ನವದೆಹಲಿ: ಭಾರತೀಯ ಜನತಾ ಪಕ್ಷವು (BJP) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮನ್ ಕಿ ಬಾತ್ (Mann ki Baat) ಕಾರ್ಯಕ್ರಮ 100 ಸಂಚಿಕೆ ತಲುಪಲಿದೆ. ಈ ವಿಶೇಷ ಕಾರ್ಯಕ್ರಮ ಆಚರಿಸಲು 'ಮನ್ ಕಿ ಬಾತ್ @100' (Mann Ki Baat@100) ಹೆಸರಿನ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಲಿದೆ. ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪಿಎಂ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಕುಳಿತು ಕಾರ್ಯಕ್ರಮವನ್ನು ಕೇಳಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕರ್ನಾಟಕದಲ್ಲೇ ಇರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ( Home minister Amit Shah) ಮುಂಬೈನ ವಿಲೇ ಪಾರ್ಲೆಯಲ್ಲಿ ಮನ್ ಕಿ ಬಾತ್ 100 ನೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮತ್ತೊಬ್ಬ ಸಚಿವ ಪಿಯೂಷ್ ಗೋಯಲ್ (Piyush Goyal) ಕಾಂದಿವಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಿಂದಿನ ಸಂಚಿಕೆಗಳಲ್ಲಿ ಪ್ರಧಾನ ಮಂತ್ರಿಯಿಂದ (Narendra Modi) ಉಲ್ಲೇಖಿಸಿದ್ದ ದೇಶದ ವಿವಿಧ ಭಾಗಗಳಿಂದ ಸುಮಾರು 100 ಗೌರವಾನ್ವಿತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನಲ್ಲೇ ಕಾರ್ಯಕ್ರಮ ಕೇಳಲಿರುವ ಪ್ರಧಾನಿ ಮೋದಿ
ಕರ್ನಾಟದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ಮೋದಿ ಶನಿವಾರ ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಬೆಳಗ್ಗೆ ಅವರು ಚುನಾವಣಾ ಪ್ರಚಾರಕ್ಕೆ ಹೊರಡುವ ಮೊದಲು ರಾಜಭವನದಲ್ಲೇ ಮನ್ ಕೀ ಬಾತ್ನ 100ನೇ ಸಂಚಿಕೆ ಪ್ರಸಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಕೋಲಾರ, ಮೈಸೂರು, ಚನ್ನಪಟ್ಟಣಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದ ಹಿನ್ನಲೆ
ಮನ್ ಕಿ ಬಾತ್ ಕಾರ್ಯಕ್ರಮ ಅಕ್ಟೋಬರ್ 3, 2014 ರಂದು ಪ್ರಾರಂಭವಾದಾಯಿತು. ಪ್ರಧಾನಿ ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗವಹಿಸಲು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದ್ದಾರೆ. ಪ್ರತಿ ತಿಂಗಳು ವಿವಿಧ ಕ್ಷೇತ್ರದ ಸಾಧನೆಗಳು, ಕಹಿಘಟನೆ, ಸಂತೋಷ ಮತ್ತು ಹೆಮ್ಮೆಯ ಕ್ಷಣಗಳನ್ನು ಮತ್ತು ನವ ಭಾರತಕ್ಕಾಗಿ ಸಲಹೆಗಳನ್ನು ಮೋದಿ ಈ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳುತ್ತಿದ್ದಾರೆ.
100 ಗೌರವಾನ್ವಿತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗಿ
ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ಪ್ರಸಾರ ಭಾರತಿ ಸಮಾವೇಶವನ್ನು ಆಯೋಜಿಸಲಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಉಪಸ್ಥಿತಿಯಲ್ಲಿ ಉಪಾಧ್ಯಕ್ಷ ಜಗದೀಪ್ ಧನಕರ್ ಅವರು ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ನೆರವೇರಿಸಲಿದ್ದಾರೆ. "ಮನ್ ಕಿ ಬಾತ್" ನ ಹಿಂದಿನ ಸಂಚಿಕೆಗಳಲ್ಲಿ ಪ್ರಧಾನಿಯವರು ಹೆಸರು ಪ್ರಸ್ತಾಪಿಸಿರುವ ದೇಶದ ವಿವಿಧ ಭಾಗಗಳಿಂದ ಸುಮಾರು 100 ಗೌರವಾನ್ವಿತ ನಾಗರಿಕರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
ವಿಶ್ವಸಂಸ್ಥೆಯಲ್ಲಿ ನೇರಪ್ರಸಾರ
ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದ 100 ನೇ ಸಂಚಿಕೆ ಏಪ್ರಿಲ್ 30 ರಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿರುವ ಟ್ರಸ್ಟಿಶಿಪ್ ಕೌನ್ಸಿಲ್ ಚೇಂಬರ್‌ನಲ್ಲಿ ನೇರಪ್ರಸಾರ ಆಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಿದ್ಧರಾಗಿ ಎಂದು ಭಾರತದ ಖಾಯಂ ಆಯೋಗ ಟ್ವೀಟ್‌ನಲ್ಲಿ ತಿಳಿಸಿದೆ. ಭಾನುವಾರ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಭಾರತದಲ್ಲಿ ಪ್ರಸಾರವಾಗಲಿದೆ. ಅದು ಭಾನುವಾರ ಮಧ್ಯರಾತ್ರಿ 1:30 ಕ್ಕೆ ನ್ಯೂಯಾರ್ಕ್‌ನಲ್ಲಿ ಪ್ರಸಾರವಾಗಲಿದೆ.
4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಪ್ರಸಾರಕ್ಕೆ ಬಿಜೆಪಿ ಸಿದ್ಧತೆ
100ನೇ ಸಂಚಿಕೆಯ ಮನ್ ಕಿ ಬಾತ್ ಮನ್ ಕಿ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಲು ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಅದರಂತೆ ದೇಶಾದ್ಯಂತ ಸುಮಾರು 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರವಾಗಲಿದೆ. ಈಗಾಗಲೇ ಪಕ್ಷ ಎಲ್ಲಾ ಸಿದ್ಧತೆ ನಡೆಸಿದೆ.
ಪದ್ಮಶ್ರೀ ಪುರಸ್ಕೃತಿಗೆ ಆಹ್ವಾನ
ಈ ವಿಶೇಷ ಕಾರ್ಯಕ್ರಮಕ್ಕೆ ಎಲ್ಲಾ ರಾಜ್ಯಗಳ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ರಾಜಭವನದಲ್ಲಿ ಕಾರ್ಯಕ್ರಮವನ್ನು ಆಲಿಸಲು ಆಹ್ವಾನ ನೀಡಲಾಗಿದೆ. ಈ ಕುರಿತ ಸಿದ್ಧತೆಗಳನ್ನು ಬಿಜೆಪಿ ಸಂಸದರು ಮತ್ತು ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಇನ್ನು ಪ್ರತಿ ವಿಧಾನಸಭೆಯ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ಥಳೀಯ ಸಂಸದರು, ಶಾಸಕರು, ಇತರೆ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು, ಪಕ್ಷದ ಹಿರಿಯ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ