SP Balasubrahmanyam Health: ಖ್ಯಾತ ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಅತಿ ಗಂಭೀರ

ಆಸ್ಪತ್ರೆ ಬಿಡುಗಡೆ ಮಾಡಿರುವ ಅವರ ಹೆಲ್ತ್​ ಬುಲೆಟಿನ್​ ನಲ್ಲಿ ಅವರ ಸ್ಥಿತಿ ಕೊಂಚ ಬಿಗಡಾಯಿಸಿದೆ ಎಂದಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಅವರ ಚಿಕಿತ್ಸೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

news18-kannada
Updated:September 25, 2020, 10:13 PM IST
SP Balasubrahmanyam Health: ಖ್ಯಾತ ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಅತಿ ಗಂಭೀರ
ಬಾಲಸುಬ್ರಹ್ಮಣ್ಯಂ
  • Share this:
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸ್ವರ ಸಂಗೀತ ಮೋಡಿಗಾರ ಎಸ್​.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಮತ್ತಷ್ಟು ಗಂಭೀರಗೊಂಡಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಆಗಸ್ಟ್​ 5ರಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಕೆಲ ದಿನಗಳ ಹಿಂದೆ ಚೇತರಿಕೆ ಕಂಡಿದ್ದರು. ಇಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಅವರ ಹೆಲ್ತ್​ ಬುಲೆಟಿನ್​ ನಲ್ಲಿ ಅವರ ಸ್ಥಿತಿ ಕೊಂಚ ಬಿಗಡಾಯಿಸಿದೆ ಎಂದಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಅವರ ಚಿಕಿತ್ಸೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಕಳೆದೆರಡು ದಿನಗಳ ಹಿಂದೆ ಎಸ್​ಪಿ ಬಿ ಆರೋಗ್ಯದ ಕುರಿತು ಮಾಹಿತಿ ನೀಡಿದ ಅವರ ಮಗ ಚರಣ್​, ತಂದೆ ಆರೋಗ್ಯ ಸುಧಾರಿಸುತ್ತಿದೆ ಎಂದಿದ್ದರು. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಅವರು ಸ್ಥಿರವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

SP Balasubrahmanyam Health is extremely critical
ಆಸ್ಪತ್ರೆ ಬಿಡುಗಡೆ ಮಾಡಿರುವ ಅವರ ಹೆಲ್ತ್​ ಬುಲೆಟಿನ್​


ಸೆ.7ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಎಸ್​ಪಿ ಅವರಿಗೆ ಸೋಂಕಿಲ್ಲ ಎಂಬುದಾಗಿ ವರದಿ ಬಂದಿತ್ತು. ಅವರ ಶ್ವಾಸಕೋಶ ಕೊಂಚ ಸುಧಾರಿಸುವ ಅವಶ್ಯಕತೆ ಇದೆ ಎಂದು ಚರಣ್​ ತಿಳಿಸಿದ್ದರು. ಅವರ ದೇಹಕ್ಕೆ ಕೃತಕ ಶ್ವಾಸಕೋಶದ ಮೂಲಕ ರಕ್ತಚಲನೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಕಳೆದವಾರ ಆಸ್ಪತ್ರೆಯಲ್ಲಿಯೇ ಅವರು ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಆಗಸ್ಟ್ 13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತಜ್ಞ ವೈದ್ಯರ ಸಲಹೆಯಂತೆ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಆಸ್ಪತ್ರೆಯ ಬೆಡ್​ ಮೇಲೆ ಮಲಗಿಯೇ ಥಮ್ಸ್​ ಅಪ್​ ತೋರಿದ್ದ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ ಮತ್ತೆ  ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
Published by: Seema R
First published: September 24, 2020, 7:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading