ನವದೆಹಲಿ(ಜ.04): ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪ್ರಕಾರ, ಸೋನಿಯಾ ಗಾಂಧಿ ಅವರು ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಮಯದ ಹಿಂದೆ ಸೋನಿಯಾ ಗಾಂಧಿ ಅವರು ತಮ್ಮ ಮಗ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಗೆ ಸೇರಿದ್ದರು, ಅದರಲ್ಲಿ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿಯವರ ಶೂಲೇಸ್ಗಳನ್ನು ಕಟ್ಟುತ್ತಿದ್ದ ಫೋಟೋ ಹಾಗೂ ವಿಡಿಯೋ ವೈರಲ್ ಆಗಿತ್ತು ಎಂಬುವುದು ಉಲ್ಲೇಖನೀಯ.
ಇದಾದ ಬಳಿಕ ದೆಹಲಿ ವೇದಿಕೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಾಯಿ ಸೋನಿಯಾ ಗಾಂಧಿ ಅವರೊಂದಿಗಿನ ಭಾವನಾತ್ಮಕ ಚಿತ್ರವನ್ನು ಹಂಚಿಕೊಂಡಿದ್ದರು. ಈ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದ ರಾಹುಲ್ ಗಾಂಧಿ, ನಾನು ನನ್ನ ತಾಯಿಯಿಂದ ಪಡೆದ ಪ್ರೀತಿಯನ್ನು ದೇಶದಲ್ಲಿ ಹರಡುತ್ತಿದ್ದೇನೆ ಎಂದು ಬರೆದಿದ್ದರು. ಸೆ.7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಈ ಯಾತ್ರೆ ಇದೀಗ ಯುಪಿ ತಲುಪಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ