• Home
  • »
  • News
  • »
  • national-international
  • »
  • National Herald Case: ಇಂದು ಇಡಿ‌ ವಿಚಾರಣೆಗೆ ಹಾಜರಾಗಲಿರುವ ಸೋನಿಯಾ ಗಾಂಧಿ

National Herald Case: ಇಂದು ಇಡಿ‌ ವಿಚಾರಣೆಗೆ ಹಾಜರಾಗಲಿರುವ ಸೋನಿಯಾ ಗಾಂಧಿ

ಸೋನಿಯಾ ಗಾಂಧಿ

ಸೋನಿಯಾ ಗಾಂಧಿ

ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಒಟ್ಟು 54 ಗಂಟೆ ವಿಚಾರಣೆ ಎದುರಿಸಿದ್ದಾರೆ. ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಖಜಾಂಚಿ ಪವನ್ ಕುಮಾರ್ ಬನ್ಸಾಲ್ ಅವರೂ ವಿಚಾರಣೆಗೆ ಒಳಗಾಗಿದ್ದರು. ಈಗ ಸೋನಿಯಾ ಗಾಂಧಿ ಅವರ ಸರದಿಯಾಗಿದೆ.

  • Share this:

ದೆಹಲಿ(ಜು. 21): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Money Laundering Case) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Congress President Sonia Gandhi) ಅವರಿಗೆ ಜಾರಿ ನಿರ್ದೇಶನಾಲಯ (Enforcement Directorate) ಜುಲೈ 12ರಂದು ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿ ಮಾಡಿದ್ದು ಇಂದು ಕಾಂಗ್ರೆಸ್ ಪಕ್ಷದ ಉನ್ನತ ನಾಯಕಿ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ಬರುವಂತೆ ಜೂನ್ ತಿಂಗಳಲ್ಲೇ ತಿಳಿಸಲಾಗಿತ್ತು. ಅವರಿಗೆ ಕೋವಿಡ್ ಪಾಸಿಟಿವ್ (Covid Positive) ಬಂದ ಕಾರಣದಿಂದ ಈಗ ವಿಚಾರಣೆಗೆ ಹಾಜರಾಗುತ್ತಿದ್ದಾರೆ.


ವಿಚಾರಣೆಗೆ ವಿನಾಯಿತಿ ಕೇಳಿ ಪತ್ರ ಬರೆದಿದ್ದ ಸೋನಿಯಾ


75 ವರ್ಷದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು "ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಕಟ್ಟುನಿಟ್ಟಾಗಿ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಮಗೆ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಸಮಯವನ್ನು ಕೋಡಿ" ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಜೂನ್ 2 ರಂದು ಸೋನಿಯಾ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದ್ದರು.


ವಿಶ್ರಾಂತಿಗೆ ಸೂಚಿಸಿದ್ದ ವೈದ್ಯರು


ಬಳಿಕ ಜೂನ್ 12 ರಂದು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆಗ ವೈದ್ಯರು ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ಸೂಚನೆ ನೀಡಿದ್ದರು.‌ ವೈದ್ಯರು ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸೋನಿಯಾ ಇನ್ನಷ್ಟು ಸಮಯ ಕೋರಿದ್ದರು.


GST Hike: ಸಣ್ಣಪುಟ್ಟ ಅಂಗಡಿಗಳ ಸರಕು ಸಾಮಾಗ್ರಿ ಮೇಲೆ ಜಿಎಸ್‍ಟಿ ಹೇರಲ್ಲ, ಕೇರಳ ಸರ್ಕಾರ ಘೋಷಣೆ


ಇದೇ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರ ಪುತ್ರ ಹಾಗೂ ಸಂಸದ ರಾಹುಲ್ ಗಾಂಧಿ ಅವರು ಕಳೆದ ತಿಂಗಳು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ರಾಹುಲ್ ಗಾಂಧಿ ಅವರು ಒಟ್ಟು 54 ಗಂಟೆ ವಿಚಾರಣೆ ಎದುರಿಸಿದ್ದಾರೆ.


rahul gandhi will be heard tomorrow by the ed
ಇಡಿ ವಿಚಾರಣೆಗೆ ಒಳಗಾದ ರಾಹುಲ್ ಗಾಂಧಿ


ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಖಜಾಂಚಿ ಪವನ್ ಕುಮಾರ್ ಬನ್ಸಾಲ್ ಅವರನ್ನೂ ಇಡಿ ಅಧಿಕಾರಿಗಳು ವಿಚಾರಣೆಗರ ಒಳಪಡಿಸಿದ್ದಾರೆ. ಈಗ ಸೋನಿಯಾ ಗಾಂಧಿ ಅವರ ಸರದಿಯಾಗಿದೆ.


ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?


2016 ರಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿದ್ದ ಆದಾಯ ತೆರಿಗೆ ಇಲಾಖೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್ ಪ್ರವರ್ತಿತ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಸೋನಿಯಾ ಗಾಂಧಿ ಮತ್ತು ಅವರ ಮಗ ಯಂಗ್ ಇಂಡಿಯನ್‌ನ ಪ್ರವರ್ತಕರು ಮತ್ತು ಬಹುಪಾಲು ಷೇರುದಾರರಲ್ಲಿ ಸೇರಿದ್ದಾರೆ ಮತ್ತು ಪ್ರತಿಯೊಬ್ಬರೂ ಕಂಪನಿಯಲ್ಲಿ 38 ಪ್ರತಿಶತ ಪಾಲನ್ನು ಹೊಂದಿದ್ದಾರೆ.


ಇದನ್ನೂ ಓದಿ: Rishi Sunak: ಅತ್ತೆ-ಮಾವನ ಜೀವನದ ಪ್ರಯಾಣದ ಬಗ್ಗೆ ತುಂಬಾನೇ ಹೆಮ್ಮೆ ಪಡುತ್ತಾರಂತೆ ರಿಷಿ ಸುನಕ್


ಸುಬ್ರಮಣಿಯನ್ ಸ್ವಾಮಿ ನೀಡಿದ್ದ ದೂರು


2013 ರಲ್ಲಿ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ದೆಹಲಿಯ ವಿಚಾರಣಾ ನ್ಯಾಯಾಲಯವು ಯಂಗ್ ಇಂಡಿಯನ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ಗಮನಕ್ಕೆ ತೆಗೆದುಕೊಂಡ ನಂತರ ಇಡಿ ಪಿಎಂಎಲ್‌ಎಯ ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿರುವುದರಿಂದ ಗಾಂಧಿ ಕುಟುಂಬವನ್ನು ತನಿಖೆ ಮಾಡಲಾಗುತ್ತಿದೆ.

Published by:Divya D
First published: