ಪಂಜಾಬಿ ಗಾಯಕ ಸಿಧು ಮೂಸೆ ವಾಲಾ (Sidhu Moose Wala) ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ರನ್ನು (Gangster Goldy Brar) ಅಮೆರಿಕಾದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. 2017ರಿಂದ ಕೆನಡಾದಲ್ಲಿ (Canada) ವಾಸವಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯ ಗೋಲ್ಡಿ ಬ್ರಾರ್ ಇತ್ತೀಚೆಗೆ ಕೆನಡಾದಿಂದ ಯುಎಸ್ಗೆ ತೆರಳಿದ್ದು ಬಂಧನದ ಬಗ್ಗೆ ಕ್ಯಾಲಿಫೋರ್ನಿಯಾದಿಂದ ಭಾರತ ಸರ್ಕಾರವು (Indian Government) ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ಸ್ವೀಕರಿಸಿಲ್ಲ.
ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಫ್ರೆಸ್ನೋ ನಗರದಲ್ಲಿ ವಾಸಿಸುತ್ತಿದ್ದ. ಸ್ಯಾಕ್ರಮೆಂಟೊ, ಫ್ರಿಜೋವ್ ಮತ್ತು ಸಾಲ್ಟ್ ಲೇಕ್ನಂತಹ ನಗರಗಳನ್ನು ತನ್ನ ಸುರಕ್ಷಿತ ನೆಲೆಯನ್ನಾಗಿ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ.
ಕಾಂಗ್ರೆಸ್ ನಾಯಕ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರನ್ನು ಭಾನುವಾರ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ಗುಂಡಿನ ದಾಳಿಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದರು. ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ಮೂಸೆವಾಲಾ ಸೇರಿದಂತೆ 424 ಜನರ ಭದ್ರತೆಯನ್ನು ಹಿಂತೆಗೆದುಕೊಂಡ ಕೇವಲ ಒಂದು ದಿನದ ನಂತರ ಈ ಭೀಕರ ಘಟನೆ ನಡೆದಿತ್ತು. ಪಂಜಾಬ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ್ದ ಜನಪ್ರಿಯ ಪಂಜಾಬಿ ಗಾಯಕ ಮತ್ತು ರಾಪರ್ ಸಿಧು ಮೂಸೆ ವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಮೂಸ್ ವಾಲಾ ಅವರು ಮಾನ್ಸಾದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ನಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅವರು ಎಎಪಿಯ ಡಾ ವಿಜಯ್ ಸಿಂಗ್ಲಾ ವಿರುದ್ಧ 63,323 ಮತಗಳ ಅಂತರದಿಂದ ಪರಾಭವಗೊಂಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ