ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು: ಸಂಸದೆ ಜಯಾ ಬಚ್ಚನ್ ಸಲಹೆ

ಮಹಿಳೆಯರ ಮೇಲಿನ ಅಪರಾಧ ಘಟನೆಗಳು ಹೆಚ್ಚಾಗುತ್ತಿರುವ ವಿಚಾರದ ಬಗ್ಗೆ ನಡೆದ ಚರ್ಚೆಯೊಂದರಲ್ಲಿ ಮಾತನಾಡುತ್ತಿದ್ದ ಜಯಾ ಬಚ್ಚನ್, ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ತಂದು ನಿಲ್ಲಿಸಿ ಥಳಿಸಬೇಕು ಎಂದು ಸರ್ಕಾರಕ್ಕೆ ಸಲೆ ನೀಡಿದ್ದಾರೆ.

Vijayasarthy SN | news18
Updated:December 2, 2019, 12:57 PM IST
ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು: ಸಂಸದೆ ಜಯಾ ಬಚ್ಚನ್ ಸಲಹೆ
ಜಯಾ ಬಚ್ಚನ್
  • News18
  • Last Updated: December 2, 2019, 12:57 PM IST
  • Share this:
ನವದೆಹಲಿ(ಡಿ. 02): ಇತ್ತೀಚೆಗೆ ಹೈದರಾಬಾದ್​ನಲ್ಲಿ ಸಂಭವಿಸಿದ ಪಶುವೈದ್ಯಯ ಭೀಕರ ಅತ್ಯಾಚಾರ ಕೊಲೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. 2012ರ ನಿರ್ಭಯಾ ಅತ್ಯಾಚಾರ ಘಟನೆಯ ನೆನಪು ಮರುಕಳಿಸುವಂತೆ ಮಾಡಿದೆ. ಅತ್ಯಾಚಾರ ವಿರುದ್ಧ ಹಲವು ಕಾನೂನುಗಳಿದ್ದರೂ ಘಟನೆಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಈ ಸಂದರ್ಭದಲ್ಲಿ ಅತ್ಯಾಚಾರ ಅಪರಾಧಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರು, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ವ್ಯವಸ್ಥೆ ಆಗಬೇಕು ಎಂದು ಕರೆ ನೀಡಿದ್ದಾರೆ.

ಮಹಿಳೆಯರ ಮೇಲಿನ ಅಪರಾಧ ಘಟನೆಗಳು ಹೆಚ್ಚಾಗುತ್ತಿರುವ ವಿಚಾರದ ಬಗ್ಗೆ ನಡೆದ ಚರ್ಚೆಯೊಂದರಲ್ಲಿ ಮಾತನಾಡುತ್ತಿದ್ದ ಜಯಾ ಬಚ್ಚನ್, ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ತಂದು ನಿಲ್ಲಿಸಿ ಥಳಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದೆಯಾಗಿ ಜಯಾ ಬಚ್ಚನ್ ಅವರು ಹಿಂಸಾತ್ಮಕ ಮಾರ್ಗಕ್ಕೆ ಕರೆ ಕೊಟ್ಟಿರುವುದಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್​ನಲ್ಲಿ ಕಳೆದ ವಾರದಂದು 26 ವರ್ಷದ ಪಶುವೈದ್ಯೆಯೊಬ್ಬರ ಮೇಲೆ ನಾಲ್ಕೈದು ಜನರು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆಗೈದಿದ್ದರು. ಆ ನತದೃಷ್ಟ ಮಹಿಳೆಯ ಟಯರ್ ಪಂಕ್ಚರ್ ಆದಾಗ ಸಹಾಯ ಮಾಡುವ ನೆವದಲ್ಲಿ ದುರುಳರು ಈ ಕೃತ್ಯ ಎಸಗಿದ್ದರು. ಈ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿ ನಿತ್ಯಾನಂದ ಶಿಷ್ಯರು ಅಹ್ಮದಾಬಾದ್​ ಆಶ್ರಮದಿಂದ ತೆರವು; ನೆಲೆ ಹುಡುಕಿ ಮತ್ತೆ ಬೆಂಗಳೂರಿಗೆ

ಈ ಘಟನೆಯು ಹೈದರಾಬಾದ್​ನಲ್ಲಿ ಜನಾಕ್ರೋಶವನ್ನು ಹೆಚ್ಚಿಸಿದೆ. ಆರೋಪಿಗಳನ್ನು ಪೊಲೀಸರು ಸಾಗಿಸುವ ಸಂದರ್ಭದಲ್ಲಿ ಜನರು ಆಕ್ರೋಶಭರಿತರಾಗಿ ಕಲ್ಲು ತೂರಾಟ ಮಾಡಿದ್ದರು. ಆರೋಪಿಗಳನ್ನು ಬಂಧಿಸಿಡಲಾಗಿರುವ ಪೊಲೀಸ್ ಠಾಣೆಯ ಹೊರಗೆ ಜನರು ಬೃಹತ್ ಪ್ರತಿಭಟನೆ ಕೂಡ ನಡೆಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತಿದ್ದ ಸಾರ್ವಜನಿಕರು, ಆರೋಪಿಗಳನ್ನು ಥಳಿಸಲು ಪೊಲೀಸ್ ಠಾಣೆಯೊಳಗೆ ನುಗ್ಗಲು ಯತ್ನಿಸಿದ್ದರು. ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾಯಿತು.

ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಅತ್ಯಾಚಾರ ಘಟನೆಯನ್ನು ನಿಯಂತ್ರಿಸಲು ಕಠಿಣ ಕಾನೂನುಗಳ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. “ಈಗಿರುವ ಹಲವು ಕಾನೂನುಗಳು ಅತ್ಯಾಚಾರಗಳನ್ನು ನಿಗ್ರಹಿಸಲು ಶಕ್ತವಾಗಿಲ್ಲ. ಈ ಪಿಡುಗನ್ನು ಬುಡದಲ್ಲೇ ಚಿವುಟಿ ಹಾಕಲು ಇಡೀ ದೇಶ ಒಂದಾಗಬೇಕಿದೆ. ಇಂಥ ಘಟನೆಯೇ ನಡೆಯದಂಥ ವಾತಾವರಣ ನಿರ್ಮಿಸಬೇಕಿದೆ. ಇನ್ನೂ ತೀವ್ರತರವಾದ ಶಿಕ್ಷೆ ಕೊಡಬೇಕಾಗುತ್ತದೆ” ಎಂದು ಗುಲಾಂ ನಬಿ ಅಭಿಪ್ರಾಯಪಟ್ಟಿದ್ದಾರೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published: December 2, 2019, 12:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading