National Herald Case: ಇಂದು ಮತ್ತೊಮ್ಮೆ ಸೋನಿಯಾ ಗಾಂಧಿಗೆ ಇಡಿ ವಿಚಾರಣೆ!

ಇದೇ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರ ಪುತ್ರ ಹಾಗೂ ಸಂಸದ ರಾಹುಲ್ ಗಾಂಧಿ ಅವರು ಜುಲೈ ‌21ರಂದು ತಮ್ಮ ತಾಯಿ ಸೋನಿಯಾ ಗಾಂಧಿ ಅವರನ್ನು ಇಡಿ ಕಚೇರಿಗೆ ಕರೆದೊಯ್ದ ಬಿಟ್ಟು ಬಂದಿದ್ದರು. ಇಂದು ಕೂಡ ತಾಯಿಯ ಜೊತೆ ಇಡಿ‌ ಕಚೇರಿವರೆಗೂ ಹೋಗಿ ಬಿಟ್ಟುಬರಲಿದ್ದಾರೆ.

ಸೋನಿಯಾ ಗಾಂಧಿ

ಸೋನಿಯಾ ಗಾಂಧಿ

  • Share this:
ದೆಹಲಿ(ಜು.26): ಜು. 21: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Money Laundering Case) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Congress Present Sonia Gandhi) ಅವರನ್ನು ಕಳೆದ ವಾರ (ಜುಲೈ 21ರಂದು) ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಮತ್ತೆ ಜುಲೈ 25ಕ್ಕೆ ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿ ಮಾಡಿದ್ದರು. ಆದರೆ ಮತ್ತೆ ದಿನಾಂಕ ಬದಲು ಮಾಡಿ ಜುಲೈ 26ಕ್ಕೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಇಡಿ ಅಧಿಕಾರಿಗಳ ಸೂಚನೆಯಂತೆ ಸೋನಿಯಾ ಗಾಂಧಿ ಅವರು ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿಬಂದಿದೆ. 

ತಾಯಿ ಸೋನಿಯಾಗೆ ಪ್ರಿಯಾಂಕಾ ಸಾಥ್

75 ವರ್ಷದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು "ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಕಟ್ಟುನಿಟ್ಟಾಗಿ ಸಲಹೆ ನೀಡಿದ್ದರು. ಜೂನ್ 2 ರಂದು ಸೋನಿಯಾ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದ್ದರು.

ಜುಲೈ 21ರಂದು ವಿಚಾರಣೆಗೆ ಹೋಗುವಾಗಲು ಅನಾರೋಗ್ಯದ ಕಾರಣಕ್ಕಾಗಿ ಮಗಳು ಪ್ರಿಯಾಂಕಾ ಗಾಂಧಿಯನ್ನು ಜೊತೆಯಲ್ಲಿ ಕರೆತರುವುದಾಗಿ ತಿಳಿಸಿದ್ದರು. ಇಡಿ ಅಧಿಕಾರಿಗಳು ಸಮ್ಮತಿ ನೀಡಿದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಇಡಿ ವಿಚಾರಣೆ ವೇಳೆ ಪ್ರಿಯಾಂಕಾ ಗಾಂಧಿ ಕೂಡ ಉಪಸ್ಥಿತರಿದ್ದರು. ಇಂದು ಕೂಡ ಪ್ರಿಯಾಂಕಾ ಗಾಂಧಿ ತಾಯಿಯ ಜೊತೆ ಇಡಿ ಕಚೇರಿಗೆ ತೆರಳಲಿದ್ದಾರೆ.

ಇಡಿ ಕಚೇರಿಗೆ ಬಿಟ್ಟು ಬಂದ ರಾಹುಲ್ ಗಾಂಧಿ

ಇದೇ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರ ಪುತ್ರ ಹಾಗೂ ಸಂಸದ ರಾಹುಲ್ ಗಾಂಧಿ ಅವರು ಕಳೆದ ತಿಂಗಳು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ರಾಹುಲ್ ಗಾಂಧಿ ಅವರು ಒಟ್ಟು 54 ಗಂಟೆ ವಿಚಾರಣೆ ಎದುರಿಸಿದ್ದಾರೆ. ರಾಹುಲ್ ಗಾಂಧಿ ಅವರು ಜುಲೈ ‌21ರಂದು ತಮ್ಮ ತಾಯಿ ಸೋನಿಯಾ ಗಾಂಧಿ ಅವರನ್ನು ಇಡಿ ಕಚೇರಿಗೆ ಕರೆದೊಯ್ದ ಬಿಟ್ಟು ಬಂದಿದ್ದರು. ಇಂದು ಕೂಡ ತಾಯಿಯ ಜೊತೆ ಇಡಿ‌ ಕಚೇರಿವರೆಗೂ ಹೋಗಿ ಬಿಟ್ಟುಬರಲಿದ್ದಾರೆ ಎಂದು ಗೊತ್ತಾಗಿದೆ.

Sonia Gandhi Will not Appear Before Enforcement Directorate Today as she tested positive for COVID19
ಸೋನಿಯಾ ಗಾಂಧಿ


ಕಳೆದ ವಾರ 3 ಗಂಟೆ ವಿಚಾರಣೆ

ಸೋನಿಯಾ ಗಾಂಧಿ ಅವರನ್ನು ಸುಮಾರು 3 ಗಂಟೆಗಳ ಕಾಲ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಖಜಾಂಚಿ ಪವನ್ ಕುಮಾರ್ ಬನ್ಸಾಲ್ ಅವರನ್ನೂ ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ಇದನ್ನೂ ಓದಿ: CRZ ವಿಸ್ತರಣೆಯಿಂದ ಕರಾವಳಿ ಪ್ರದೇಶದ ಅಭಿವೃದ್ಧಿ; ಸಿಎಂ ಬೊಮ್ಮಾಯಿ ಭರವಸೆ

ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?

2016 ರಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿದ್ದ ಆದಾಯ ತೆರಿಗೆ ಇಲಾಖೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್ ಪ್ರವರ್ತಿತ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಸೋನಿಯಾ ಗಾಂಧಿ ಮತ್ತು ಅವರ ಮಗ ಯಂಗ್ ಇಂಡಿಯನ್‌ನ ಪ್ರವರ್ತಕರು ಮತ್ತು ಬಹುಪಾಲು ಷೇರುದಾರರಲ್ಲಿ ಸೇರಿದ್ದಾರೆ ಮತ್ತು ಪ್ರತಿಯೊಬ್ಬರೂ ಕಂಪನಿಯಲ್ಲಿ 38 ಪ್ರತಿಶತ ಪಾಲನ್ನು ಹೊಂದಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮೇಕೆದಾಟು ವಿಚಾರಣೆ, ತಮಿಳುನಾಡು ತೀವ್ರ ವಿರೋಧ

ಸುಬ್ರಮಣಿಯನ್ ಸ್ವಾಮಿ ನೀಡಿದ್ದ ದೂರು

2013 ರಲ್ಲಿ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ದೆಹಲಿಯ ವಿಚಾರಣಾ ನ್ಯಾಯಾಲಯವು ಯಂಗ್ ಇಂಡಿಯನ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ಗಮನಕ್ಕೆ ತೆಗೆದುಕೊಂಡ ನಂತರ ಇಡಿ ಪಿಎಂಎಲ್‌ಎಯ ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿರುವುದರಿಂದ ಗಾಂಧಿ ಕುಟುಂಬವನ್ನು ತನಿಖೆ ಮಾಡಲಾಗುತ್ತಿದೆ.
Published by:Divya D
First published: