ನ್ಯೂಜಿಲೆಂಡ್​ನ ಎರಡು ಮಸೀದಿಗಳಲ್ಲಿ ಶೂಟೌಟ್​; ಕೂದಲೆಳೆಯಲ್ಲಿ ಬಚಾವ್​ ಆಯ್ತು ಬಾಂಗ್ಲಾ ಕ್ರಿಕೆಟ್​ ತಂಡ!

ಸದ್ಯ ಪೊಲೀಸ್​ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಕ್ರಿಕೆಟ್​ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿದೆಯೇ ಎನ್ನುವ ಅನುಮಾನ ಕಾಡಿದೆ. ಇನ್ನು, ಶೂಟೌಟ್​ ವೇಳೆ ಸಾಕಷ್ಟು ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

Rajesh Duggumane | news18
Updated:March 15, 2019, 10:48 AM IST
ನ್ಯೂಜಿಲೆಂಡ್​ನ ಎರಡು ಮಸೀದಿಗಳಲ್ಲಿ ಶೂಟೌಟ್​; ಕೂದಲೆಳೆಯಲ್ಲಿ ಬಚಾವ್​ ಆಯ್ತು ಬಾಂಗ್ಲಾ ಕ್ರಿಕೆಟ್​ ತಂಡ!
ಸಾಂದರ್ಭಿಕ ಚಿತ್ರ
Rajesh Duggumane | news18
Updated: March 15, 2019, 10:48 AM IST
ವೆಲ್ಲಿಂಗ್ಟನ್ (ಮಾ.15)​: ನ್ಯೂಜಿಲೆಂಡ್​ನ ಕ್ರೈಸ್ಟ್​​ಚರ್ಚ್​​ನಲ್ಲಿರುವ ಎರಡು ಮಸೀದಿಗಳ ಮೇಲೆ ಶುಕ್ರವಾರ ಶೂಟೌಟ್​ ನಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ಬಾಂಗ್ಲಾ ಕ್ರಿಕೆಟ್​ ತಂಡದ ಆಟಗಾರರು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ.

ಹ್ಯಾಗ್ಲೆ ಪಾರ್ಕ್​ ಸಮೀಪ ಇದ್ದ ಮಸೀದಿ ಬಳಿ ಬಾಂಗ್ಲಾ ಕ್ರಿಕೆಟ್​ ತಂಡ ತೆರಳಿತ್ತು. ಗುಂಡಿನ ದಾಳಿ ನಡೆದ ನಂತರ ಎಲ್ಲ ಆಟಗಾರರು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಬಾಂಗ್ಲಾ ದೇಶದ ಪತ್ರಕರ್ತ ಮೊಹ್ಮದ್​ ಇಸ್ಲಾಮ್​ ಟ್ವೀಟ್ ಮಾಡಿದ್ದಾರೆ. ದೇವರು ನಮ್ಮನ್ನು ರಕ್ಷಿಸಿದ್ದಾನೆ ಎಂದು ಆಟಗಾರರು ಟ್ವೀಟ್​ ಮಾಡಿಕೊಂಡಿದ್ದಾರೆ.

ಮಸೀದಿ ಸಮೀಪ 6 ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಸ್ಥಳದಲ್ಲಿ ನಾಲ್ಕೈದು ಹೆಣಗಳು ಕಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಇದೊಂದು ಭಯೋತ್ಪಾದನಾ ದಾಳಿ ಎನ್ನಲಾಗಿದೆ. ಆಸ್ಟ್ರೇಲಿಯಾ ಮೂಲದ ವ್ಯಕ್ತಿ ಈ ದಾಳಿ ನಡೆಸಿದ್ದಾನೆ. ಆತ ಇನ್ನೂ ಜೀವಂತವಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ಬೆನ್ನಲ್ಲೇ ಮತ್ತೊಂದು ದಾಳಿ ನಡೆದಿದೆ.

ಸದ್ಯ ಪೊಲೀಸ್​ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಕ್ರಿಕೆಟ್​ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿದೆಯೇ ಎನ್ನುವ ಅನುಮಾನ ಕಾಡಿದೆ. ಇನ್ನು, ಶೂಟೌಟ್​ ವೇಳೆ ಸಾಕಷ್ಟು ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ದಾಳಿಗೆ ಸಾಕಷ್ಟು ಮಂದಿ ಖಂಡನೆ ವ್ಯಕ್ತಪಡಿಸಿದ್ದಾರೆ.



ಎಷ್ಟು ಜನ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ಪ್ರತ್ಯಕ್ಷದರ್ಶಿಗಳು  ದಾಳಿವೇಳೆ ಸಾಕಷ್ಟು ಜನರು ಸತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. “ಕಪ್ಪು ಬಟ್ಟೆ ಧರಿಸಿದ ವ್ಯಕ್ತಿಯೋರ್ವ ಗನ್​ ಹಿಡಿದುಕೊಂಡು ನಿಂತಿದ್ದ. ಸಾಕಷ್ಟು ಬಾರಿ ಗುಂಡಿನ ಮೊರೆತ ಕೇಳಿದೆ. ಸಾಕಷ್ಟು ಜನರು ಮೃತಪಟ್ಟ ಅನುಮಾನವಿದೆ,” ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.





First published:March 15, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626