‘ಕಮಲ್​​ನಾಥ್​​​​ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ‘: ಮಾಜಿ ಸಿಎಂ ಶಿವರಾಜ್​​ ಸಿಂಗ್​​ ಚವ್ಹಾಣ್​​

ರಾಹುಲ್​ ಗಾಂಧಿಯವರ ಆಪ್ತ ವಲಯದಲ್ಲಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್​ ತೊರೆದಿದ್ದಾರೆ. ಜತೆಗೆ ಬಿಜೆಪಿಯನ್ನು ಇಂದು ಸಂಜೆಯೇ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಮಿತ್​ ಶಾ ಮತ್ತು ಮೋದಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿಯೇ ಇಂತದ್ದೊಂದು ಊಹಾಪೋಹ ಕೇಳಿ ಬರತೊಡಗಿತ್ತು. ಇದೀಗ ಎಲ್ಲಾ ಊಹಾಪೋಹಗಳಿಗೂ ತೆರೆ ಬಿದ್ದಿತ್ತು ಕಾಂಗ್ರೆಸ್​ ತೊರೆದು ಸಿಂಧಿಯಾ ಹೊರ ನಡೆದಿದ್ದಾರೆ.

ಸಿಎಂ ಶಿವರಾಜ್​​ ಸಿಂಗ್​​ ಚವ್ಹಾಣ್​ ​, ಮಾಜಿ ಸಿಎಂ ಕಮಲ್​​ನಾಥ್​

ಸಿಎಂ ಶಿವರಾಜ್​​ ಸಿಂಗ್​​ ಚವ್ಹಾಣ್​ ​, ಮಾಜಿ ಸಿಎಂ ಕಮಲ್​​ನಾಥ್​

 • Share this:
  ಭೋಪಾಲ್​​​(ಮಾ.10): ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಈಗಾಗಲೇ ಹಿರಿಯ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ 22 ಮಂದಿ ಶಾಸಕರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಿನ್ನೆ ತಡರಾತ್ರಿಯಿಂದ ಕಂಡು ಬರುತ್ತಿರುವ ಈ ಹಠಾತ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸರ್ಕಾರ ತೀವ್ರ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದೆ ಎಂಬುದು ಖಾತ್ರಿಯಾಗಿದೆ. ಇನ್ನೇನು ಕಮಲ್‍ನಾಥ್ ಸರ್ಕಾರಕ್ಕೆ ಆಪರೇಷನ್ ಕಮಲಕ್ಕೆ ಬಲಿಯಾಗುತ್ತಿದೆ ಎನ್ನುತ್ತಿರುವಾಗಲೇ ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಶಿವರಾಜ್​​ ಸಿಂಗ್​​ ಚವ್ಹಾಣ್​​ ಅಚ್ಚರಿ ಹೇಳಿಕೆ ನೀಡಿದ್ದಾರೆ. ನಮಗೆ ಮಧ್ಯಪ್ರದೇಶ ಸರ್ಕಾರ ಉರುಳಿಸುವ ಯಾವುದೇ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಮಾಜಿ ಸಿಎಂ ಶಿವರಾಜ್​​ ಸಿಂಗ್​​ ಚವ್ಹಾಣ್, ಕಮಲ್‍ನಾಥ್ ಸರ್ಕಾರ ಬೀಳಿಸುವ ಆಸಕ್ತಿಯಾಗಲಿ ಅಥವಾ ಉದ್ದೇಶವಾಗಲಿ ಬಿಜೆಪಿಗಿಲ್ಲ. ನಾವು ಆಪರೇಷನ್​​​ ಕಮಲ ಮಾಡುತ್ತಿಲ್ಲ. ಇದು ಕಾಂಗ್ರೆಸ್​​ ಪಕ್ಷದೊಳಗಿನ ಅಸಮಾಧಾನವೇ ಹೊರತು ಇದರ ಹಿಂದೆ ಬಿಜೆಪಿ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.

  ಇನ್ನೊಂದೆ ಬಿಜೆಪಿ ಧುರೀಣ ನರೋತ್ತರ್ ಮಿಶ್ರಾ ಕಮಲ್‍ನಾಥ್ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಕಮಲ್‍ನಾಥ್ ಜೊತೆ ಆರಂಭದಿಂದಲೂ ಕಾಂಗ್ರೆಸ್ ಪ್ರಭಾವಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಭಿನ್ನಾಭಿಪ್ರಾಯ ಹೊಂದಿದ್ದರು. ಆದರೀಗ, ಕಾಂಗ್ರೆಸ್​​ ವರಿಷ್ಠರ ನಡೆಯಿಂದ ಬೇಸತ್ತ ಜ್ಯೋತಿರಾಧಿತ್ಯ ಸಿಂಧಿಯಾ ನೇತೃತ್ವದ ತಂಡ ರಾಜೀನಾಮೆ ನೀಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದೆ ಎಂದು ಹೇಳಿದ್ದಾರೆ. ಇನ್ನು ಶಿವರಾಜ್​​ ಸಿಂಗ್​ ಚವ್ಹಾಣ್ ಮತ್ತು ನರೋತ್ತರ್ ಮಿಶ್ರಾ ಅವರ ಭಿನ್ನ ಹೇಳಿಕೆಗಳು ಬಿಜೆಪಿ ವಲಯದಲ್ಲೇ ಗೊಂದಲ ಸೃಷ್ಟಿಸಿವೆ.

  ರಾಹುಲ್​ ಗಾಂಧಿಯವರ ಆಪ್ತ ವಲಯದಲ್ಲಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್​ ತೊರೆದಿದ್ದಾರೆ. ಜತೆಗೆ ಬಿಜೆಪಿಯನ್ನು ಇಂದು ಸಂಜೆಯೇ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಮಿತ್​ ಶಾ ಮತ್ತು ಮೋದಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿಯೇ ಇಂತದ್ದೊಂದು ಊಹಾಪೋಹ ಕೇಳಿ ಬರತೊಡಗಿತ್ತು. ಇದೀಗ ಎಲ್ಲಾ ಊಹಾಪೋಹಗಳಿಗೂ ತೆರೆ ಬಿದ್ದಿತ್ತು ಕಾಂಗ್ರೆಸ್​ ತೊರೆದು ಸಿಂಧಿಯಾ ಹೊರ ನಡೆದಿದ್ದಾರೆ.

  ಇದನ್ನೂ ಓದಿ: ಕಾಂಗ್ರೆಸ್​ಗೆ ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ: ಪತನದತ್ತ ಮಧ್ಯಪ್ರದೇಶ ಕಾಂಗ್ರೆಸ್​ ಸರ್ಕಾರ

  ಜ್ಯೋತಿರಾಧಿತ್ಯ ಸಿಂಧಿಯಾ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ ಭೇಟಿ ಬಳಿಕ ದೆಹಲಿಯಲ್ಲಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಸಿಂಧಿಯಾ ಬೆಂಬಲಿಗ 14 ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ವೈಟ್​ಫೀಲ್ಡ್​ನ ರೆಸಾರ್ಟ್​ನಲ್ಲಿರುವ ಶಾಸಕರು ಇ-ಮೇಲ್​ ಮುಖೇನ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಮಧ್ಯಪ್ರದೇಶ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದ 22 ಸಚಿವರು ಮತ್ತು 14 ಶಾಸಕರು ಸಿಂಧಿಯಾ ಪರ ಇರುವ ಸಂದೇಶವನ್ನು ಸ್ಪಷ್ಟವಾಗಿ ರವಾನಿಸಿದ್ದಾರೆ.ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಸಿಂಧಿಯಾ ಖುದ್ದು ತಮ್ಮ ಟ್ವಿಟ್ಟರ್​ ಖಾತೆಯನ್ನು ಪೋಸ್ಟ್​ ಮಾಡಿದ್ದಾರೆ. ಪತ್ರದಲ್ಲಿ ತಮ್ಮ 18 ವರ್ಷಗಳ ಕಾಂಗ್ರೆಸ್​ ಪಯಣವನ್ನು ಅಂತ್ಯಗೊಳಿಸುತ್ತಿರುವುದಾಗಿ ಹೇಳಿರುವ ಅವರು, ಹೊಸ ಅಧ್ಯಾಯವನ್ನು ಇಂದಿನಿಂದ ಆರಂಭಿಸುವುದಾಗಿ ತಿಳಿಸಿದ್ದಾರೆ.

  ಒಂದೆಡೆ ಜ್ಯೋತಿರಾಧಿತ್ಯ ಸಿಂಧಿಯಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರೆ, ಕಾಂಗ್ರೆಸ್​ ಸಿಂಧಿಯಾರನ್ನು ಉಚ್ಛಾಟಿಸಿದೆ. ಪಕ್ಷವಿರೋಧಿ ಕೆಲಸದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆ ಸೋನಿಯಾ ಗಾಂಧಿಯವರ ಸೂಚನೆ ಮೇಲೆ ಉಚ್ಛಾಟಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್​ ಪತ್ರ ಹೊರಡಿಸಿದ್ದಾರೆ.
  First published: