಯ ದಕ್ಕುವವರೆಗೆ ನನ್ನ ಹೋರಾಟ ಮುಂದುವರೆಯುತ್ತದೆ” ಎಂದು ಹ್ಯಾರಿಸ್ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.ಡೆಮಾಕ್ರಟಿಕ್ ಪಕ್ಷ ಕಳೆದ ಜನವರಿಯಲ್ಲೇ ಪಕ್ಷದೊಳಗೆ ಅಧ್ಯಕ್ಷೀಯ ಸ್ಪರ್ಧೆಯನ್ನು ಘೋಷಿಸಿತ್ತು. ಈ ಸಂದರ್ಭದಲ್ಲಿ ಮಾಜಿ ಉಪಾಧ್ಯಕ್ಷ ಜೋ ಬಿಡನ್ ಹಾಗೂ ಕಮಲಾ ಹ್ಯಾರೀಸ್ ನಡುವೆ ಅಧ್ಯಕ್ಷೀಯ ಪದವಿಗೆ ತೀವ್ರ ಪೈಪೋಟಿ ಇತ್ತು. ಆದರೆ, 20 ಸಾವಿರ ಬೆಂಬಲಿಗರೊಂದಿಗೆ ಕಮಲಾ ಹ್ಯಾರೀಸ್ ಪಕ್ಷದೊಳಗೆ ತಮ್ಮ ಪ್ರಭಾವವನ್ನು ಬೀರುವ ಮೂಲಕ ಡೆಮಾಕ್ರಟಿಕ್ ಪಕ್ಷದ ಅಧಿಕೃತ ಅಧ್ಯಕ್ಷೀಯ ಅಭ್ಯರ್ಥಿ ಎನಿಸಿಕೊಂಡಿದ್ದರು.

ಆದರೆ, ಇತ್ತೀಚೆಗೆ ನಡೆದ ಸಮೀಕ್ಷೆಯಲ್ಲಿ ಅಮೆರಿಕದ ಮತದಾರರು ಕಮಲಾ ಹ್ಯಾರೀಸ್ ಅವರಿಗೆ ಕೇವಲ ಶೇ. 3ರಷ್ಟು ಮಾತ್ರ ಮತ ನೀಡಿದ್ದರು. ಅಲ್ಲದೆ, ಚುನಾವಣಾ ಅಭಿಯಾನ ನಡೆಸುವುದಕ್ಕೂ ಸಹ ಕಮಲಾ ಹ್ಯಾರೀಸ್ ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅವರು ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಬಹಿರಂಗವಾಗಿಯೂ ಮಾತನಾಡಿರುವ ಕಮಲಾ ಹ್ಯಾರೀಸ್, “ನಾನು ಕೋಟ್ಯಾಧಿಪತಿಯಲ್ಲ. ಹೀಗಾಗಿ ನನ್ನ ಸ್ವಂತ ಅಭಿಯಾನಕ್ಕೆ ಧನ ಸಹಾಯ ನೀಡಲು ಸಾಧ್ಯವಾಗುತ್ತಿಲ್ಲ. ನಾವು ಚುನಾವಣೆಗೆ ಸ್ಪರ್ಧಿಸಲು ಬೇಕಾದ ಹಣವನ್ನು ಸಂಗ್ರಹಿಸುವುದು ಸಹ ಕಷ್ಟಕರವಾಗಿದೆ. ಆದ್ದರಿಂದ ನನ್ನ ಅಭಿಯಾನವನ್ನು ಇಲ್ಲಿಗೆ ಸ್ಥಗಿತಗೊಳಿಸುವುದಕ್ಕೆ ನಾನು ನನ್ನ ಬೆಂಬಲಿಗರ ಬಳಿ ತೀವ್ರವಾಗಿ ವಿಷಾಧಿಸುತ್ತೇನೆ. ಇದು ನನ್ನ ಜೀವನದ ಅತ್ಯಂತ ಕಠಿಣ ನಿರ್ಧಾರ” ಎಂದಿದ್ದಾರೆ.

ಇದನ್ನೂ ಓದಿ : ಅನರ್ಹ ಶಾಸಕರಿಗೆ ಪ್ರವೇಶವಿಲ್ಲ ಎಂಬ ಭಿತ್ತಿಪತ್ರ ಮನೆ ಬಾಗಿಲಿಗೆ ಹಾಕಿದ ಕೆ.ಆರ್.ಪೇಟೆಯ ಹೆಮ್ಮನಹಳ್ಳಿ ಗ್ರಾಮಸ್ಥರು
First published: December 4, 2019, 8:44 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading