ಸಿದ್ದರಾಮಯ್ಯ-ಸೋನಿಯಾ ಗಾಂಧಿ ಭೇಟಿ ಅಂತ್ಯ; ಲಿಂಗಾಯತ ಸಮುದಾಯದ ಎಂ.ಬಿ.ಪಾಟೀಲಗೆ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ

ಸಿದ್ದರಾಮಯ್ಯ ಅವರು ಡಿಕೆಶಿಗೆ ಬೆಂಬಲ ನೀಡದೆ ಎಂ.ಬಿ.ಪಾಟೀಲ್ ಅವರಿಗೆ ಅಧ್ಯಕ್ಷ ಸ್ಥಾನ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಬೀರಿದ್ದಾರೆ. ಹೈಕಮಾಂಡ್ ಸಿದ್ದರಾಮಯ್ಯ ಅವರ ಶಿಫಾರಸ್ಸಿಗೆ ಮಣೆ ಹಾಕುತ್ತದೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

HR Ramesh | news18-kannada
Updated:January 14, 2020, 6:22 PM IST
ಸಿದ್ದರಾಮಯ್ಯ-ಸೋನಿಯಾ ಗಾಂಧಿ ಭೇಟಿ ಅಂತ್ಯ; ಲಿಂಗಾಯತ ಸಮುದಾಯದ ಎಂ.ಬಿ.ಪಾಟೀಲಗೆ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ
ದೆಹಲಿಯಲ್ಲಿ ಸೋನಿಯಾ ಗಾಂಧಿ ಭೇಟಿ ಮಾಡಿದ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
  • Share this:
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಗಾದಿ ವಿಚಾರವಾಗಿ ಇಂದು ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮುಕ್ಕಾಲು ಗಂಟೆಗಳ ಕಾಲ ಚರ್ಚೆ ನಡೆಸಿದರು.

ಸೋನಿಯಾ ಗಾಂಧಿ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ. ಪಾಟೀಲ್ ಅವರ ಹೆಸರನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದಾರೆ. ಎಂಬಿ ಪಾಟೀಲ್ ಅವರಿಗೆ ಏಕೆ ಅಧ್ಯಕ್ಷ ಸ್ಥಾನ ನೀಡಬೇಕು, ಅದರಿಂದ ಪಕ್ಷಕ್ಕೆ ಆಗುವ ಅನುಕೂಲಗಳೇನು ಎಂಬುದನ್ನು ವಿವರಿಸಿದ್ದಾರೆ.

ಯಡಿಯೂರಪ್ಪ ಅವರನ್ನು ಎದುರಿಸಲು ಲಿಂಗಾಯತ ಅಧ್ಯಕ್ಷರಿದ್ದರೆ ಸೂಕ್ತ. ಅದರಲ್ಲೂ  ಉತ್ತರ ಕರ್ನಾಟಕದವರಾಗಿದ್ದರೆ ಇನ್ನೂ ಒಳ್ಳೆಯದು. ರಾಜ್ಯದಲ್ಲಿ ಬಿಜೆಪಿಯೇ ಕಾಂಗ್ರೆಸ್​ಗೆ ವೈರಿ. ಬಿಜೆಪಿಗೆ ಭದ್ರ ನೆಲೆ ಇರುವುದು ಉತ್ತರ ಕರ್ನಾಟಕದಲ್ಲಿ. ಜೊತೆಗೆ ಯಡಿಯೂರಪ್ಪ ಇರುವುದರಿಂದ ಲಿಂಗಾಯತ ಸಮುದಾಯ ಬಿಜೆಪಿ ಪರವಾಗಿ. ಈ ಎರಡೂ ದೃಷ್ಟಿಯಿಂದ ಉತ್ತರ ಕರ್ನಾಟಕದ ಲಿಂಗಾಯತರಿಗೆ ಪಕ್ಷದ ಅಧ್ಯಕ್ಷ ಗಾದಿ ಕೊಡಬೇಕು. ಎಂ.ಬಿ.‌ ಪಾಟೀಲ್ ಗೆ ಹಿರಿತನ, ಸಂಪನ್ಮೂಲ, ಜಾತಿ ಬಲಗಳು ಇವೆ. ಇತರೆ ಹಿರಿಯರು ಕೂಡ ಎಂಬಿಪಿಯನ್ನು ವಿರೋಧಿಸುವುದಿಲ್ಲ. ಬೇಕಿದ್ದರೆ ಇನ್ನೊಮೆ ಪರಮಾರ್ಶೆ ಮಾಡಿ ತೀರ್ಮಾನ ತೆಗೆದುಕೊಳ್ಳಿ.  ನನ್ನ ಅಭಿಪ್ರಾಯವನ್ನು ಖಚಿತವಾಗಿ ತಿಳಿಸಿದ್ದೇನೆ. ನೀವು ಯಾವುದೇ ತೀರ್ಮಾನ ತೆಗೆದುಕೊಂಡರು ಬದ್ದ ಎಂದು ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಬಳಿ ಹೇಳಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಹ ಉಪಸ್ಥಿತರಿದ್ದರು.

ಇದನ್ನು ಓದಿ: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕಸರತ್ತು: ದೆಹಲಿಯಲ್ಲಿ ಸಿದ್ದರಾಮಯ್ಯ; ಎಂಬಿ ಪಾಟೀಲ್​, ಡಿಕೆಶಿ? ಯಾರಿಗೆ ಪಟ್ಟ?

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣಿಟ್ಟಿದ್ದು, ತಮಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ, ಡಿಕೆಶಿಗೆ ಪಟ್ಟ ಕಟ್ಟಲು ಪಕ್ಷದ ಕೆಲ ಹಿರಿಯರಲ್ಲಿ ಅಸಮಾಧಾನ ಇದೆ. ಮುಖ್ಯವಾಗಿ ಸಿದ್ದರಾಮಯ್ಯ ಅವರು ಡಿಕೆಶಿಗೆ ಬೆಂಬಲ ನೀಡದೆ ಎಂ.ಬಿ.ಪಾಟೀಲ್ ಅವರಿಗೆ ಅಧ್ಯಕ್ಷ ಸ್ಥಾನ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಬೀರಿದ್ದಾರೆ. ಹೈಕಮಾಂಡ್ ಸಿದ್ದರಾಮಯ್ಯ ಅವರ ಶಿಫಾರಸ್ಸಿಗೆ ಮಣೆ ಹಾಕುತ್ತದೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
First published:January 14, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ