ಮುಂಬೈ: ಕರ್ನಾಟಕ ಸರ್ಕಾರದ (Karnataka Government) ಜೊತೆಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Chief Minister Eknath Shinde) ಅವರು ಇಂದು ರಾಜ್ಯ ವಿಧಾನಸಭೆಯಲ್ಲಿ (Vidhan Sabhe) ದಶಕಗಳಷ್ಟು ಹಳೆಯ ಗಡಿ ವಿವಾದದ ಬಗ್ಗೆ ನಿರ್ಣಯ ಮಂಡಿಸಿದರು. ಬೆಳಗಾವಿ (Belgavi), ಕಾರವಾರ (Karwara), ನಿಪ್ಪಾಣಿ (Nippani), ಬೀದರ್ (Bidar) ಭಾಲ್ಕಿ ಸೇರಿದಂತೆ 865 ಗ್ರಾಮಗಳನ್ನು ರಾಜ್ಯಕ್ಕೆ ಸೇರಿಸಿಕೊಳ್ಳಲು ಸರ್ವೋಚ್ಚ ನ್ಯಾಯಾಲಯದಲ್ಲಿ (High Court) ಬಾಕಿ ಉಳಿದಿರುವ ಪ್ರಕರಣಗಳ ವಿರುದ್ಧ ಹೋರಾಡಲು ಮಹಾರಾಷ್ಟ್ರ ಸಂಪೂರ್ಣ ಶಕ್ತವಾಗಿದೆ. ಗಡಿ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಮರಾಠಿ (Marati) ವಿರೋಧಿ ನಿಲುವನ್ನು ಖಂಡಿಸಿದೆ ಎಂದು ತಿಳಿಸಿದ್ದಾರೆ.
ಗಡಿ ವಿವಾದದ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಶಿಂಧೆ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.
865 ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿದ್ದು, ಅವರೊಂದಿಗೆ ರಾಜ್ಯ ಸರ್ಕಾರ ದೃಢವಾಗಿ ನಿಂತಿದೆ. "ಕರ್ನಾಟಕದಲ್ಲಿರುವ 865 ಮರಾಠಿ ಮಾತನಾಡುವ ಹಳ್ಳಿಗಳನ್ನು ರಾಜ್ಯಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಕಾನೂನುಬದ್ಧವಾಗಿ ಹೋರಾಟ ನಡೆಸುತ್ತದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.
ಕರ್ನಾಟಕಕ್ಕೆ ತಿಳುವಳಿಕೆ ಹೇಳುವಂತೆ ಅಮಿತ್ ಶಾಗೆ ಶಿಂಧೆ ಮನವಿ
ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಒತ್ತಾಯಿಸಬೇಕು. ಗಡಿ ಭಾಗದ ಮರಾಠಿ ಜನರ ಸುರಕ್ಷತೆಗೆ ಕರ್ನಾಟಕ ಸರ್ಕಾರಕ್ಕೆ ತಿಳುವಳಿಕೆ ನೀಡಬೇಕು ಎಂದು ನಿರ್ಣಯದ ಮೂಲಕ ಒತ್ತಾಯಿಸಿದ್ದಾರೆ.
ಉದ್ಧವ್ ಠಾಕ್ರೆ ವಿರುದ್ಧ ಏಕನಾಥ್ ಶಿಂಧೆ ವಾಗ್ದಾಳಿ
ಇದೇ ವೇಳೆ ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂದು ಒತ್ತಾಯಿಸಿದ ಹಿಂದಿನ ಮಹಾರಾಷ್ಟ್ರ ವಿಕಾಸ್ ಅಘಾಡಿ ನಾಯಕ ಉದ್ಧವ್ ಠಾಕ್ರೆ ವಿರುದ್ಧವೂ ಏಕನಾಥ್ ಶಿಂಧೆ ಅವರು ವಾಗ್ದಾಳಿ ನಡೆಸಿದರು.
ನಮಗೆ ಬೇರೆಯವರಿಂದ ಪಾಠ ಕಲಿಯುವ ಅಗತ್ಯವಿಲ್ಲ. ಗಡಿ ಪ್ರದೇಶದಲ್ಲಿ ವಾಸಿಸುವವರ ಜೊತೆ ನಾವು ದೃಢವಾಗಿ ನಿಂತಿದ್ದೇವೆ. ನಾಳೆ ವಿಧಾನಸಭೆಯಲ್ಲಿ ನಿರ್ಣಯವನ್ನು ಜಾರಿಗೆ ತರುತ್ತಿದ್ದೇವೆ ಎಂದು ತಿಳಿಸಿದರು.
ಗಡಿ ವಿವಾದದ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದ ಕರ್ನಾಟಕ
ಈ ಮುನ್ನ ಗುರುವಾರ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಕುರಿತು ಕರ್ನಾಟಕ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು. ಈ ವೇಳೆ ದಕ್ಷಿಣ ರಾಜ್ಯದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ನೆರೆಯವರಿಗೆ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡದಂತೆ ನಿರ್ಧರಿಸಿದೆ ನಿರ್ಣಯ ಮಂಡಿಸಿತ್ತು.
ಠಾಕ್ರೆ ಅಧಿಕಾರವಧಿಯಲ್ಲಿ ಗಡಿ ಸಮಸ್ಯೆ ಪರಿಹಾರ ಕಂಡುಕೊಳ್ಳಲಿಲ್ಲ
ಮಂಗಳವಾರ ಬೆಳಗ್ಗೆ ವಿಧಾನಸಭೆ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಉದ್ಧವ್ ಠಾಕ್ರೆ ವಿರುದ್ಧ ಕಿಡಿಕಾರಿದರು. ಉದ್ಧವ್ ಠಾಕ್ರೆ ಅವರು ತಮ್ಮ ಅಧಿಕಾರಾವಧಿಯಲ್ಲಿ ಗಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದಾರೆ. 2.5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಏನು ಮಾಡದೇ ಇರುವುದು ನನಗೆ ಆಶ್ಚರ್ಯವನ್ನುಂಟು ಮಾಡಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಗಡಿ ವಿವಾದ ಪ್ರಾರಂಭವಾಗಿಲ್ಲ ಎಂದು ಹೇಳಿದರು.
1960ನೇ ಇಸವಿಯಿಂದ ಗಡಿ ವಿವಾದ ಆರಂಭ
1960ನೇ ಇಸವಿ ಮೇ ತಿಂಗಳಲ್ಲಿ ಪ್ರಾರಂಭವಾದಾಗಿನಿಂದ, ಬೆಳಗಾವಿ ಸೇರಿದಂತೆ 865 ಗ್ರಾಮಗಳನ್ನು ರಾಜ್ಯಕ್ಕೆ ವಿಲೀನಗೊಳಿಸಬೇಕೆಂದು ಮಹಾರಾಷ್ಟ್ರವು ಪ್ರತಿಪಾದಿಸುತ್ತಾ ಬಂದಿದೆ. ಆದರೆ, ಕರ್ನಾಟಕ ತನ್ನ ಭೂಪ್ರದೇಶವನ್ನು ಬೇರ್ಪಡಿಸಲು ನಿರಾಕರಿಸಿದೆ. ಐತಿಹಾಸಿಕವಾಗಿ, ಬೆಳಗಾವಿಯು ಕನ್ನಡ ಪ್ರದೇಶದ ಒಂದು ಭಾಗವಾಗಿದೆ. ಅನೇಕ ಕನ್ನಡಿಗ ರಾಜವಂಶಗಳು ಅಲ್ಲಿ ಆಳ್ವಿಕೆ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ