HOME » NEWS » National-international » SOUTH WESTERN RAILWAY RECRUITMENT 21 APPLY FOR SOUTH WESTERN RAILWAY JOBS HG

South Western Railway Recruitment 2020; 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ!

South Western Railway Jobs: 10ನೇ ತರಗತಿ, 12ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

news18-kannada
Updated:November 30, 2020, 5:10 PM IST
South Western Railway Recruitment 2020; 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ!
ಸಾಂದರ್ಭಿಕ ಚಿತ್ರ
  • Share this:
ನೈಋತ್ಯ ರೈಲ್ವೆ 2020-21ನೇ ಸಾಲಿನ ಕ್ರೀಡಾ ಕೋಟಾದಡಿ ಬರುವ ಗುಂಪು 'ಸಿ' ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲು 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್ 28,2020 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:

10ನೇ ತರಗತಿ, 12ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಜನವರಿ 1, 2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200 ರಿಂದ 20,200ರೂ ವೇತನವನ್ನು ಸಿಗಲಿದೆ.ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಹೇಗೆ?:

ದೈಹಿಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ಅಧಿಕೃತ ವೆಬ್‌ಸೈಟ್ https://swr.indianrailways.gov.in/ ಮತ್ತು https://www.rrchubli.in/ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿ ಸಲ್ಲಿಸಲು ತಿಳಿಸಿದೆ. ಡಿಸೆಂಬರ್ 28,2020ರೊಳಗೆ ಅರ್ಜಿ ಸಲ್ಲಿಸಲು ಕೊನರಯ ದಿನಾಂಕವಾಗಿದೆ.
Published by: Harshith AS
First published: November 30, 2020, 5:10 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories