Sharad Pawar: ರಾಷ್ಟ್ರಪತಿ ಚುನಾವಣೆ ರೇಸ್‌ನಿಂದ ಹಿಂದೆ ಸರಿದ ಶರದ್ ಪವಾರ್! ಹಿರಿಯ ರಾಜಕಾರಣಿ ನಿರ್ಧಾರದ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ

ಮುಖ್ಯವಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರ ಹೆಸರು ಕೇಳಿ ಬರುತ್ತಿದೆ. ಆದರೆ “ನಾನು ಈ ರೇಸ್‌ನಲ್ಲಿ ಇಲ್ಲ” ಅಂತ ಖುದ್ದು ಶರದ್ ಪವಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ಇದೀಗ ಈ ಹಿರಿಯ ರಾಜಕಾರಣಿ ನಿರ್ಧಾರದ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್

  • Share this:
ನವದೆಹಲಿ: ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ramnath Kovind) ಅವರ ಅವಧಿ (Term) ಜುಲೈ 24ರಂದು ಮುಕ್ತಾಯವಾಗಲಿದೆ. ಕೊನೆಯ ಅಧ್ಯಕ್ಷೀಯ ಚುನಾವಣೆಯು (Presidential Election) 17 ಜುಲೈ 2017 ರಂದು ನಡೆದಿತ್ತು. ಇದೀಗ ಮುಂದಿನ ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಹಾಲಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ, ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ  ನಡೆಯಲಿದೆ. ಜುಲೈ 21ಕ್ಕೆ ಮತ ಎಣಿಕೆ ಕಾರ್ಯ (Counting) ನಡೆಯಲಿದೆ. ಇನ್ನು ರಾಮನಾಥ್ ಕೋವಿಂದ್ ನಂತರ ದೇಶದ ಮುಂದಿನ ಪ್ರಥಮ ಪ್ರಜೆ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಮುಖ್ಯವಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಸಿಪಿ ಮುಖ್ಯಸ್ಥ (NCP Chief) ಶರದ್ ಪವಾರ್ (Sharad Pawar) ಅವರ ಹೆಸರು ಕೇಳಿ ಬರುತ್ತಿದೆ. ಆದರೆ “ನಾನು ಈ ರೇಸ್‌ನಲ್ಲಿ (Race) ಇಲ್ಲ” ಅಂತ ಖುದ್ದು ಶರದ್ ಪವಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ಇದೀಗ ಈ ಹಿರಿಯ ರಾಜಕಾರಣಿ ನಿರ್ಧಾರದ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ರಾಷ್ಟ್ರಪತಿ ರೇಸ್‌ನಿಂದ ಹಿಂದೆ ಸರಿದ ಶರದ್ ಪವಾರ್

ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ "ನಾನು ರಾಷ್ಟ್ರಪತಿ ಚುನಾವಣೆಯ ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ" ಅಂತ 81 ವರ್ಷದ ಮಾಜಿ ರಕ್ಷಣಾ ಸಚಿವ, ಹಿರಿಯ ರಾಜಕಾರಣಿ ಶರದ್ ಪವಾರ್ ಹೇಳಿದ್ದಾರೆ.

ಶರದ್‌ ಪವಾರ್ ಬೆಂಬಲಕ್ಕೆ ನಿಂತಿದ್ದ ಕಾಂಗ್ರೆಸ್

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ರಕ್ಷಣಾ ಸಚಿವರು ಹಾಗೂ ಎನ್‌ಸಿಪಿ ಮುಖ್ಯಸ್ಥರೂ ಆಗಿವರು ಶರದ್ ಪವಾರ್​ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಪ್ರತಿಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಲು ನಿರ್ಧರಿಸಿದ್ದವು. ಕಾಂಗ್ರೆಸ್​ ಕೂಡ ಇದಕ್ಕೆ ತನ್ನ ಬೆಂಬಲ ಘೋಷಿಸಿತ್ತು. ಆದರೆ, ಈ ಅವಕಾಶವನ್ನು ಶರದ್ ಪವಾರ್​ ನಿರಾಕರಿಸಿದ್ದಾರೆ ಅಂತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Presidential Election: ರಾಷ್ಟ್ರಪತಿ ಚುನಾವಣೆ ನಡೆಯುವುದು ಹೇಗೆ? ಪ್ರಥಮ ಪ್ರಜೆಯನ್ನು ಆಯ್ಕೆ ಮಾಡುವವರು ಯಾರು?

ಶರದ್ ಪವಾರ್ ಜನರ ಜೊತೆ ಇರಲು ಇಷ್ಟಪಡುತ್ತಾರೆ

ಶರದ್​ ಪವಾರ್​ ಅವರು ಸದಾ ಸಾಮಾನ್ಯ ಜನರೊಂದಿಗೆ ಇರುವ ವ್ಯಕ್ತಿ. ಅವರು ತಮ್ಮನ್ನು ರಾಷ್ಟ್ರಪತಿ ಭವನಕ್ಕೆ ಸೀಮಿತಗೊಳಿಸಿಕೊಳ್ಳಲು ಇಷ್ಟ ಪಡುತ್ತಿಲ್ಲ ಅಂತ ಎನ್‌ಸಿಪಿ ಮುಖಂಡರು ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ಕೆಲಸದಲ್ಲಿ ಪವಾರ್ ನಿರತರಾಗಿದ್ದಾರೆ ಎಂದು ವರದಿಯಾಗಿದೆ.

“ಗುಲಾಂ ನಬಿ ಆಜಾದ್ ಸಮರ್ಥ ವ್ಯಕ್ತಿ”

ನಿನ್ನೆ ಸಂಜೆ ಮುಂಬೈನಲ್ಲಿ ನಡೆದ ತಮ್ಮ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ)ಸಭೆಯಲ್ಲಿ ಶರದ್ ಪವಾರ್ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಸಮರ್ಥ ಆಯ್ಕೆಯಾಗಿದ್ದಾರೆ ಎಂದು ಎನ್‌ಸಿಪಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Presidential Election: ರಾಷ್ಟ್ರಪತಿ ಚುನಾವಣೆಗೆ ಜುಲೈ 18ರಂದು ಮುಹೂರ್ತ, ಯಾರಾಗ್ತಾರೆ ಭಾರತದ ಮುಂದಿನ ಪ್ರಥಮ ಪ್ರಜೆ?

ಶರದ್ ಪವಾರ್ ನಿರ್ಧಾರಕ್ಕೆ ಕಾರಣವೇನು?

ಶರದ್ ಪವಾರ್ ಅವರ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಇದೆ ಎಂದು ಹೇಳಲಾಗುತ್ತಿದೆ.  ವಿರೋಧ ಪಕ್ಷಗಳ ಬಳಿ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಬೇಕಾದ ಜನಪ್ರತಿನಿಧಿಗಳ ಸಂಖ್ಯೆ ಇಲ್ಲ.. ಅಥವಾ ಮತಗಳ ಸಂಖ್ಯೆಯನ್ನು ಸಂಗ್ರಹಿಸುವ ವಿಶ್ವಾಸವಿಲ್ಲ. ಯಾಕೆಂದ್ರೆ ಬಿಜೆಪಿ ಮಾತ್ರ 300 ಸದಸ್ಯರನ್ನು ಹೊಂದಿದೆ , ಅದು ದೊಡ್ಡ ಸಂಖ್ಯೆಯಾಗಿದೆ. ಇದೇ ಕಾರಣಕ್ಕಾಗಿ ಪವಾರ್ ರಾಷ್ರ್ಪಪತಿ ಅಭ್ಯರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
Published by:Annappa Achari
First published: