• Home
  • »
  • News
  • »
  • national-international
  • »
  • National Herald Case: ಇಂದು ED ವಿಚಾರಣೆಗೆ ಹಾಜರಾಗ್ತಾರಾ ಸೋನಿಯಾ ಗಾಂಧಿ?

National Herald Case: ಇಂದು ED ವಿಚಾರಣೆಗೆ ಹಾಜರಾಗ್ತಾರಾ ಸೋನಿಯಾ ಗಾಂಧಿ?

ಸೋನಿಯಾ ಗಾಂಧಿ

ಸೋನಿಯಾ ಗಾಂಧಿ

ವಕೀಲರು ಇಡಿ‌ ಅಧಿಕಾರಿಗಳಿಗೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಬಗ್ಗೆ ತಿಳಿಸುವ ಸಾಧ್ಯತೆ ಇದೆ. 'ತಾನು ಇಂದಿರಾ ಗಾಂಧಿಯ ಸೊಸೆ, ಹೆದರುವ ಪ್ರಶ್ನೆಯೇ ಇಲ್ಲ' ಎಂಬ ಸೋನಿಯಾ ಗಾಂಧಿ ಹೇಳಿಕೆ ಇತ್ತೀಚೆಗೆ ವೈರಲ್ ಆಗಿದ್ದನ್ನು ಸ್ಮರಿಸಬಹುದು.

  • Share this:

ದೆಹಲಿ(ಜೂ. 08): ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಇಡುಮಾಡುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ( Congress president Sonia Gandhi) ಅವರಿಗೆ ಜೂನ್ 8ರಂದು ಹಾಗೂ ಅವರ ಪುತ್ರ ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಜೂನ್ 8ಕ್ಕೂ ಮೊದಲೇ ಫೆಡರಲ್ ಏಜೆನ್ಸಿಯ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಆದರೆ ಕೋವಿಡ್ ಪಾಸಿಟಿವ್ (Covid Positive)ಗೆ ಒಳಗಾಗಿರುವ ಸೋನಿಯಾ ಗಾಂಧಿ ಅವರು ಇಂದು ವಿಚಾರಣೆಗೆ ಹಾಜರಾಗುತ್ತಾರಾ? ಅಥವಾ ಕೋವಿಡ್ ಕಾರಣಕ್ಕೆ ವಿನಾಯಿತಿ ಪಡೆಯುತ್ತಾರೋ ಎಂಬ ಅನುಮಾನ ಶುರುವಾಗಿದೆ.


ಯಂಗ್ ಇಂಡಿಯನ್ ‌ಅಕ್ರಮ ಸಂಬಂಧ ದೂರು ದಾಖಲು


ಕಾಂಗ್ರೆಸ್ ಪಕ್ಷ, ವಿಶೇಷವಾಗಿ ಅದರ ಅಧ್ಯಕ್ಷೆಯಾದ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್ ಸಂಸ್ಥೆಯಲ್ಲಿ ಪಾಲುದಾರರಾಗಿದ್ದಾರೆ. ಯಂಗ್ ಇಂಡಿಯನ್ ಸಂಸ್ಥೆಯು ಹಣಕಾಸು ಅಕ್ರಮಗಳನ್ನು ನಡೆಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲು ಮಾಡಿಕೊಂಡಿದೆ. ಇದೇ ಹಿನ್ನೆಲೆಯಲ್ಲಿ ಜೂನ್ 1ರಂದು ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.


ಕೋವಿಡ್ ಕಾರಣದಿಂದ ಸೋನಿಯಾ ವಿಚಾರಣೆ ಅನುಮಾನ


ಸೋನಿಯಾ ಗಾಂಧಿ ಅವರನ್ನು ಜೂನ್ 8 ರಂದು ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗುವಂತೆ ಕೇಳಲಾಗಿದ್ದು, ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಗುಣಮುಖರಾದ ಬಳಿಕ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದರು.


ಈ ಹಿನ್ನೆಲೆಯಲ್ಲಿ ಇಂದು ಸೋನಿಯಾ ಗಾಂಧಿ ಅವರು ಇಡಿ‌ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದು ಅನುಮಾನವಾಗಿದೆ. ಅವರ ಪರ ವಕೀಲರು ಇಡಿ‌ ಅಧಿಕಾರಿಗಳಿಗೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಬಗ್ಗೆ ತಿಳಿಸುವ ಸಾಧ್ಯತೆ ಇದೆ. 'ತಾನು ಇಂದಿರಾ ಗಾಂಧಿಯ ಸೊಸೆ, ಹೆದರುವ ಪ್ರಶ್ನೆಯೇ ಇಲ್ಲ' ಎಂಬ ಸೋನಿಯಾ ಗಾಂಧಿ ಹೇಳಿಕೆ ಇತ್ತೀಚೆಗೆ ವೈರಲ್ ಆಗಿದ್ದನ್ನು ಸ್ಮರಿಸಬಹುದು.


ರಾಹುಲ್ ಗಾಂಧಿಗೂ ಸಮನ್ಸ್


ಜೂನ್ 1ರಂದು ಸೋನಿಯಾ ಗಾಂಧಿ ಅವರಿಗೂ ಸಮನ್ಸ್ ನೀಡಿದ್ದ ಇಡಿ ಅಧಿಕಾರಿಗಳು ಜೂನ್ 8ಕ್ಕೂ ಮೊದಲೇ ದೆಹಲಿಯ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು.


ಇದನ್ನೂ ಓದಿ: Tirupati: ಮತ್ತಷ್ಟು ಶ್ರೀಮಂತನಾದ ಕಲಿಯುಗದ ಸಾಕ್ಷಾತ್ ದೈವ, ತಿಮ್ಮಪ್ಪನ ಹುಂಡಿಯಲ್ಲಿ ಒಂದೇ ದಿನ 10 ಕೋಟಿ ಸಂಗ್ರಹ!


ಇದಕ್ಕೆ ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಲ್ಲಿದ್ದು ದೇಶಕ್ಕೆ ವಾಪಸ್ ಆದ ಬಳಿಕ ಅವರು ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಪ್ರತಿಕ್ರಿಯಿಸಿದ್ದರು. ಬಳಿಕ ರಾಹುಲ್ ಗಾಂಧಿ ಅವರಿಗೆ ಜುಲೈ 13ರಂದು ವಿಚಾರಣೆಗೆ ಬರುವಂತೆ ಹೊಸ ಸಮನ್ಸ್ ನೀಡಲಾಗಿತ್ತು.


ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್


ಯಂಗ್ ಇಂಡಿಯನ್‌ನಲ್ಲಿ ನಡೆದಿರುವ ಹಣಕಾಸು ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದ್ದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಇತ್ತೀಚೆಗೆ ಹಿರಿಯ ನಾಯಕರೂ ಆದ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಖಜಾಂಚಿ ಪವನ್ ಬನ್ಸಲ್ ಅವರಿಗೂ ಸಮನ್ಸ್ ನೀಡಲಾಗಿತ್ತು.


ಸುಬ್ರಮಣಿಯನ್ ಸ್ವಾಮಿ ದಾಖಲಿದ್ದ ಪ್ರಕರಣ


2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆದಾಯ ತೆರಿಗೆ ಇಲಾಖೆ ತನಿಖೆಯನ್ನು ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು.


ಇದನ್ನೂ ಓದಿ: Skeletons of soldiers: ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹತರಾದ ಸಿಪಾಯಿಗಳ ಅಸ್ಥಿಪಂಜರಗಳು ಪತ್ತೆ!


ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಕಾಂಗ್ರೆಸ್‌ಗೆ ನೀಡಬೇಕಿದ್ದ 90.25 ಕೋಟಿ ರೂ.ಗಳನ್ನು ವಸೂಲಿ ಮಾಡುವ ಹಕ್ಕನ್ನು ಪಡೆಯಲು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕೇವಲ 50 ಲಕ್ಷ ರೂಪಾಯಿಗಳನ್ನು ಪಾವತಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಆರೋಪಿಸಿದ್ದರು.

Published by:Divya D
First published: