24 ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಶಿವಸೇನೆ

ಬಹುಮತ ಇಲ್ಲದಿದ್ದರೂ ಸಂವಿಧಾನ ಬಾಹಿರವಾಗಿ ರಚನೆಯಾಗಿರುವ ಸರ್ಕಾರಕ್ಕೆ ಭಾನುವಾರ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಬೇಕು ಎಂದು ಶಿವಸೇನೆ ಅರ್ಜಿಯಲ್ಲಿ ಮನವಿ ಮಾಡಿದೆ.  

HR Ramesh | news18-kannada
Updated:November 23, 2019, 8:35 PM IST
24 ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಶಿವಸೇನೆ
ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ (ಸಾಂದರ್ಭಿಕ ಚಿತ್ರ)
  • Share this:
ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿದ ರಾಜ್ಯಪಾಲ ಭಗತ್ ಸಿಂಗ್ ಕೌಶಿಯಾರಿ ಅವರ ನಿರ್ಧಾರ ನಿರಂಕುಶ ಮತ್ತು ದುರುದ್ದೇಶದಿಂದ ಕೂಡಿದ್ದು ಎಂದು ಆರೋಪಿಸಿ, ರಾಜ್ಯಪಾಲದ ನಿರ್ಧಾರ ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ರಾಜ್ಯಪಾಲದ ವಿರುದ್ಧ ಶಿವಸೇನೆ ಅಪೆಕ್ಸ್ ಕೋರ್ಟ್​ನಲ್ಲಿ ಅರ್ಜಿ ದಾಖಲಿಸಿದೆ. ಈ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ಇಂದು ರಾತ್ರಿ ವಿಚಾರಣೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ ರಾಜ್ಯಪಾಲರು ದಿನಾಂಕ 23-11-2019ರ ಶನಿವಾರದಂದು ಬಿಜೆಪಿ ದೇವೇಂದ್ರ ಫಡ್ನವೀಸ್ ಅವರಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದು ದುರುದ್ದೇಶಪೂರ್ವಕವಾಗಿದೆ. ಅವರ ಈ ನಿರ್ಧಾರ ಕಾನೂನು ಹಾಗೂ ಸಂವಿಧಾನಬಾಹಿರವಾಗಿದೆ. ಬಿಜೆಪಿಗೆ ಸರ್ಕಾರ ರಚನೆಗೆ ಬೇಕಾದ ಬಹುಮತಕ್ಕೆ 40 ಸ್ಥಾನಗಳ ಕೊರತೆ ಇದ್ದರೂ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆ, ನವೆಂಬರ್ 10ರಂದು ಸರ್ಕಾರ ರಚಿಸುವಂತೆ ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿತ್ತು. ಆಗ, ಬಿಜೆಪಿ ಬಹುಮತಕ್ಕೆ ಬೇಕಾದ ಸಂಖ್ಯೆ ಇಲ್ಲದ ಕಾರಣ, ಸರ್ಕಾರ ರಚನೆಯಿಂದ ಹಿಂದೆ ಸರಿದಿತ್ತು. ಸರ್ಕಾರ ರಚನೆಗೆ ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಇದ್ದರೂ, ಬಹುಮತ ಇಲ್ಲದ ಪಕ್ಷಕ್ಕೆ ರಾಜ್ಯಪಾಲರು ಸರ್ಕಾರ ರಚಿಸಲು ಅವಕಾಶ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಇದನ್ನು ಓದಿ: ಶರದ್ ಪವಾರ್ ಮೇಲೆ ಅನುಮಾನ ಪಡಲು ಕಾರಣಗಳೇ ಇಲ್ಲ; ಎನ್​ಸಿಪಿಯ ಅಜಿತ್ ಬಿಜೆಪಿ ಜತೆ ಕೈಜೋಡಿಸಿದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ

ಬಹುಮತ ಇಲ್ಲದಿದ್ದರೂ ಸಂವಿಧಾನ ಬಾಹಿರವಾಗಿ ರಚನೆಯಾಗಿರುವ ಸರ್ಕಾರಕ್ಕೆ ಭಾನುವಾರ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಬೇಕು ಎಂದು ಶಿವಸೇನೆ ಅರ್ಜಿಯಲ್ಲಿ ಮನವಿ ಮಾಡಿದೆ.

ಒಂದು ವೇಳೆ ಇಂದು ರಾತ್ರಿಯೇ ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡರೆ ನಾಳೆ ಅಥವಾ ನಾಳಿದ್ದು ಬಹುಮತ ಸಾಬೀತು ಮಾಡುವಂತೆ ಬಿಜೆಪಿಗೆ ಸೂಚನೆ ನೀಡಬಹುದು ಎನ್ನಲಾಗಿದೆ.

First published:November 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading