ನವದೆಹಲಿ(ಡಿಸೆಂಬರ್. 02): ಕರ್ನಾಟಕ ಮೂಲದ ಬಿ ವಿ ಶ್ರೀನಿವಾಸ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಯುವ ಘಕದ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಯುವ ಘಟಕದ ಹಂಗಾಮಿ ಅಧ್ಯಕ್ಷರಾಗಿದ್ದ ಬಿ ವಿ ಶ್ರೀನಿವಾಸ್ ಅವರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಬಿ ವಿ ಶ್ರೀನಿವಾಸ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಯುವ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೆ ಅಂದಿನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಉತ್ತರ ಪ್ರದೇಶದ ಕೇಶವ್ ಚಾಂದ್ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಶ್ರೀನಿವಾಸ್ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ